IPL 2023: LSG vs MI ಪಂದ್ಯದಲ್ಲಿ RCB ಪಾಲಿಗೆ ಯಾರು ಗೆಲ್ಲಬೇಕು? ಇಲ್ಲಿದೆ ಮಾಹಿತಿ
IPL 2023 Kannada: ಒಂದು ವೇಳೆ ಲಕ್ನೋ ಸೂಪರ್ ಜೈಂಟ್ಸ್ ಗೆದ್ದರೆ 15 ಪಾಯಿಂಟ್ಸ್ನೊಂದಿಗೆ ಅಂಕಪಟ್ಟಿಯಲ್ಲಿ 4ನೇ ಸ್ಥಾನ ಅಲಂಕರಿಸಲಿದೆ. ಅಲ್ಲದೆ ತನ್ನ ಕೊನೆಯ ಪಂದ್ಯವನ್ನು ಗೆದ್ದು 17 ಪಾಯಿಂಟ್ಸ್ನೊಂದಿಗೆ ಪ್ಲೇಆಫ್ ಪ್ರವೇಶಿಸಬಹುದು.
Updated on: May 16, 2023 | 3:56 PM

IPL 2023: ಐಪಿಎಲ್ನ 63ನೇ ಪಂದ್ಯದಲ್ಲಿ ಲಕ್ನೋ ಸೂಪರ್ ಜೈಂಟ್ಸ್ ಹಾಗೂ ಮುಂಬೈ ಇಂಡಿಯನ್ಸ್ ತಂಡಗಳು ಮುಖಾಮುಖಿಯಾಗಲಿದೆ. ಅಂಕ ಪಟ್ಟಿಯಲ್ಲಿ 3ನೇ ಹಾಗೂ 4ನೇ ಸ್ಥಾನಗಳಲ್ಲಿರುವ ಈ ತಂಡಗಳ ಮುಖಾಮುಖಿಯನ್ನು ಆರ್ಸಿಬಿ ಕೂಡ ಎದುರು ನೋಡುತ್ತಿದೆ.

ಏಕೆಂದರೆ ಈ ಪಂದ್ಯದಲ್ಲಿ ಸೋಲುವ ತಂಡವೇ ಆರ್ಸಿಬಿ ಪಾಲಿಗೆ ಪ್ಲೇಆಫ್ ರೇಸ್ನಲ್ಲಿನ ಎದುರಾಳಿ. ಅಂದರೆ ಇಲ್ಲಿ 14 ಪಾಯಿಂಟ್ಸ್ ಹೊಂದಿರುವ ಮುಂಬೈ ಇಂಡಿಯನ್ಸ್ ಇಂದು ಗೆದ್ದರೆ 16 ಪಾಯಿಂಟ್ಸ್ನೊಂದಿಗೆ ಪ್ಲೇಆಫ್ ಪ್ರವೇಶವನ್ನು ಬಹುತೇಕ ಖಚಿತಪಡಿಸಿಕೊಳ್ಳಲಿದೆ.

ಒಂದು ವೇಳೆ ಲಕ್ನೋ ಸೂಪರ್ ಜೈಂಟ್ಸ್ ಗೆದ್ದರೆ 15 ಪಾಯಿಂಟ್ಸ್ನೊಂದಿಗೆ ಅಂಕಪಟ್ಟಿಯಲ್ಲಿ 4ನೇ ಸ್ಥಾನ ಅಲಂಕರಿಸಲಿದೆ. ಅಲ್ಲದೆ ತನ್ನ ಕೊನೆಯ ಪಂದ್ಯವನ್ನು ಗೆದ್ದು 17 ಪಾಯಿಂಟ್ಸ್ನೊಂದಿಗೆ ಪ್ಲೇಆಫ್ ಪ್ರವೇಶಿಸಬಹುದು.

ಆದರೆ ಇಂದು ಮುಂಬೈ ಇಂಡಿಯನ್ಸ್ ಗೆದ್ದರೆ ಆರ್ಸಿಬಿಗೆ ಲಾಭವೇ ಹೆಚ್ಚು. ಏಕೆಂದರೆ ಮುಂಬೈ ಇಂಡಿಯನ್ಸ್ ವಿರುದ್ಧ ಲಕ್ನೋ ಸೂಪರ್ ಜೈಂಟ್ಸ್ ಸೋತು, ಮುಂದಿನ ಪಂದ್ಯವನ್ನು ಗೆದ್ದರೂ ಒಟ್ಟು 15 ಅಂಕಗಳನ್ನು ಮಾತ್ರ ಪಡೆಯಲಿದೆ.

ಇತ್ತ ಆರ್ಸಿಬಿ ತನ್ನ ಕೊನೆಯ ಎರಡು ಪಂದ್ಯಗಳಲ್ಲಿ ಭರ್ಜರಿ ಜಯ ಸಾಧಿಸಿ ಒಟ್ಟು 16 ಅಂಕಗಳೊಂದಿಗೆ ಲಕ್ನೋ ತಂಡವನ್ನು ಹಿಂದಿಕ್ಕಿ ಪ್ಲೇಆಫ್ ಪ್ರವೇಶಿಸಲು ಉತ್ತಮ ಅವಕಾಶ ದೊರೆಯಲಿದೆ. ಹೀಗಾಗಿಯೇ ಆರ್ಸಿಬಿ ಪಾಲಿಗೆ ಇಂದು ಮುಂಬೈ ಇಂಡಿಯನ್ಸ್ ಗೆಲ್ಲಬೇಕು.

ಒಂದು ವೇಳೆ ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧ ಮುಂಬೈ ಇಂಡಿಯನ್ಸ್ ಸೋತು, ಕೊನೆಯ ಪಂದ್ಯದಲ್ಲಿ ಗೆದ್ದರೆ ರೋಹಿತ್ ಶರ್ಮಾ ಪಡೆ ಒಟ್ಟು 16 ಅಂಕಗಳನ್ನು ಪಡೆಯಲಿದೆ. ಇದರಿಂದ ಆರ್ಸಿಬಿ ಹಾಗೂ ಮುಂಬೈ ಇಂಡಿಯನ್ಸ್ ನಡುವೆ ನೆಟ್ ರನ್ ರೇಟ್ ಪೈಪೋಟಿ ಎದುರಾಗಲಿದೆ.

ಹೀಗಾಗಿ ಲಕ್ನೋನ ಏಕಾನ ಸ್ಟೇಡಿಯಂನಲ್ಲಿ ನಡೆಯಲಿರುವ ಇಂದಿನ ಪಂದ್ಯದಲ್ಲಿ ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧ ಮುಂಬೈ ಇಂಡಿಯನ್ಸ್ ಗೆದ್ದರೆ, ಆರ್ಸಿಬಿ ತಂಡದ ಪ್ಲೇಆಫ್ ಹಾದಿ ಮತ್ತಷ್ಟು ಸುಗಮವಾಗಲಿದೆ.



















