16ನೇ ಆವೃತ್ತಿಯ ಐಪಿಎಲ್ ಆರಂಭಕ್ಕೆ ಒಂದು ತಿಂಗಳಿಗಿಂತ ಕಡಿಮೆ ಸಮಯ ಉಳಿದಿದೆ. ಹೀಗಾಗಿ ಎಲ್ಲಾ ಫ್ರಾಂಚೈಸಿಗಳ ತಯಾರಿ ನಿಧಾನವಾಗಿ ಆರಂಭವಾಗಿದೆ. ಒಂದೆಡೆ, ದೆಹಲಿ, ಮುಂಬೈ ಮತ್ತು ಬೆಂಗಳೂರಿನಂತಹ ಫ್ರಾಂಚೈಸಿಗಳು ಪ್ರಸ್ತುತ WPL ಗೆ ತಯಾರಿ ನಡೆಸುತ್ತಿದ್ದರೆ, ಮತ್ತೊಂದೆಡೆ 4 ಬಾರಿಯ ಚಾಂಪಿಯನ್ ಚೆನ್ನೈ ಸೂಪರ್ ಕಿಂಗ್ಸ್ ಐಪಿಎಲ್ 16 ನೇ ಸೀಸನ್‌ನಲ್ಲಿ ಮತ್ತೊಮ್ಮೆ ಟ್ರೋಫಿಯನ್ನು ಎತ್ತಿಹಿಡಿಯುವ ಸಲುವಾಗಿ ತಯಾರಿ ಆರಂಭಿಸಿದೆ.