IPL 2023 Opening Ceremony: ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಸಜ್ಜಾದ ನರೇಂದ್ರ ಮೋದಿ ಸ್ಟೇಡಿಯಂ: ಹೇಗಾಗಿದೆ ನೋಡಿ ಕ್ರೀಡಾಂಗಣ
Narendra Modi Stadium: ಐಪಿಎಲ್ 2023 ಉದ್ಘಾಟನಾ ಸಮಾರಂಭದಲ್ಲಿ ಖ್ಯಾತ ಗಾಯಕ ಅರಿಜಿತ್ ಸಿಂಗ್ ಪ್ರದರ್ಶನ ನೀಡಲಿದ್ದಾರೆ. ಹಾಗೆಯೇ ನಟಿ ತಮನ್ನಾ ಭಾಟಿಯಾ ಭಾಗವಹಿಸುವಿಕೆಯನ್ನು ಖಚಿತಪಡಿಸಲಾಗಿದೆ. ಅಲ್ಲದೆ ಈ ಈವೆಂಟ್‌ನಲ್ಲಿ ಪ್ರದರ್ಶನ ನೀಡಲು ರಶ್ಮಿಕಾ ಮಂದಣ್ಣ ತಯಾರಾಗಿದ್ದಾರೆ.
1 / 7
ಇಂಡಿಯನ್ ಪ್ರೀಮಿಯರ್ ಲೀಗ್ನ 16ನೇ ಆವೃತ್ತಿ ಉದ್ಘಾಟನಾ ಸಮಾರಂಭಕ್ಕೆ ಅಹ್ಮದಾಬಾದ್ನ ನರೇಂದ್ರ ಮೋದಿ ಕ್ರೀಡಾಂಗಣ ಸಜ್ಜಾಗಿ ನಿಂತಿದೆ. ಬಣ್ಣ ಬಣ್ಣಗಳ ಎಲ್ಇಡಿ ಲೈಟ್ನಿಂದ ಮೈದಾನ ಕಂಗೊಳಿಸುತ್ತಿದೆ.
2 / 7
ವಿಶ್ವದ ಅತಿ ದೊಡ್ಡ ಕ್ರಿಕೆಟ್ ಕ್ರೀಡಾಂಗಣವಾದ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ವಿಶೇಷ ಲೇಸರ್ ಶೋ ನಡೆಯಲಿದ್ದು ಎಲ್ಲ ಸಿದ್ಧತೆ ಆರಂಭವಾಗಿದೆ.
3 / 7
ಐಪಿಎಲ್ ಉದ್ಘಾಟನಾ ಸಮಾರಂಭದಲ್ಲಿ ಖ್ಯಾತ ಗಾಯಕ ಅರಿಜಿತ್ ಸಿಂಗ್ ಪ್ರದರ್ಶನ ನೀಡಲಿದ್ದಾರೆ. ಹಾಗೆಯೇ ನಟಿ ತಮನ್ನಾ ಭಾಟಿಯಾ ಭಾಗವಹಿಸುವಿಕೆಯನ್ನು ಖಚಿತಪಡಿಸಲಾಗಿದೆ. ಅಲ್ಲದೆ ಈ ಈವೆಂಟ್‌ನಲ್ಲಿ ಪ್ರದರ್ಶನ ನೀಡಲು ರಶ್ಮಿಕಾ ಮಂದಣ್ಣ ತಯಾರಾಗಿದ್ದಾರೆ.
4 / 7
ಬಾಲಿವುಡ್ ನಟಿ ಕತ್ರಿನಾ ಕೈಫ್ ಹಾಗೂ ನಟ ಟೈಗರ್ ಶ್ರಾಫ್ ಕೂಡ ಇರಲಿದ್ದಾರೆ ಎಂಬ ಮಾಹಿತಿ ಇದೆ. ಮಾಹಿತಿ ಪ್ರಕಾರ ಈ ಉದ್ಘಾಟನಾ ಸಮಾರಂಭದಲ್ಲಿ ಎಲ್ಲಾ 10 ತಂಡಗಳ ನಾಯಕರು ಭಾಗವಹಿಸುವುದಿಲ್ಲ ಎಂಬುದು ತಿಳಿದುಬಂದಿದೆ.
5 / 7
ಐಪಿಎಲ್ ಉದ್ಘಾಟನಾ ಸಮಾರಂಭವು ಸಂಜೆ 6 ಗಂಟೆಗೆ ಪ್ರಾರಂಭವಾಗುವ ನಿರೀಕ್ಷೆಯಿದೆ ಮತ್ತು ಸುಮಾರು 45 ನಿಮಿಷಗಳ ಕಾಲ ನಡೆಯಲಿದೆ ಎಂಬ ಮಾಹಿತಿ ಇದೆ.
6 / 7
ಪ್ರಮುಖ ಸಂಗತಿಯೆಂದರೆ ಬರೋಬ್ಬರಿ ನಾಲ್ಕು ವರ್ಷಗಳ ನಂತರ ಐಪಿಎಲ್ ಭಾರತದಲ್ಲಿ ಆಯೋಜನೆಯಾಗುತ್ತಿದೆ. ಕೊರೊನಾ ಸೋಂಕಿನಿಂದಾಗಿ ಕಳೆದ 3 ಆವೃತ್ತಿಗಳನ್ನು ಬಿಸಿಸಿಐ ವಿದೇಶಿ ನೆಲದಲ್ಲಿ ಆಡಿಸಿತ್ತು. ಇದೀಗ ತವರಿಗೆ ಮರಳಿರುವ ಈ ಟೂರ್ನಿಗೆ ಇನ್ನಷ್ಟು ರಂಗು ತರಲು ಬಿಸಿಸಿಐ ಮುಂದಾದೆ.
7 / 7
ಇಂದು ನಡೆಯಲಿರುವ ಮೊದಲ ಪಂದ್ಯದಲ್ಲಿ ಹಾರ್ದಿಕ್ ಪಾಂಡ್ಯ ನಾಯಕತ್ವದ ಗುಜರಾತ್ ಟೈಟಾನ್ಸ್ ಹಾಗೂ ಎಂಎಸ್ ಧೋನಿ ನೇತೃತ್ವದ ಚೆನ್ನೈ ಸೂಪರ್ ಕಿಂಗ್ಸ್ ತಂಡಗಳು ಮುಖಾಮುಖಿ ಆಗಲಿದೆ.v