IPL 2023: MI ವಿರುದ್ಧ RCB ಗೆ ಯಾಕೆ ಗೆಲುವು ಕಷ್ಟ..ವಾಂಖೆಡೆಯಲ್ಲಿ ಯಾರು ಬಲಿಷ್ಠ?

IPL 2023 Kannada: RCB ತಂಡ: ವಿರಾಟ್ ಕೊಹ್ಲಿ, ಫಾಫ್ ಡು ಪ್ಲೆಸಿಸ್ (ನಾಯಕ), ಅನುಜ್ ರಾವತ್, ಗ್ಲೆನ್ ಮ್ಯಾಕ್ಸ್‌ವೆಲ್, ಮಹಿಪಾಲ್ ಲೊಮ್ರೋರ್, ದಿನೇಶ್ ಕಾರ್ತಿಕ್ (ವಿಕೆಟ್ ಕೀಪರ್), ಸುಯಶ್ ಪ್ರಭುದೇಸಾಯಿ, ವನಿಂದು ಹಸರಂಗ, ಕರ್ಣ್ ಶರ್ಮಾ, ಮೊಹಮ್ಮದ್ ಸಿರಾಜ್, ಜೋಶ್ ಹ್ಯಾಝಲ್‌ವುಡ್, ಹರ್ಷಲ್ ಪಟೇಲ್ , ಸಿದ್ದಾರ್ಥ್ ಕೌಲ್, ಕೇದಾರ್ ಜಾಧವ್, ಮೈಕೆಲ್ ಬ್ರೇಸ್ವೆಲ್, ವೈಶಾಕ್ ವಿಜಯಕುಮಾರ್, ಫಿನ್ ಅಲೆನ್.

TV9 Web
| Updated By: ಝಾಹಿರ್ ಯೂಸುಫ್

Updated on:May 08, 2023 | 11:26 PM

IPL 2023: ಐಪಿಎಲ್​ನ ಮತ್ತೊಂದು ಮದಗಜಗಳ ಕಾಳಗಕ್ಕೆ ವೇದಿಕೆ ಸಿದ್ಧವಾಗಿದೆ. ಮೇ 9 ರಂದು ನಡೆಯಲಿರುವ ಹೈವೋಲ್ಟೇಜ್​ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ಹಾಗೂ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಗಳು ಮುಖಾಮುಖಿಯಾಗಲಿದೆ.

1 / 10
ವಾಂಖೆಡೆ ಮೈದಾನದಲ್ಲಿ ಈ ಪಂದ್ಯ ನಡೆಯುತ್ತಿರುವುದು ಮುಂಬೈ ಇಂಡಿಯನ್ಸ್ ತಂಡಕ್ಕೆ ಪ್ಲಸ್ ಪಾಯಿಂಟ್. ಏಕೆಂದರೆ ವಾಂಖೆಡೆ ಪಿಚ್ ಮುಂಬೈ ತಂಡದ ತವರು ಮೈದಾನ. ಇಲ್ಲಿ ಕಣಕ್ಕಿಳಿದಿರುವ ಬಹುತೇಕ ಪಂದ್ಯಗಳನ್ನು ರೋಹಿತ್ ಶರ್ಮಾ ಪಡೆ ಗೆಲುವು ದಾಖಲಿಸಿದೆ.

2 / 10
ವಾಂಖೆಡೆ ಸ್ಟೇಡಿಯಂನಲ್ಲಿ ಮುಂಬೈ ಇಂಡಿಯನ್ಸ್ ಇದುವರೆಗೆ ಒಟ್ಟು 75 ಪಂದ್ಯಗಳನ್ನಾಡಿದೆ. ಇದರಲ್ಲಿ 45 ಪಂದ್ಯಗಳಲ್ಲಿ ಗೆಲುವು ದಾಖಲಿಸಿದೆ. ಇನ್ನು ಸೋತಿರುವುದು ಕೇವಲ 29 ಪಂದ್ಯಗಳಲ್ಲಿ ಮಾತ್ರ. ಹಾಗೆಯೇ ಒಂದು ಪಂದ್ಯ ರದ್ದಾಗಿತ್ತು.

3 / 10
ಅದೇ ಆರ್​ಸಿಬಿ ತಂಡವು ವಾಂಖೆಡೆ ಸ್ಟೇಡಿಯಂನಲ್ಲಿ 16 ಪಂದ್ಯಗಳನ್ನಾಡಿದ್ದು, ಈ ವೇಳೆ 8 ಪಂದ್ಯಗಳಲ್ಲಿ ಜಯ ಸಾಧಿಸಿದರೆ, 8 ಮ್ಯಾಚ್​ಗಳಲ್ಲಿ ಸೋಲನುಭವಿಸಿತ್ತು.

4 / 10
ಇನ್ನು ಇದೇ ಮೈದಾನದಲ್ಲಿ ಆರ್​ಸಿಬಿ ಹಾಗೂ ಮುಂಬೈ ಇಂಡಿಯನ್ಸ್ ತಂಡಗಳು 9 ಬಾರಿ ಮುಖಾಮುಖಿಯಾಗಿದೆ. ಈ ವೇಳೆ ಆರ್​ಸಿಬಿ ಗೆದ್ದಿರುವುದು ಕೇವಲ 3 ಬಾರಿ ಮಾತ್ರ. ಅಂದರೆ 6 ಪಂದ್ಯಗಳಲ್ಲಿ ಮುಂಬೈ ಇಂಡಿಯನ್ಸ್​ ಜಯ ಸಾಧಿಸಿ ಮೇಲುಗೈ ಹೊಂದಿದೆ.

5 / 10
ಇದೇ ಕಾರಣದಿಂದಾಗಿ ಮುಂಬೈ ಇಂಡಿಯನ್ಸ್ ತಂಡವನ್ನು ಅವರ ತವರು ಮೈದಾನದಲ್ಲಿ ಸೋಲಿಸುವುದು ಅಂದುಕೊಂಡಷ್ಟು ಸುಲಭವಲ್ಲ. ಇದಾಗ್ಯೂ ಈ ಮೈದಾನದಲ್ಲಿ ಟಾಸ್ ನಿರ್ಣಾಯಕ ಪಾತ್ರವಹಿಸುತ್ತದೆ.

6 / 10
ಏಕೆಂದರೆ ವಾಂಖೆಡೆ ಮೈದಾನದಲ್ಲಿ ಆಡಲಾದ ಒಟ್ಟು 106 ಪಂದ್ಯಗಳಲ್ಲಿ ಚೇಸಿಂಗ್ ಮಾಡಿದ ತಂಡ 57 ಬಾರಿ ಗೆಲುವು ದಾಖಲಿಸಿದೆ. ಹೀಗಾಗಿ ಟಾಸ್ ಗೆದ್ದ ತಂಡವು ಬೌಲಿಂಗ್ ಆಯ್ದುಕೊಳ್ಳುವುದು ಖಚಿತ. ಹಾಗಾಗಿ ಆರ್​ಸಿಬಿ ತಂಡವು ಟಾಸ್ ಜಯಿಸಿದರೆ, ಪಂದ್ಯ ಗೆಲ್ಲುವ ಸಾಧ್ಯತೆಯನ್ನು ಕೂಡ ತಳ್ಳಿಹಾಕುವಂತಿಲ್ಲ.

7 / 10
ಒಟ್ಟಿನಲ್ಲಿ ಈ ಪಂದ್ಯದಲ್ಲಿ ಗೆಲ್ಲುವ ಮೂಲಕ ಉಭಯ ತಂಡಗಳು ಪ್ಲೇಆಫ್ ರೇಸ್​ನಲ್ಲಿ ಮುನ್ನುಗ್ಗುವ ಇರಾದೆಯಲ್ಲಿದೆ. ಹೀಗಾಗಿ ವಾಂಖೆಡೆ ಮೈದಾನದಲ್ಲಿ ಆರ್​ಸಿಬಿ ಹಾಗೂ ಮುಂಬೈ ಇಂಡಿಯನ್ಸ್ ತಂಡಗಳಿಂದ ಭರ್ಜರಿ ಪೈಪೋಟಿಯನ್ನು ನಿರೀಕ್ಷಿಸಬಹುದು.

8 / 10
ಮುಂಬೈ ಇಂಡಿಯನ್ಸ್ ತಂಡ: ರೋಹಿತ್ ಶರ್ಮಾ (ನಾಯಕ) , ಇಶಾನ್ ಕಿಶನ್ (ವಿಕೆಟ್ ಕೀಪರ್) , ಕ್ಯಾಮೆರೋನ್ ಗ್ರೀನ್ , ತಿಲಕ್ ವರ್ಮಾ , ಟಿಮ್ ಡೇವಿಡ್ , ನೆಹಾಲ್ ವಧೇರಾ , ಜೋಫ್ರಾ ಆರ್ಚರ್ , ಪಿಯೂಷ್ ಚಾವ್ಲಾ , ಕುಮಾರ್ ಕಾರ್ತಿಕೇಯ , ಆಕಾಶ್ ಮಧ್ವಲ್ , ಅರ್ಷದ್ ಖಾನ್, ಸೂರ್ಯಕುಮಾರ್ ಯಾದವ್ , ಟ್ರಿಸ್ಟಾನ್ ಸ್ಟಬ್ಸ್ , ಡೆವಾಲ್ಡ್ ಬ್ರೆವಿಸ್ , ವಿಷ್ಣು ವಿನೋದ್ , ರಮಣದೀಪ್ ಸಿಂಗ್ , ಅರ್ಜುನ್ ತೆಂಡೂಲ್ಕರ್ , ಶಮ್ಸ್ ಮುಲಾನಿ , ಕ್ರಿಸ್ ಜೋರ್ಡಾನ್ , ಜೇಸನ್ ಬೆಹ್ರೆಂಡಾರ್ಫ್ , ಸಂದೀಪ್ ವಾರಿಯರ್ , ಹೃತಿಕ್ ಶೋಕೀನ್ , ಡುವಾನ್ ಜಾನ್ಸೆನ್ , ರಾಘವ್ ಗೋಯಲ್ , ರಿಲೆ ಮೆರೆಡಿತ್

9 / 10
ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ: ವಿರಾಟ್ ಕೊಹ್ಲಿ, ಫಾಫ್ ಡು ಪ್ಲೆಸಿಸ್ (ನಾಯಕ), ಅನುಜ್ ರಾವತ್, ಗ್ಲೆನ್ ಮ್ಯಾಕ್ಸ್‌ವೆಲ್, ಮಹಿಪಾಲ್ ಲೊಮ್ರೋರ್, ದಿನೇಶ್ ಕಾರ್ತಿಕ್ (ವಿಕೆಟ್ ಕೀಪರ್), ಸುಯಶ್ ಪ್ರಭುದೇಸಾಯಿ, ವನಿಂದು ಹಸರಂಗ, ಕರ್ಣ್ ಶರ್ಮಾ, ಮೊಹಮ್ಮದ್ ಸಿರಾಜ್, ಜೋಶ್ ಹ್ಯಾಝಲ್‌ವುಡ್, ಹರ್ಷಲ್ ಪಟೇಲ್ , ಸಿದ್ದಾರ್ಥ್ ಕೌಲ್, ಕೇದಾರ್ ಜಾಧವ್, ಮೈಕೆಲ್ ಬ್ರೇಸ್ವೆಲ್, ವೈಶಾಕ್ ವಿಜಯಕುಮಾರ್, ಫಿನ್ ಅಲೆನ್, ಸೋನು ಯಾದವ್, ಮನೋಜ್ ಭಾಂಡಗೆ, ಶಹಬಾಝ್ ಅಹ್ಮದ್, ಆಕಾಶ್ ದೀಪ್, ರಾಜನ್ ಕುಮಾರ್, ಅವಿನಾಶ್ ಸಿಂಗ್, ಹಿಮಾಂಶು ಶರ್ಮಾ.

10 / 10

Published On - 11:26 pm, Mon, 8 May 23

Follow us