AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2023: ಇನ್ನೊಂದೇ ಹೆಜ್ಜೆ ಬಾಕಿ; 2023ರ ಐಪಿಎಲ್​ನಲ್ಲಿ ಸೃಷ್ಟಿಯಾಗಲಿದೆ ಅಪರೂಪದ ದಾಖಲೆ..!

IPL 2023: ಬೆಂಗಳೂರು-ಹೈದರಾಬಾದ್​ ಪಂದ್ಯದಲ್ಲಿ ಹೆನ್ರಿಕ್ ಕ್ಲಾಸೆನ್ ಈ ಐಪಿಎಲ್​​ನ 7ನೇ ಶತಕ ಬಾರಿಸಿದರೆ, ಆ ಬಳಿಕ ಗುರಿ ಬೆನ್ನಟ್ಟುವಾಗ ಆರ್​ಸಿಬಿ ಆಟಗಾರ ವಿರಾಟ್ ಕೊಹ್ಲಿ 8ನೇ ಶತಕ ಬಾರಿಸಿದರು.

ಪೃಥ್ವಿಶಂಕರ
|

Updated on: May 19, 2023 | 4:07 PM

Share
ಐಪಿಎಲ್ 2023 ರಲ್ಲಿ ಗುರುವಾರ ನಡೆದ ಸನ್​ರೈಸರ್ಸ್ ಹೈದರಾಬಾದ್ ಹಾಗೂ ರಾಯಲ್ ಚಾಲೆಂಜರ್ಸ್​ ಬೆಂಗಳೂರು ನಡುವಿನ ಪಂದ್ಯ ಐತಿಹಾಸಿಕ ಕ್ಷಣಗಳಿಗೆ ಸಾಕ್ಷಿಯಾಯಿತು. ಒಂದೇ ಪಂದ್ಯದಲ್ಲಿ ಎರಡು ಶತಕಗಳು ದಾಖಲಾದವು. ಇದರೊಂದಿಗೆ ಒಂದು ಆವೃತ್ತಿಯಲ್ಲಿ ಸಿಡಿದ ಅತ್ಯಧಿಕ ಶತಕಗಳ ವಿಚಾರದಲ್ಲಿ ಈ ಆವೃತ್ತಿ, ಕಳೆದ ಆವೃತ್ತಿಯನ್ನು ಸರಿಗಟ್ಟಿದೆ.

1 / 11
ಬೆಂಗಳೂರು-ಹೈದರಾಬಾದ್​ ಪಂದ್ಯದಲ್ಲಿ ಹೆನ್ರಿಕ್ ಕ್ಲಾಸೆನ್ ಈ ಐಪಿಎಲ್​​ನ 7ನೇ ಶತಕ ಬಾರಿಸಿದರೆ, ಆ ಬಳಿಕ ಗುರಿ ಬೆನ್ನಟ್ಟುವಾಗ ಆರ್​ಸಿಬಿ ಆಟಗಾರ ವಿರಾಟ್ ಕೊಹ್ಲಿ 8ನೇ ಶತಕ ಬಾರಿಸಿದರು. ಇದರೊಂದಿಗೆ ಕಳೆದ ಆವೃತ್ತಿಯ ಶತಕಗಳಿಗೆ ಈ ಆವೃತ್ತಿ ಸಮವಾಗಿದೆ.

2 / 11
ಕಳೆದ ಆವೃತ್ತಿಯಲ್ಲೂ ಒಟ್ಟು 8 ಶತಕಗಳು ಸಿಡಿದಿದ್ದವು. ಆದರೆ ಈ ಆವೃತ್ತಿಯಲ್ಲಿ ಇನ್ನು ಪಂದ್ಯಗಳು ಬಾಕಿ ಇರುವುದರಿಂದ ಇನ್ನೊಂದು ಶತಕ ಬಂದರೆ ಐಪಿಎಲ್ ಇತಿಹಾಸದಲ್ಲಿ ದಾಖಲೆ ಸೃಷ್ಟಿಯಾಗಲಿದೆ. ಇನ್ನುಳಿದಂತೆ ಈ ಆವೃತ್ತಿಯಲ್ಲಿ ಶತಕ ಸಿಡಿಸಿದ ಆಟಗಾರರ ಪಟ್ಟಿಯನ್ನು ನೋಡುವುದಾದರೆ...

3 / 11
ಹ್ಯಾರಿ ಬ್ರೂಕ್: ಈಡನ್‌ ಗಾರ್ಡನ್ಸ್‌ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಕೋಲ್ಕತಾ ನೈಟ್‌ ರೈಡರ್ಸ್‌ ವಿರುದ್ಧ ಎಸ್​ಆರ್​ಹೆಚ್ ಬ್ಯಾಟರ್ ಹ್ಯಾರಿ ಬ್ರೂಕ್‌ ಕೇವಲ 55 ಎಸೆತಗಳಲ್ಲಿ ಶತಕ ಬಾರಿಸಿದರು. ಇದು ಐಪಿಎಲ್‌ 2023 ಟೂರ್ನಿಯ ಮೊತ್ತ ಮೊದಲ ಶತಕವಾಗಿತ್ತು.

4 / 11
ವೆಂಕಟೇಶ್ ಅಯ್ಯರ್: ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆದ ಮುಂಬೈ ಇಂಡಿಯನ್ಸ್ ವಿರುದ್ಧದ ಪಂದ್ಯದಲ್ಲಿ ಕೆಕೆಆರ್ ತಂಡದ ಸ್ಪೋಟಕ ಬ್ಯಾಟ್ಸ್​ಮನ್ ವೆಂಕಟೇಶ್ ಅಯ್ಯರ್ 49 ಎಸೆತಗಳಲ್ಲಿ 9 ಭರ್ಜರಿ ಸಿಕ್ಸ್ ಹಾಗೂ 5 ಫೋರ್​ನೊಂದಿಗೆ ಭರ್ಜರಿ ಶತಕ ಪೂರೈಸಿದ್ದರು.

5 / 11
ಯಶಸ್ವಿ ಜೈಸ್ವಾಲ್: ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆದ ಐಪಿಎಲ್​ನ 1000ನೇ ಪಂದ್ಯದಲ್ಲಿ ಯುವ ಬ್ಯಾಟರ್​ ಯಶಸ್ವಿ ಜೈಸ್ವಾಲ್ 62 ಎಸೆತಗಳಲ್ಲಿ 8 ಭರ್ಜರಿ ಸಿಕ್ಸ್ ಹಾಗೂ 16 ಫೋರ್​ನೊಂದಿಗೆ 124 ರನ್​ ಚಚ್ಚಿದರು.

6 / 11
ಸೂರ್ಯಕುಮಾರ್ ಯಾದವ್: ವಾಂಖೆಡೆ ಕ್ರೀಡಾಂಗಣದಲ್ಲಿ ನಡೆದ ಹೈ-ವೋಲ್ಟೇಜ್ ಪಂದ್ಯದಲ್ಲಿ ಗುಜರಾತ್‌ ಟೈಟನ್ಸ್‌ ಎದುರು ಸೂರ್ಯಕುಮಾರ್ ಯಾದವ್ 49 ಎಸೆತಗಳಲ್ಲಿ ಅಜೇಯ 103 ರನ್‌ ಸಿಡಿಸಿದ್ದರು.

7 / 11
ಪ್ರಭ್​ಸಿಮ್ರಾನ್​ ಸಿಂಗ್: ದೆಹಲಿಯ ಅರುಣ್ ಜೇಟ್ಲಿ ಸ್ಟೇಡಿಯಂನಲ್ಲಿ ನಡೆದ ಐಪಿಎಲ್​ನ 59ನೇ ಪಂದ್ಯದಲ್ಲಿ ಪಂಜಾಬ್ ಆರಂಭಿಕ ಪ್ರಭ್​ಸಿಮ್ರಾನ್ ಸಿಂಗ್ 65 ಎಸೆತಗಳಲ್ಲಿ 6 ಭರ್ಜರಿ ಸಿಕ್ಸ್ ಹಾಗೂ 10 ಫೋರ್​ಗಳೊಂದಿಗೆ 103 ರನ್​ ಬಾರಿಸಿದ್ದರು.

8 / 11
ಶುಭ್​ಮನ್​ ಗಿಲ್​: ಐಪಿಎಲ್​ನ 62ನೇ ಪಂದ್ಯದಲ್ಲಿ ಸನ್​ರೈಸರ್ಸ್​ ಹೈದರಾಬಾದ್ ವಿರುದ್ಧ ಶುಭ್​ಮನ್ ಗಿಲ್ 58 ಎಸೆತಗಳಲ್ಲಿ 1 ಸಿಕ್ಸ್ ಹಾಗೂ 13 ಫೋರ್​ನೊಂದಿಗೆ 101 ರನ್​ ಬಾರಿಸಿದ್ದರು.

9 / 11
ಹೆನ್ರಿಕ್ ಕ್ಲಾಸೆನ್: ಹೈದರಾಬಾದ್​ನಲ್ಲಿ ನಡೆದ ಆರ್​ಸಿಬಿ ವಿರುದ್ಧದ ಪಂದ್ಯದಲ್ಲಿ ಎಸ್​ಆರ್​ಹೆಚ್ ತಂಡದ ಹೆನ್ರಿಕ್ ಕ್ಲಾಸೆನ್ 49 ಎಸೆತಗಳಲ್ಲಿ 6 ಭರ್ಜರಿ ಸಿಕ್ಸ್ ಹಾಗೂ 8 ಫೋರ್​ನೊಂದಿಗೆ ಸಿಡಿಲಬ್ಬರದ ಶತಕ ಸಿಡಿಸಿದರು.

10 / 11
ವಿರಾಟ್ ಕೊಹ್ಲಿ:  ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ನಡೆದ ಪಂದ್ಯದಲ್ಲಿ ಕಿಂಗ್ ಕೊಹ್ಲಿ 63 ಎಸೆತಗಳಲ್ಲಿ ಶತಕ ಸಿಡಿಸಿ ದಾಖಲೆ ಬರೆದಿದ್ದಾರೆ.

11 / 11
pruthvi Shankar
pruthvi Shankar

ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ, ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ನೆಲೆ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ನಾನು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ನನ್ನ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ನನ್ನ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.

Read More
Follow Us
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್

ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ

ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್

ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?

ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ

ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ

IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ

ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ

ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ

ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!