IPL 2023: RCB ಸೋಲನ್ನು ಸಂಭ್ರಮಿಸಿದ್ರಾ ನವೀನ್ ಉಲ್ ಹಕ್?

IPL 2023 Kannada: ನವೀನ್ ಉಲ್ ಹಕ್ ಈಗಾಗಲೇ ಆರ್​ಸಿಬಿ ಹಾಗೂ ವಿರಾಟ್ ಕೊಹ್ಲಿ ಅಭಿಮಾನಿಗಳ ಕೆಂಗಣ್ಣಿಗೆ ಗುರಿಯಾಗಿದ್ದಾರೆ. ಮೇ 1 ರಂದು ಲಕ್ನೋ ಸೂಪರ್ ಜೈಂಟ್ಸ್ ಹಾಗೂ ಆರ್​ಸಿಬಿ ನಡುವಣ ಪಂದ್ಯದ ವೇಳೆ ವಿರಾಟ್ ಕೊಹ್ಲಿ ಹಾಗೂ ನವೀನ್ ಉಲ್ ಹಕ್ ನಡುವೆ ವಾಕ್ಸಮರ ನಡೆದಿತ್ತು.

TV9 Web
| Updated By: ಝಾಹಿರ್ ಯೂಸುಫ್

Updated on: May 22, 2023 | 3:21 PM

IPL 2023: ಇಂಡಿಯನ್ ಪ್ರೀಮಿಯರ್ ಲೀಗ್​ನ ಕೊನೆಯ ಲೀಗ್ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ ವಿರುದ್ಧ ಸೋತು ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡವು ಐಪಿಎಲ್​ನಿಂದ ಹೊರಬಿದ್ದಿದೆ. ಪ್ಲೇಆಫ್ ಪ್ರವೇಶಿಸಲು ನಿರ್ಣಾಯಕವಾಗಿದ್ದ ಈ ಪಂದ್ಯದಲ್ಲಿ ಆರ್​ಸಿಬಿ 6 ವಿಕೆಟ್​ಗಳಿಂದ ಸೋಲೊಪ್ಪಿಕೊಂಡಿತು.

1 / 8
ಇತ್ತ ಆರ್​ಸಿಬಿ ತಂಡ ಸೋಲುತ್ತಿದ್ದಂತೆ ಅತ್ತ ಲಕ್ನೋ ಸೂಪರ್ ಜೈಂಟ್ಸ್ ತಂಡದ ಆಟಗಾರ ನವೀನ್ ಉಲ್ ಹಕ್ ಇನ್​ಸ್ಟಾಗ್ರಾಮ್​ನಲ್ಲಿ ಪೋಸ್ಟ್​ವೊಂದನ್ನು ಹಂಚಿಕೊಂಡಿದ್ದಾರೆ.

2 / 8
ತಮಾಷೆಯಿಂದ ಕೂಡಿರುವ ಪೋಸ್ಟ್​ನಲ್ಲಿ ವ್ಯಕ್ತಿಯೊಬ್ಬರು ಸಖತ್ ಸಂತಸದಿಂದ ನಗುತ್ತಿರುವುದನ್ನು ಕಾಣಬಹುದು. ಇತ್ತ ಆರ್​ಸಿಬಿ ತಂಡ ಗುಜರಾತ್ ಟೈಟಾನ್ಸ್ ವಿರುದ್ಧ ಸೋಲುತ್ತಿದ್ದಂತೆ ನವೀನ್ ಇಂತಹದೊಂದು ಪೋಸ್ಟ್ ಹಂಚಿಕೊಂಡಿರುವುದು ಇದೀಗ ಚರ್ಚೆಗೆ ಕಾರಣವಾಗಿದೆ.

3 / 8
ಅದರಲ್ಲೂ ಆರ್​ಸಿಬಿ ತಂಡದ ಸೋಲನ್ನು ನವೀನ್ ಉಲ್ ಹಕ್ ಈ ರೀತಿಯಾಗಿ ಸಂಭ್ರಮಿಸಿದ್ದಾರೆ ಎಂದು ವಿಶ್ಲೇಷಿಸಲಾಗುತ್ತಿದೆ. ಏಕೆಂದರೆ ಇದಕ್ಕೂ ಮುನ್ನ ಮುಂಬೈ ಇಂಡಿಯನ್ಸ್ ವಿರುದ್ಧದ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಔಟಾದಾಗ ನವೀನ್ ಸ್ವೀಟ್ ಮ್ಯಾಂಗೋ ಎಂದು ಪೋಸ್ಟ್ ಹಾಕಿ ಕಿಚಾಯಿಸಿದ್ದರು.

4 / 8
ಇದೀಗ ಹೀಯಾಳಿಸುವ ನಗುವನ್ನು ಹೊಂದಿರುವ ಪೋಸ್ಟ್​ವೊಂದನ್ನು ಹಾಕಿ ನವೀನ್ ಉಲ್ ಹಕ್ ತಮ್ಮ ಮನದಿಂಗಿತವನ್ನು ವ್ಯಕ್ತಪಡಿಸಿದ್ದಾರೆ ಎಂದು ಹೇಳಲಾಗುತ್ತಿದೆ.

5 / 8
ಅಂದಹಾಗೆ ನವೀನ್ ಉಲ್ ಹಕ್ ಈಗಾಗಲೇ ಆರ್​ಸಿಬಿ ಹಾಗೂ ವಿರಾಟ್ ಕೊಹ್ಲಿ ಅಭಿಮಾನಿಗಳ ಕೆಂಗಣ್ಣಿಗೆ ಗುರಿಯಾಗಿದ್ದಾರೆ. ಮೇ 1 ರಂದು ಲಕ್ನೋ ಸೂಪರ್ ಜೈಂಟ್ಸ್ ಹಾಗೂ ಆರ್​ಸಿಬಿ ನಡುವಣ ಪಂದ್ಯದ ವೇಳೆ ವಿರಾಟ್ ಕೊಹ್ಲಿ ಹಾಗೂ ನವೀನ್ ಉಲ್ ಹಕ್ ನಡುವೆ ವಾಕ್ಸಮರ ನಡೆದಿತ್ತು. ಅಲ್ಲದೆ ಹಸ್ತಲಾಘವ ನೀಡುವ ವೇಳೆಯು ಕೊಹ್ಲಿ ಜೊತೆ ನವೀನ್ ಕಿತ್ತಾಡಿಕೊಂಡಿದ್ದರು.

6 / 8
ಈ ಅಹಿತಕರ ಘಟನೆಯಲ್ಲಿ ಭಾಗಿಯಾಗಿದ್ದ ವಿರಾಟ್ ಕೊಹ್ಲಿ, ಗೌತಮ್ ಗಂಭೀರ್ ಹಾಗೂ ನವೀನ್ ಉಲ್​ ಹಕ್​ಗೆ ಬಿಸಿಸಿಐ ದಂಡ ವಿಧಿಸುವ ಮೂಲಕ ಬಿಸಿ ಮುಟ್ಟಿಸಿತ್ತು. ಅಲ್ಲಿಗೆ ಮುಕ್ತಾಯವಾಗಬೇಕಿದ್ದ ಆಟಗಾರರ ನಡುವಣ ಜಿದ್ದಾಜಿದ್ದು ಇದೀಗ ಸೋಷಿಯಲ್ ಮೀಡಿಯಾದಲ್ಲಿ ಮುಂದುವರೆದಿದೆ.

7 / 8
ಇದರ ನಡುವೆ ಮತ್ತೊಮ್ಮೆ ಅಭಿಮಾನಿಗಳನ್ನು ಕೆಣಕುವಂತಹ ಪೋಸ್ಟ್ ಹಾಕುವ ಮೂಲಕ ನವೀನ್ ಉಲ್ ಹಕ್ ಆರ್​ಸಿಬಿ ಫ್ಯಾನ್ಸ್​ನ ಕೆಂಗಣ್ಣಿಗೆ ಗುರಿಯಾಗಿದ್ದಾರೆ.

8 / 8
Follow us
ಡಿಸೆಂಬರ್ 29ರಂದು ನಿಧನರಾದ ದಿವಿನ್ ಫೆಬ್ರುವರಿ 22ರಂದು ಮದುವೆಯಾಗಲಿದ್ದರು

ಬಿಗ್​ ಬಾಸ್ ಮನೆಗೆ ಬಂದ ಗೌತಮಿ ಜಾದವ್ ಪತಿ​; ಹೇಗಿತ್ತು ಮಂಜು ರಿಯಾಕ್ಷನ್?

ಭಾವುಕ ಜೀವಿ ಸಾರಾ ಮಹೇಶ್ ಗತಿಸಿದ ಚಿಂಟುಳನ್ನು ನೆನೆದು ಕಣ್ಣೀರಾಗುತ್ತಾರೆ!

ರಸ್ತೆ ತಡೆಗೋಡೆಯಿಲ್ಲದಿದ್ದರೆ ಬಸ್ಸು ಪ್ರಪಾತಕ್ಕೆ ಉರುಳುತಿತ್ತು!

ಕೆಪಿಸಿಸಿ ಅಧ್ಯಕ್ಷನನ್ನು ಬದಲಾಯಿಸುವುದು ಹೈಕಮಾಂಡ್​ಗೆ ಬಿಟ್ಟ ವಿಚಾರ: ಸಚಿವ

ತಂದೆ ಮುಖ ನೋಡಿ ಅಳು ನಿಲ್ಲಿಸಲೇ ಇಲ್ಲ ಉಗ್ರಂ ಮಂಜು; ಎಮೋಷನಲ್ ಎಪಿಸೋಡ್

ಪೊಲೀಸರ ಮೇಲೆ ಅಪಾರ ನಂಬಿಕೆಯಿದೆ, ಸಿಬಿಐ ತನಿಖೆ ಬೇಕಿಲ್ಲ: ಸಿದ್ದರಾಮಯ್ಯ

ಸಂವಿಧಾನದ ಆಶಯಗಳಿಗೆ ಕಾಂಗ್ರೆಸ್​ನಿಂದ ಅಪಪ್ರಚಾರ: ಸಿಟಿ ರವಿ

ಯುವಕ ಯುವತಿಯರ ಜೊತೆ ಮಧ್ಯವಯಸ್ಕ ಮಹಿಳೆಯರೂ ಪಬ್​ಗೆ ಬಂದಿದ್ದರು

ಹೊಸ ವರ್ಷಕ್ಕೆ ಸಿಹಿ ಸುದ್ದಿ ಕೊಟ್ಟ ಶಿವಣ್ಣ: ವಿಡಿಯೋ ನೋಡಿ