IPL 2023: ನಾಯಕನಾಗಿ ಯಾರಿಗೂ ಬೇಡದ ದಾಖಲೆಯನ್ನು ತನ್ನ ಖಾತೆಗೆ ಹಾಕಿಕೊಂಡ ರೋಹಿತ್..!

|

Updated on: Apr 03, 2023 | 4:39 PM

Rohit Sharma: ಈ ಪಂದ್ಯದಲ್ಲಿ ಸಿಕ್ಕ ಜೀವದಾನವನ್ನು ಸರಿಯಾಗಿ ಬಳಸಿಕೊಳ್ಳದ ರೋಹಿತ್, ಐಪಿಎಲ್‌ನಲ್ಲಿ ಅತ್ಯಂತ ಕಳಪೆ ಸ್ಟ್ರೈಕ್ ರೇಟ್ ಹೊಂದಿರುವ ಮೊದಲ ನಾಯಕ ಎಂಬ ಕುಖ್ಯಾತಿ ಪಡೆದುಕೊಂಡಿದ್ದಾರೆ.

1 / 5
ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಆರ್‌ಸಿಬಿ ತಂಡ ಮುಂಬೈ ವಿರುದ್ಧ ಭರ್ಜರಿ ಜಯ ಸಾಧಿಸಿದೆ. ಆರ್​ಸಿಬಿ ಬೌಲರ್​ಗಳ ಮುಂದೆ ನಾಯಕ ರೋಹಿತ್ ಸೇರಿದಂತೆ ತಂಡದ ಪ್ರಮುಖ ಬ್ಯಾಟರ್​ಗಳು ವಿಫಲರಾದರು. ಈ ಪಂದ್ಯದಲ್ಲಿ ಸಿಕ್ಕ ಜೀವದಾನವನ್ನು ಸರಿಯಾಗಿ ಬಳಸಿಕೊಳ್ಳದ ರೋಹಿತ್, ಐಪಿಎಲ್‌ನಲ್ಲಿ ಅತ್ಯಂತ ಕಳಪೆ ಸ್ಟ್ರೈಕ್ ರೇಟ್ ಹೊಂದಿರುವ ಮೊದಲ ನಾಯಕ ಎಂಬ ಕುಖ್ಯಾತಿ ಪಡೆದುಕೊಂಡಿದ್ದಾರೆ.

2 / 5
ಈ ಪಂದ್ಯದಲ್ಲಿ ಆರಂಭಿಕರಾಗಿ ಕಣಕ್ಕೆ ಇಳಿದ ರೋಹಿತ್ ಶರ್ಮಾ ರನ್ ಗಳಿಸಲು ಪರದಾಡಿದರು.  ಆರ್‌ಸಿಬಿ ಬೌಲರ್‌ಗಳನ್ನು ಎದುರಿಸಲು ಸಾಕಷ್ಟು ತೊಂದರೆ ಅನುಭವಿಸಿದರು.  ತಮ್ಮ ಇನ್ನಿಂಗ್ಸ್​ನಲ್ಲಿ 10 ಎಸೆತಗಳನ್ನು ಎದುರಿಸಿದ ರೋಹಿತ್ ಕೇವಲ 1 ರನ್ ಗಳಿಸಿ ಪೆವಿಲಿಯನ್ ಸೇರಿಕೊಂಡರು.  ಈ ವೇಳೆ ರೋಹಿತ್ ಸ್ಟ್ರೈಕ್ ರೇಟ್ 10 ಆಗಿತ್ತು.  10 ಎಸೆತಗಳನ್ನು ಆಡಿದ ನಂತರ ಐಪಿಎಲ್‌ನಲ್ಲಿ ತಂಡದ ನಾಯಕನೊಬ್ಬ ಅತ್ಯಂತ ಕಳಪೆ ಸ್ಟ್ರೈಕ್ ರೇಟ್​ನಲ್ಲಿ ಬ್ಯಾಟ್ ಬೀಸಿದ ದಾಖಲೆ ರೋಹಿತ್ ಖಾತೆ ಸೇರಿದೆ.

3 / 5
ಅಷ್ಟೇ ಅಲ್ಲ, ರೋಹಿತ್ ಶರ್ಮಾ 2022ರಲ್ಲಿಯೂ ಎರಡು ಪಂದ್ಯಗಳಲ್ಲಿ ಇದೇ ರೀತಿಯ ಪ್ರದರ್ಶನ ನೀಡಿದ್ದರು. ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ 15.38 ಸ್ಟ್ರೈಕ್ ರೇಟ್​ನಲ್ಲಿ ಬ್ಯಾಟ್​ ಬೀಸಿದ್ದ ರೋಹಿತ್, ಕೋಲ್ಕತ್ತಾ ನೈಟ್ ರೈಡರ್ಸ್ ವಿರುದ್ಧ ಕೇವಲ 25 ರ ಸ್ಟ್ರೈಕ್ ರೇಟ್​ನಲ್ಲಿ ರನ್​ ಗಳಿಸಿದ್ದರು.

4 / 5
ಈ ಆವೃತ್ತಿಯಲ್ಲಿ ಆಡಿದ ಮೊದಲ ಪಂದ್ಯದಲ್ಲೇ ಮುಗ್ಗರಿಸಿರುವ ಮುಂಬೈ ಇಂಡಿಯನ್ಸ್, ಕಳೆದ ವರ್ಷ ಬ್ರಬೋರ್ನ್‌ನಲ್ಲಿ ನಡೆದ ಮೊದಲ ಪಂದ್ಯದಲ್ಲಿಯೂ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ 4 ವಿಕೆಟ್‌ಗಳಿಂದ ಸೋತಿತ್ತು.

5 / 5
ಕಳೆದ ಸೀಸನ್​ನಲ್ಲೂ ರೋಹಿತ್ ಶರ್ಮಾ ತಂಡದ ಪ್ರದರ್ಶನ ಅತ್ಯಂತ ಕಳಪೆಯಾಗಿತ್ತು.  ಐಪಿಎಲ್ 2022 ರಲ್ಲಿ, ಮುಂಬೈ ಇಂಡಿಯನ್ಸ್ ಪಾಯಿಂಟ್ ಪಟ್ಟಿಯಲ್ಲಿ ಕೊನೆಯ ಸ್ಥಾನದಲ್ಲಿ ಅಂದರೆ 10 ನೇ ಸ್ಥಾನದಲ್ಲಿತ್ತು. ಕಳೆದ ವರ್ಷ ರೋಹಿತ್ ಸೇನೆ ಆಡಿದ 14 ಪಂದ್ಯಗಳಲ್ಲಿ ಕೇವಲ 4ರಲ್ಲಿ ಮಾತ್ರ ಗೆಲುವು ಸಾಧಿಸಿತ್ತು.

Published On - 4:39 pm, Mon, 3 April 23