IPL 2023: ಮುಂಬೈ ಇಂಡಿಯನ್ಸ್​ ತಂಡಕ್ಕೆ ವಿದೇಶಿ ಆಲ್​ರೌಂಡರ್ ಎಂಟ್ರಿ

| Updated By: ಝಾಹಿರ್ ಯೂಸುಫ್

Updated on: Apr 30, 2023 | 7:48 PM

IPL 2023 Kannada: ಮುಂಬೈ ಇಂಡಿಯನ್ಸ್ ತಂಡ ಹೀಗಿದೆ: ರೋಹಿತ್ ಶರ್ಮಾ (ನಾಯಕ), ಸೂರ್ಯಕುಮಾರ್ ಯಾದವ್, ಇಶಾನ್ ಕಿಶನ್, ಡೆವಾಲ್ಡ್ ಬ್ರೆವಿಸ್, ತಿಲಕ್ ವರ್ಮಾ, ಟಿಮ್ ಡೇವಿಡ್, ಮೊಹಮ್ಮದ್ ಅರ್ಷದ್ ಖಾನ್, ರಮಣ್‌ದೀಪ್ ಸಿಂಗ್, ಹೃತಿಕ್ ಶೋಕೀನ್.

1 / 7
IPL 2023: ಐಪಿಎಲ್ ಸೀಸನ್ 16 ರಲ್ಲಿ ಸತತ ಸೋಲುಗಳಿಂದ ಕಂಗೆಟ್ಟಿರುವ ಮುಂಬೈ ಇಂಡಿಯನ್ಸ್ ತಂಡಕ್ಕೆ ಇದೀಗ ಹೊಸ ವಿದೇಶಿ ಆಲ್​ರೌಂಡರ್ ಎಂಟ್ರಿ ಕೊಟ್ಟಿದ್ದಾರೆ. ಅದು ಕೂಡ ಬದಲಿ ಆಟಗಾರನಾಗಿ ಎಂಬುದು ವಿಶೇಷ.

2 / 7
ಹೌದು, ಮುಂಬೈ ಇಂಡಿಯನ್ಸ್ ತಂಡದ ಪ್ರಮುಖ ವೇಗಿ ಜೋಫ್ರಾ ಆರ್ಚರ್ ಅರ್ಧದಲ್ಲೇ ಐಪಿಎಲ್ ತೊರೆಯಲಿದ್ದಾರೆ. ಮೊಣಕೈ ನೋವಿನ ಸಮಸ್ಯೆಯಿಂದ ಬಳಲುತ್ತಿರುವ ಆರ್ಚರ್ ಕೇವಲ 2 ಪಂದ್ಯಗಳಲ್ಲಿ ಮಾತ್ರ ಕಣಕ್ಕಿಳಿದಿದ್ದರು. ಇದೀಗ ಗಾಯದ ಸಮಸ್ಯೆ ಬಿಗಡಾಯಿಸಿರುವ ಕಾರಣ ಐಪಿಎಲ್​ನಿಂದ ಹಿಂದೆ ಸರಿಯಲು ನಿರ್ಧರಿಸಿದ್ದಾರೆ.

3 / 7
ಇತ್ತ ಜೋಫ್ರಾ ಆರ್ಚರ್ ಹೊರ ನಡೆಯುವ ನಿರ್ಧಾರ ಬೆನ್ನಲ್ಲೇ, ಮುಂಬೈ ಇಂಡಿಯನ್ಸ್ ಫ್ರಾಂಚೈಸಿಯು ಇಂಗ್ಲೆಂಡ್ ತಂಡದ ಆಲ್​ರೌಂಡರ್ ಕ್ರಿಸ್ ಜೋರ್ಡನ್ ಅವರನ್ನು ತಂಡಕ್ಕೆ ಆಯ್ಕೆ ಮಾಡಿಕೊಂಡಿದೆ. ಅದರಂತೆ ಮುಂಬೈ ತಂಡದ ಮುಂದಿನ ಪಂದ್ಯಗಳಲ್ಲಿ ಜೋರ್ಡನ್ ಕಾಣಿಸಿಕೊಳ್ಳಲಿದ್ದಾರೆ.

4 / 7
ಕಳೆದ ಸೀಸನ್​ನಲ್ಲಿ ಸಿಎಸ್​ಕೆ ಪರ ಆಡಿದ್ದ ಕ್ರಿಸ್ ಜೋರ್ಡನ್ ಅವರನ್ನು ಈ ಬಾರಿ ಯಾವುದೇ ಫ್ರಾಂಚೈಸಿ ಖರೀದಿಸಿರಲಿಲ್ಲ. ಇದೀಗ ಬದಲಿ ಆಟಗಾರನಾಗಿ ಐಪಿಎಲ್​ನ ದ್ವಿತಿಯಾರ್ಧದಲ್ಲಿ ಎಂಟ್ರಿ ಕೊಡುತ್ತಿರುವುದು ವಿಶೇಷ.

5 / 7
ಇಂಗ್ಲೆಂಡ್ ತಂಡದ ಪ್ರಮುಖ ಆಲ್​ರೌಂಡರ್​ಗಳಲ್ಲಿ ಒಬ್ಬರಾಗಿ ಗುರುತಿಸಿಕೊಂಡಿರುವ ಜೋರ್ಡನ್ ಇದುವರೆಗೆ 87 ಟಿ20 ಪಂದ್ಯಗಳಲ್ಲಿ 96 ವಿಕೆಟ್ ಕಬಳಿಸಿದ್ದಾರೆ. ಹಾಗೆಯೇ 53 ಇನಿಂಗ್ಸ್​ಗಳಲ್ಲಿ 432 ರನ್​ ಕಲೆಹಾಕಿದ್ದಾರೆ.

6 / 7
ಇನ್ನು ಐಪಿಎಲ್​ನಲ್ಲಿ ಆರ್​ಸಿಬಿ, ಪಂಜಾಬ್ ಕಿಂಗ್ಸ್, ಎಸ್​ಆರ್​ಹೆಚ್, ಸಿಎಸ್​ಕೆ ಪರ ಒಟ್ಟು 28 ಪಂದ್ಯಗಳನ್ನಾಡಿರುವ ಕ್ರಿಸ್ ಜೋರ್ಡನ್ ಒಟ್ಟು 27 ವಿಕೆಟ್ ಕಬಳಿಸಿದ್ದಾರೆ. ಇದೀಗ ಮುಂಬೈ ಇಂಡಿಯನ್ಸ್ ಬಳಗ ಸೇರಿರುವ ಕ್ರಿಸ್ ಜೋರ್ಡನ್ ತಮ್ಮ ಆಲ್​ರೌಂಡರ್ ಆಟದೊಂದಿಗೆ ಮೋಡಿ ಮಾಡಲಿದ್ದಾರಾ ಕಾದು ನೋಡಬೇಕಿದೆ.

7 / 7
ಮುಂಬೈ ಇಂಡಿಯನ್ಸ್ ತಂಡ ಹೀಗಿದೆ: ರೋಹಿತ್ ಶರ್ಮಾ (ನಾಯಕ), ಸೂರ್ಯಕುಮಾರ್ ಯಾದವ್, ಇಶಾನ್ ಕಿಶನ್, ಡೆವಾಲ್ಡ್ ಬ್ರೆವಿಸ್, ತಿಲಕ್ ವರ್ಮಾ, ಟಿಮ್ ಡೇವಿಡ್, ಮೊಹಮ್ಮದ್ ಅರ್ಷದ್ ಖಾನ್, ರಮಣ್‌ದೀಪ್ ಸಿಂಗ್, ಹೃತಿಕ್ ಶೋಕೀನ್, ಅರ್ಜುನ್ ತೆಂಡೂಲ್ಕರ್, ಟ್ರಿಸ್ಟಾನ್ ಸ್ಟಬ್ಸ್, ಕುಮಾರ್ ಕಾರ್ತಿಕೇಯ, ಜೇಸನ್ ಬೆಹ್ರೆನ್‌ಡಾರ್ಫ್, ಆಕಾಶ್ ಮಧ್ವಾಲ್, ಕ್ಯಾಮರೋನ್ ಗ್ರೀನ್, ಪಿಯೂಷ್ ಚಾವ್ಲಾ, ದುವಾನ್ ಜಾನ್ಸೆನ್, ವಿಷ್ಣು ವಿನೋದ್, ಶಮ್ಸ್ ಮುಲಾನಿ, ನೆಹಾಲ್ ವಧೇರಾ, ರಾಘವ್ ಗೋಯಲ್, ಸಂದೀಪ್ ವಾರಿಯರ್, ರಿಲೇ ಮೆರಿಡಿತ್, ಕ್ರಿಸ್ ಜೋರ್ಡನ್.

Published On - 3:07 pm, Sun, 30 April 23