IPL 2023: ಐಪಿಎಲ್ನ ಮೊದಲಾರ್ಧದಲ್ಲಿ ಅತೀ ಹೆಚ್ಚು ಸಿಕ್ಸ್ ಬಾರಿಸಿದ ಬ್ಯಾಟರ್ ಯಾರು ಗೊತ್ತಾ?
IPL 2023 Kannada: ಐಪಿಎಲ್ನ ಮೊದಲಾರ್ಧದಲ್ಲಿ ಅತೀ ಹೆಚ್ಚು ಸಿಕ್ಸ್ ಬಾರಿಸಿದ ಬ್ಯಾಟ್ಸ್ಮನ್ಗಳ ಪಟ್ಟಿ ಈ ಕೆಳಗಿನಂತಿದೆ...
Updated on: Apr 27, 2023 | 2:28 PM

IPL 2023: ಇಂಡಿಯನ್ ಪ್ರೀಮಿಯರ್ ಲೀಗ್ನ ಮೊದಲಾರ್ಧ ಪೂರ್ಣಗೊಂಡಿದೆ. ಎಲ್ಲಾ ತಂಡಗಳು ಏಳು ಪಂದ್ಯಗಳನ್ನಾಡಿದ್ದು, ಇದರಲ್ಲಿ ಅತ್ಯಧಿಕ ಗೆಲುವು ದಾಖಲಿಸಿ ಚೆನ್ನೈ ಸೂಪರ್ ಕಿಂಗ್ಸ್ ತಂಡವು ಅಂಕಪಟ್ಟಿಯಲ್ಲಿ ಅಗ್ರಸ್ಥಾನ ಅಲಂಕರಿಸಿದೆ. ಇನ್ನು ಕೊನೆಯ ಸ್ಥಾನದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡವಿದೆ.

ಇನ್ನು ಪ್ರತಿ ತಂಡಗಳ ಈ 7 ಪಂದ್ಯಗಳಲ್ಲಿ ಬ್ಯಾಟ್ಸ್ಮನ್ಗಳ ಅಬ್ಬರ ಕೂಡ ಜೋರಾಗಿತ್ತು. ಅದರಲ್ಲೂ ಆರ್ಸಿಬಿ ಬ್ಯಾಟರ್ಗಳು ಸಿಡಿಲಬ್ಬರದ ಪ್ರದರ್ಶನ ನೀಡಿದ್ದಾರೆ. ಇದಕ್ಕೆ ಸಾಕ್ಷಿಯೇ ಐಪಿಎಲ್ ಮೊದಲಾರ್ಧದ ಸಿಕ್ಸರ್ಗಳ ಪಟ್ಟಿಯಲ್ಲಿ ಸ್ಥಾನ ಪಡೆದಿರುವುದು. ಹಾಗಿದ್ರೆ ಐಪಿಎಲ್ನ ಮೊದಲಾರ್ಧದಲ್ಲಿ ಅತೀ ಹೆಚ್ಚು ಸಿಕ್ಸ್ ಬಾರಿಸಿದ ಬ್ಯಾಟ್ಸ್ಮನ್ಗಳು ಯಾರೆಲ್ಲಾ ಎಂದು ನೋಡೋಣ...

1- ಫಾಫ್ ಡುಪ್ಲೆಸಿಸ್: ಆರ್ಸಿಬಿ ತಂಡದ ನಾಯಕ ಫಾಫ್ ಡುಪ್ಲೆಸಿಸ್ ಈ ಬಾರಿಯ ಐಪಿಎಲ್ನಲ್ಲಿ ಭರ್ಜರಿ ಪ್ರದರ್ಶನ ನೀಡುತ್ತಿದ್ದಾರೆ. ಆಡಿರುವ 7 ಪಂದ್ಯಗಳಲ್ಲಿ ಬರೋಬ್ಬರಿ 25 ಸಿಕ್ಸ್ಗಳು ಮೂಡಿಬಂದಿವೆ.

2- ಗ್ಲೆನ್ ಮ್ಯಾಕ್ಸ್ವೆಲ್: ಆರ್ಸಿಬಿ ಪರ ಮಧ್ಯಮ ಕ್ರಮಾಂಕದಲ್ಲಿ ಅಬ್ಬರಿಸುತ್ತಿರುವ ಗ್ಲೆನ್ ಮ್ಯಾಕ್ಸ್ವೆಲ್ 7 ಪಂದ್ಯಗಳಿಂದ 23 ಸಿಕ್ಸ್ಗಳನ್ನು ಸಿಡಿಸಿದ್ದಾರೆ.

3- ರಿಂಕು ಸಿಂಗ್: ಕೆಕೆಆರ್ ಪರ ಮಧ್ಯಮ ಕ್ರಮಾಂಕದಲ್ಲಿ ಬ್ಯಾಟ್ ಬೀಸುತ್ತಿರುವ ರಿಂಕು ಸಿಂಗ್ ಇದೀಗ ಸಿಕ್ಸರ್ ಸಿಂಗ್ ಎನಿಸಿಕೊಂಡಿದ್ದಾರೆ. ಮೊದಲಾರ್ಧದ 7 ಪಂದ್ಯಗಳಿಂದ ರಿಂಕು ಬ್ಯಾಟ್ನಿಂದ ಬರೋಬ್ಬರಿ 17 ಸಿಕ್ಸ್ಗಳು ಸಿಡಿದಿವೆ.

4- ರುತುರಾಜ್ ಗಾಯಕ್ವಾಡ್: ಸಿಎಸ್ಕೆ ತಂಡದ ಆರಂಭಿಕ ಆಟಗಾರ ರುತುರಾಜ್ ಗಾಯಕ್ವಾಡ್ 7 ಪಂದ್ಯಗಳಿಂದ ಒಟ್ಟು 17 ಸಿಕ್ಸ್ಗಳನ್ನು ಬಾರಿಸಿದ್ದಾರೆ.

5- ವೆಂಕಟೇಶ್ ಅಯ್ಯರ್: ಕೆಕೆಆರ್ ಪರ ಸ್ಪೋಟಕ ಬ್ಯಾಟಿಂಗ್ ನಡೆಸುತ್ತಿರುವ ವೆಂಕಟೇಶ್ ಅಯ್ಯರ್ 7 ಪಂದ್ಯಗಳಲ್ಲಿ ಸಿಡಿಸಿರುವುದು ಬರೋಬ್ಬರಿ 16 ಸಿಕ್ಸ್ಗಳು.

6- ಕೈಲ್ ಮೇಯರ್ಸ್: ಲಕ್ನೋ ಸೂಪರ್ ಜೈಂಟ್ಸ್ ಪರ ಆರಂಭಿಕರಾಗಿ ಕಣಕ್ಕಿಳಿಯುತ್ತಿರುವ ಕೈಲ್ ಮೇಯರ್ಸ್ 7 ಪಂದ್ಯಗಳಲ್ಲಿ ಒಟ್ಟು 16 ಸಿಕ್ಸ್ಗಳನ್ನು ಬಾರಿಸಿದ್ದಾರೆ.

ಇನ್ನು ಆರ್ಸಿಬಿ ಪರ ಕಣಕ್ಕಿಳಿಯುತ್ತಿರುವ ವಿರಾಟ್ ಕೊಹ್ಲಿ 7 ಪಂದ್ಯಗಳಿಂದ ಒಟ್ಟು 11 ಸಿಕ್ಸ್ ಸಿಡಿಸಿದ್ದಾರೆ. ಈ ಮೂಲಕ ಈ ಬಾರಿಯ ಸಿಕ್ಸರ್ ಸರದಾರರ ಪಟ್ಟಿಯಲ್ಲಿ 15ನೇ ಸ್ಥಾನದಲ್ಲಿದ್ದಾರೆ.

ಹಾಗೆಯೇ 7 ಪಂದ್ಯಗಳಲ್ಲಿ 10 ಸಿಕ್ಸ್ ಬಾರಿಸಿರುವ ಮುಂಬೈ ಇಂಡಿಯನ್ಸ್ ತಂಡದ ನಾಯಕ ರೋಹಿತ್ ಶರ್ಮಾ ಈ ಪಟ್ಟಿಯಲ್ಲಿ 18ನೇ ಸ್ಥಾನದಲ್ಲಿದ್ದಾರೆ.

ಇನ್ನು 7 ಪಂದ್ಯಗಳ 5 ಇನಿಂಗ್ಸ್ನಲ್ಲಿ ಬ್ಯಾಟ್ ಬೀಸಿರುವ ಮಹೇಂದ್ರ ಸಿಂಗ್ ಧೋನಿ ಒಟ್ಟು 6 ಸಿಕ್ಸ್ಗಳನ್ನು ಬಾರಿಸಿದ್ದಾರೆ. ಈ ಮೂಲಕ ಈ ಪಟ್ಟಿಯಲ್ಲಿ 31ನೇ ಸ್ಥಾನದಲ್ಲಿದ್ದಾರೆ. (ALL PC: CricHead)
