Virat Kohli: 300 ಪ್ಲಸ್ ರನ್: ಐಪಿಎಲ್​ನಲ್ಲಿ ವಿಶೇಷ ದಾಖಲೆ ಬರೆದ ವಿರಾಟ್ ಕೊಹ್ಲಿ

IPL 2023 Kannada: 97 ರನ್​ಗಳಿಸಿದರೆ ಐಪಿಎಲ್​ನಲ್ಲಿ 7 ಸಾವಿರ ರನ್ ಪೂರೈಸಿದ ಮೊದಲ ಬ್ಯಾಟ್ಸ್​ಮನ್ ಎಂಬ ಹೆಗ್ಗಳಿಕೆಗೆ ವಿರಾಟ್ ಕೊಹ್ಲಿ ಪಾತ್ರರಾಗಲಿದ್ದಾರೆ.

TV9 Web
| Updated By: ಝಾಹಿರ್ ಯೂಸುಫ್

Updated on: Apr 27, 2023 | 11:23 PM

IPL 2023: ಐಪಿಎಲ್​ನ 16ನೇ ಸೀಸನ್​ನಲ್ಲಿ ಆರ್​ಸಿಬಿ ತಂಡದ ಸ್ಟಾರ್ ಆಟಗಾರ ವಿರಾಟ್ ಕೊಹ್ಲಿ 300 ಕ್ಕೂ ಅಧಿಕ ರನ್ ಕಲೆಹಾಕಿದ್ದಾರೆ. ಇದರೊಂದಿಗೆ ಐಪಿಎಲ್​ನಲ್ಲಿ ಸತತವಾಗಿ ಮುನ್ನರಕ್ಕೂ ಅಧಿಕ ರನ್​ಗಳಿಸಿದ ವಿಶೇಷ ದಾಖಲೆಯೊಂದು ಕಿಂಗ್ ಕೊಹ್ಲಿ ಪಾಲಾಗಿದೆ.

1 / 7
ಐಪಿಎಲ್​ ಇತಿಹಾಸದಲ್ಲಿ ವಿರಾಟ್ ಕೊಹ್ಲಿ 14 ಸೀಸನ್​ಗಳಲ್ಲಿ ಸತತವಾಗಿ 300 ಕ್ಕೂ ಅಧಿಕ ರನ್​ಗಳಿಸುತ್ತಾ ಬಂದಿದ್ದಾರೆ. ವಿರಾಟ್ ಕೊಹ್ಲಿಯನ್ನು ಹೊರತುಪಡಿಸಿ ಬೇರೆ ಯಾವುದೇ ಆಟಗಾರ 14 ಸೀಸನ್​ನಲ್ಲಿ 300+ ರನ್ ಕಲೆಹಾಕಿಲ್ಲ.

2 / 7
ಇದಕ್ಕೂ ಮುನ್ನ ಈ ದಾಖಲೆ ಶಿಖರ್ ಧವನ್ ಹಾಗೂ ಸುರೇಶ್ ರೈನಾ ಹೆಸರಿನಲ್ಲಿತ್ತು. ಧವನ್ ಸತತ 12 ಸೀಸನ್​ಗಳಲ್ಲಿ ಮೂರಕ್ಕೂ ಅಧಿಕ ರನ್​ಗಳಿಸಿ ಮಿಂಚಿದ್ದಾರೆ.

3 / 7
ಹಾಗೆಯೇ ಸಿಎಸ್​ಕೆ ತಂಡದ ಮಾಜಿ ಆಟಗಾರ ಸುರೇಶ್ ರೈನಾ ಕೂಡ ಸತತ 12 ಸೀಸನ್​ಗಳಲ್ಲಿ 300+ ರನ್​ ಕಲೆಹಾಕಿ ವಿಶೇಷ ದಾಖಲೆ ಬರೆದಿದ್ದರು.

4 / 7
ಇದೀಗ ಇವರೆಲ್ಲರನ್ನೂ ಹಿಂದಿಕ್ಕಿ ವಿರಾಟ್ ಕೊಹ್ಲಿ ಸತತ 14ನೇ ಸೀಸನ್​ನಲ್ಲಿ 300 ಕ್ಕೂ ಅಧಿಕ ರನ್ ಕಲೆಹಾಕಿದ್ದಾರೆ. ಪ್ರಸ್ತುತ ಐಪಿಎಲ್​ನಲ್ಲಿ ಭರ್ಜರಿ ಫಾರ್ಮ್ ಪ್ರದರ್ಶಿಸಿರುವ ಕಿಂಗ್ ಕೊಹ್ಲಿ 8 ಇನಿಂಗ್ಸ್​ಗಳಲ್ಲಿ ಒಟ್ಟು 333 ರನ್​ಗಳಿಸಿದ್ದಾರೆ. ಈ ಮೂಲಕ ಆರೆಂಜ್ ಕ್ಯಾಪ್​ ರೇಸ್​ನಲ್ಲಿ 2ನೇ ಸ್ಥಾನದಲ್ಲಿದ್ದಾರೆ.

5 / 7
ಇದಲ್ಲದೆ ಐಪಿಎಲ್​ನಲ್ಲಿ ಅತ್ಯಧಿಕ ಬಾರಿ 50+ ಸ್ಕೋರ್​ಗಳಿಸಿದ ಭಾರತೀಯ ಆಟಗಾರ ಎಂಬ ದಾಖಲೆ ಕೂಡ ವಿರಾಟ್ ಕೊಹ್ಲಿ ಹೆಸರಿನಲ್ಲಿದೆ. ಕಿಂಗ್ ಕೊಹ್ಲಿ ಒಟ್ಟು 53 ಬಾರಿ ಐವತ್ತಕ್ಕಿಂತ ಹೆಚ್ಚಿನ ರನ್​ಗಳಿಸಿದ್ದಾರೆ.

6 / 7
ಹಾಗೆಯೇ ಐಪಿಎಲ್​ ಇತಿಹಾಸದಲ್ಲೇ ಅತೀ ಹೆಚ್ಚು ರನ್​ ಕಲೆಹಾಕಿದ ಬ್ಯಾಟರ್​ ಕೂಡ ವಿರಾಟ್ ಕೊಹ್ಲಿ. ಕಿಂಗ್ ಕೊಹ್ಲಿ ಇದುವರೆಗೆ 6903 ರನ್​ಗಳಿಸಿದ್ದು, ಇನ್ನು 97 ರನ್​ಗಳಿಸಿದರೆ ಐಪಿಎಲ್​ನಲ್ಲಿ 7 ಸಾವಿರ ರನ್ ಪೂರೈಸಿದ ಮೊದಲ ಬ್ಯಾಟ್ಸ್​ಮನ್ ಎಂಬ ಹೆಗ್ಗಳಿಕೆಗೆ ವಿರಾಟ್ ಕೊಹ್ಲಿ ಪಾತ್ರರಾಗಲಿದ್ದಾರೆ.

7 / 7
Follow us