- Kannada News Photo gallery Cricket photos Kannada NEws | IPL 2023: Most Sixes in IPL 2023 Players List
IPL 2023: ಸಿಕ್ಸ್ ಸಿಡಿಸುವುದರಲ್ಲಿ RCB ಬ್ಯಾಟರ್ಗಳೇ ಮುಂದು..!
IPL 2023 Kannada: ಐಪಿಎಲ್ 2023 ರಲ್ಲಿ ಇದುವರೆಗೆ ಅತೀ ಹೆಚ್ಚು ಸಿಕ್ಸ್ ಬಾರಿಸಿದ ಟಾಪ್-5 ಬ್ಯಾಟ್ಸ್ಮನ್ಗಳ ಪಟ್ಟಿ ಈ ಕೆಳಗಿನಂತಿದೆ...
Updated on: May 17, 2023 | 10:28 PM

ಅಂದರೆ ಈ ಬಾರಿಯ ಐಪಿಎಲ್ ಬೌಂಡರಿಯೊಂದಿಗೆ ಮುಕ್ತಾಯವಾಗಿದೆ. ಆದರೆ ಇದಕ್ಕೂ ಮುನ್ನ ಟೂರ್ನಿಯಲ್ಲಿ ಕೆಲ ಆಟಗಾರರು ಭರ್ಜರಿ ಸಿಕ್ಸರ್ಗಳ ಮೂಲಕ ಅಬ್ಬರಿಸಿದ್ದರು. ಹೀಗೆ ಸಿಡಿಲಬ್ಬರದ ಬ್ಯಾಟಿಂಗ್ ಪ್ರದರ್ಶಿಸಿ ಈ ಬಾರಿಯ ಐಪಿಎಲ್ನಲ್ಲಿ ಅತೀ ಹೆಚ್ಚು ಸಿಕ್ಸ್ ಸಿಡಿಸಿದ ಬ್ಯಾಟರ್ಗಳು ಯಾರೆಲ್ಲಾ ಎಂದು ನೋಡೋಣ...

ಅಂದರೆ ಟೂರ್ನಿಯುದ್ದಕ್ಕೂ ಆರ್ಸಿಬಿ ಭರ್ಜರಿ ಬ್ಯಾಟಿಂಗ್ ಪ್ರದರ್ಶನ ನೀಡಿರುವ ಫಾಫ್ ಡುಪ್ಲೆಸಿಸ್ ಹಾಗೂ ಗ್ಲೆನ್ ಮ್ಯಾಕ್ಸ್ವೆಲ್ ನಡುವೆಯೇ ಸಿಕ್ಸರ್ ಸರದಾರನ ಪಟ್ಟಕ್ಕಾಗಿ ಪೈಪೋಟಿ ನಡೆಯುತ್ತಿರುವುದು ವಿಶೇಷ. ಐಪಿಎಲ್ 2023 ರಲ್ಲಿ ಅತೀ ಹೆಚ್ಚು ಸಿಕ್ಸ್ ಸಿಡಿಸಿದ ಟಾಪ್-5 ಬ್ಯಾಟರ್ಗಳ ಪಟ್ಟಿ ಇಲ್ಲಿದೆ.

1- ಫಾಫ್ ಡುಪ್ಲೆಸಿಸ್: ಆರ್ಸಿಬಿ ತಂಡದ ನಾಯಕ ಫಾಫ್ ಡುಪ್ಲೆಸಿಸ್ 14 ಪಂದ್ಯಗಳಲ್ಲಿ ಒಟ್ಟು 36 ಸಿಕ್ಸ್ ಸಿಡಿಸಿ ಈ ಬಾರಿಯ ಸಿಕ್ಸರ್ ಸರದಾರರ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದ್ದಾರೆ.

4- ಗ್ಲೆನ್ ಮ್ಯಾಕ್ಸ್ವೆಲ್: ಈ ಬಾರಿ ಆರ್ಸಿಬಿ ಪರ 14 ಇನಿಂಗ್ಸ್ಗಳಲ್ಲಿ ಬ್ಯಾಟ್ ಬೀಸಿರುವ ಗ್ಲೆನ್ ಮ್ಯಾಕ್ಸ್ವೆಲ್ 31 ಸಿಕ್ಸ್ಗಳನ್ನು ಬಾರಿಸಿದ್ದಾರೆ.

2- ಶಿವಂ ದುಬೆ: ಸಿಎಸ್ಕೆ ತಂಡದ ಮಧ್ಯಮ ಕ್ರಮಾಂಕದ ಬ್ಯಾಟರ್ ಶಿವಂ ದುಬೆ 14 ಇನಿಂಗ್ಸ್ಗಳಲ್ಲಿ ಒಟ್ಟು 35 ಸಿಕ್ಸ್ಗಳನ್ನು ಸಿಡಿಸಿದ್ದಾರೆ.

4- ಯಶಸ್ವಿ ಜೈಸ್ವಾಲ್: ರಾಜಸ್ಥಾನ್ ರಾಯಲ್ಸ್ ತಂಡದ ಆರಂಭಿಕ ಆಟಗಾರ ಯಶಸ್ವಿ ಜೈಸ್ವಾಲ್ 13 ಪಂದ್ಯಗಳಲ್ಲಿ ಒಟ್ಟು 26 ಸಿಕ್ಸ್ಗಳನ್ನು ಬಾರಿಸಿದ್ದಾರೆ.

5- ಮಾರ್ಕಸ್ ಸ್ಟೋಯಿನಿಸ್: ಲಕ್ನೋ ಸೂಪರ್ ಜೈಂಟ್ಸ್ ತಂಡದ ಆಲ್ರೌಂಡರ್ ಮಾರ್ಕಸ್ ಸ್ಟೋಯಿನಿಸ್ 13 ಇನಿಂಗ್ಸ್ಗಳಲ್ಲಿ ಒಟ್ಟು 26 ಸಿಕ್ಸ್ ಸಿಡಿಸಿ ಈ ಪಟ್ಟಿಯಲ್ಲಿ 5ನೇ ಸ್ಥಾನದಲ್ಲಿದ್ದಾರೆ.
























