Updated on: May 09, 2023 | 2:52 PM
IPL 2023 MI vs RCB: ಐಪಿಎಲ್ನ 54ನೇ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ಹಾಗೂ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಗಳು ಮುಖಾಮುಖಿಯಾಗಲಿದೆ. ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆಯಲಿರುವ ಈ ಪಂದ್ಯವು ಉಭಯ ತಂಡಗಳಿಗೂ ನಿರ್ಣಾಯಕ.
ಏಕೆಂದರೆ ಈ ಪಂದ್ಯದಲ್ಲಿ ಗೆಲ್ಲುವ ತಂಡವು ಪ್ಲೇಆಫ್ ರೇಸ್ನಲ್ಲಿ ಮುನ್ನುಗ್ಗಲಿದೆ. ಅಂದರೆ ಇಂದಿನ ಪಂದ್ಯದಲ್ಲಿ ಜಯ ಸಾಧಿಸುವ ತಂಡವು 2 ಅಂಕಗಳೊಂದಿಗೆ ಒಟ್ಟು 12 ಪಾಯಿಂಟ್ಸ್ ಪಡೆಯಲಿದೆ. ಪ್ರಸ್ತುತ ಪಾಯಿಂಟ್ಸ್ ಟೇಬಲ್ನಲ್ಲಿ ಆರ್ಸಿಬಿ 10 ಅಂಕಗಳೊಂದಿಗೆ 6ನೇ ಸ್ಥಾನದಲ್ಲಿದ್ದರೆ, ಮುಂಬೈ ಇಂಡಿಯನ್ಸ್ 10 ಅಂಕಗಳೊಂದಿಗೆ 8ನೇ ಸ್ಥಾನ ಅಲಂಕರಿಸಿದೆ.
ಆದರೆ ಈ ಪಂದ್ಯದಲ್ಲಿ ಗೆಲ್ಲುವ ತಂಡಕ್ಕೆ 2 ಅಂಕ ಸಿಗಲಿದೆ. ಇದರೊಂದಿಗೆ 12 ಅಂಕ ಪಡೆಯುವ ತಂಡವು ಪಾಯಿಂಟ್ಸ್ ಟೇಬಲ್ನಲ್ಲಿ 3ನೇ ಸ್ಥಾನಕ್ಕೇರಲಿದೆ. ಏಕೆಂದರೆ ಪ್ರಸ್ತುತ ಪಾಯಿಂಟ್ಸ್ ಟೇಬಲ್ನಲ್ಲಿ 11 ಅಂಕ ಪಡೆದಿರುವ ಲಕ್ನೋ ಸೂಪರ್ ಜೈಂಟ್ಸ್ ತಂಡವು 3ನೇ ಸ್ಥಾನದಲ್ಲಿದೆ.
ಇದೀಗ 12 ಅಂಕಗಳನ್ನು ಪಡೆಯುವ ಮೂಲಕ 3ನೇ ಸ್ಥಾನಕ್ಕೇರುವ ಅವಕಾಶ ಮುಂಬೈ ಇಂಡಿಯನ್ಸ್ ಹಾಗೂ ಆರ್ಸಿಬಿ ತಂಡದ ಮುಂದಿದೆ. ಈ ಮೂಲಕ ಅಂಕಪಟ್ಟಿಯಲ್ಲಿ ಟಾಪ್-4 ಸ್ಥಾನಕ್ಕೇರಬಹುದು.
ಅಲ್ಲದೆ ಇತ್ತ ರಾಜಸ್ಥಾನ್ ರಾಯಲ್ಸ್, ಕೊಲ್ಕತ್ತಾ ನೈಟ್ ರೈಡರ್ಸ್, ಆರ್ಸಿಬಿ, ಪಂಜಾಬ್ ಕಿಂಗ್ಸ್ ಹಾಗೂ ಮುಂಬೈ ಇಂಡಿಯನ್ಸ್ ತಂಡಗಳು 10 ಅಂಕಗಳನ್ನು ಹೊಂದಿದೆ. ಹೀಗಾಗಿ ಪ್ಲೇಆಫ್ ರೇಸ್ನಲ್ಲೂ ಪೈಪೋಟಿ ಕಂಡು ಬರಲಿದೆ.
ಈ ಪೈಪೋಟಿ ನಡುವೆ ಪ್ಲೇಆಫ್ ಹಾದಿಯನ್ನು ಸುಗಮಗೊಳಿಸಲು ಇಂದಿನ ಪಂದ್ಯದಲ್ಲಿ ಗೆಲ್ಲಬೇಕಾದ ಅನಿವಾರ್ಯತೆಯಲ್ಲಿದೆ ಆರ್ಸಿಬಿ ಹಾಗೂ ಮುಂಬೈ ಇಂಡಿಯನ್ಸ್. ಹೀಗಾಗಿ ವಾಂಖೆಡೆ ಮೈದಾನದಲ್ಲಿ ಇಂದಿನ ಪಂದ್ಯದಲ್ಲಿ ಉಭಯ ತಂಡಗಳಿಂದ ರೋಚಕ ಹೋರಾಟ ನಿರೀಕ್ಷಿಸಬಹುದು.
ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ: ವಿರಾಟ್ ಕೊಹ್ಲಿ, ಫಾಫ್ ಡು ಪ್ಲೆಸಿಸ್ (ನಾಯಕ), ಅನುಜ್ ರಾವತ್, ಗ್ಲೆನ್ ಮ್ಯಾಕ್ಸ್‌ವೆಲ್, ಮಹಿಪಾಲ್ ಲೊಮ್ರೋರ್, ದಿನೇಶ್ ಕಾರ್ತಿಕ್ (ವಿಕೆಟ್ ಕೀಪರ್), ಸುಯಶ್ ಪ್ರಭುದೇಸಾಯಿ, ವನಿಂದು ಹಸರಂಗ, ಕರ್ಣ್ ಶರ್ಮಾ, ಮೊಹಮ್ಮದ್ ಸಿರಾಜ್, ಜೋಶ್ ಹ್ಯಾಝಲ್‌ವುಡ್, ಹರ್ಷಲ್ ಪಟೇಲ್ , ಸಿದ್ದಾರ್ಥ್ ಕೌಲ್, ಕೇದಾರ್ ಜಾಧವ್, ಮೈಕೆಲ್ ಬ್ರೇಸ್ವೆಲ್, ವೈಶಾಕ್ ವಿಜಯಕುಮಾರ್, ಫಿನ್ ಅಲೆನ್, ಸೋನು ಯಾದವ್, ಮನೋಜ್ ಭಾಂಡಗೆ, ಶಹಬಾಝ್ ಅಹ್ಮದ್, ಆಕಾಶ್ ದೀಪ್, ರಾಜನ್ ಕುಮಾರ್, ಅವಿನಾಶ್ ಸಿಂಗ್, ಹಿಮಾಂಶು ಶರ್ಮಾ.
ಮುಂಬೈ ಇಂಡಿಯನ್ಸ್ ತಂಡ: ರೋಹಿತ್ ಶರ್ಮಾ (ನಾಯಕ) , ಇಶಾನ್ ಕಿಶನ್ (ವಿಕೆಟ್ ಕೀಪರ್) , ಕ್ಯಾಮೆರೋನ್ ಗ್ರೀನ್ , ತಿಲಕ್ ವರ್ಮಾ , ಟಿಮ್ ಡೇವಿಡ್ , ನೆಹಾಲ್ ವಧೇರಾ , ಜೋಫ್ರಾ ಆರ್ಚರ್ , ಪಿಯೂಷ್ ಚಾವ್ಲಾ , ಕುಮಾರ್ ಕಾರ್ತಿಕೇಯ , ಆಕಾಶ್ ಮಧ್ವಲ್ , ಅರ್ಷದ್ ಖಾನ್, ಸೂರ್ಯಕುಮಾರ್ ಯಾದವ್ , ಟ್ರಿಸ್ಟಾನ್ ಸ್ಟಬ್ಸ್ , ಡೆವಾಲ್ಡ್ ಬ್ರೆವಿಸ್ , ವಿಷ್ಣು ವಿನೋದ್ , ರಮಣದೀಪ್ ಸಿಂಗ್ , ಅರ್ಜುನ್ ತೆಂಡೂಲ್ಕರ್ , ಶಮ್ಸ್ ಮುಲಾನಿ , ಕ್ರಿಸ್ ಜೋರ್ಡಾನ್ , ಜೇಸನ್ ಬೆಹ್ರೆಂಡಾರ್ಫ್ , ಸಂದೀಪ್ ವಾರಿಯರ್ , ಹೃತಿಕ್ ಶೋಕೀನ್ , ಡುವಾನ್ ಜಾನ್ಸೆನ್ , ರಾಘವ್ ಗೋಯಲ್ , ರಿಲೆ ಮೆರೆಡಿತ್