Nicholas Pooran: ದಾಖಲೆಯ ಬ್ಯಾಟಿಂಗ್ ಮೂಲಕ RCB ಯ ಗೆಲುವು ಕಸಿದ ನಿಕೋಲಸ್ ಪೂರನ್

Edited By:

Updated on: Apr 10, 2023 | 11:53 PM

IPL 2023 Kannada: ಈ ಪಂದ್ಯದಲ್ಲಿ 6ನೇ ಕ್ರಮಾಂಕದಲ್ಲಿ ಕಣಕ್ಕಿಳಿದ ನಿಕೋಲಸ್ ಪೂರನ್ ಕೇವಲ 15 ಎಸೆತಗಳಲ್ಲಿ ಅರ್ಧಶತಕ ಪೂರೈಸಿದರು.

1 / 7
IPL 2023 RCB vs LSG: ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧದ ಪಂದ್ಯದಲ್ಲಿ ಸ್ಪೋಟಕ ಅರ್ಧಶತಕ ಸಿಡಿಸುವ ಮೂಲಕ ಲಕ್ನೋ ಸೂಪರ್ ಜೈಂಟ್ಸ್​ ತಂಡದ ನಿಕೋಲಸ್ ಪೂರನ್ ಭರ್ಜರಿ ದಾಖಲೆ ನಿರ್ಮಿಸಿದ್ದಾರೆ.

IPL 2023 RCB vs LSG: ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧದ ಪಂದ್ಯದಲ್ಲಿ ಸ್ಪೋಟಕ ಅರ್ಧಶತಕ ಸಿಡಿಸುವ ಮೂಲಕ ಲಕ್ನೋ ಸೂಪರ್ ಜೈಂಟ್ಸ್​ ತಂಡದ ನಿಕೋಲಸ್ ಪೂರನ್ ಭರ್ಜರಿ ದಾಖಲೆ ನಿರ್ಮಿಸಿದ್ದಾರೆ.

2 / 7

ಈ ಪಂದ್ಯದಲ್ಲಿ 6ನೇ ಕ್ರಮಾಂಕದಲ್ಲಿ ಕಣಕ್ಕಿಳಿದ ನಿಕೋಲಸ್ ಪೂರನ್ ಕೇವಲ 15 ಎಸೆತಗಳಲ್ಲಿ ಅರ್ಧಶತಕ ಪೂರೈಸಿದರು. ಇದರೊಂದಿಗೆ ಈ ಬಾರಿಯ ಐಪಿಎಲ್​ನಲ್ಲಿ ಅತೀ ವೇಗದ ಅರ್ಧಶತಕ ಬಾರಿಸಿದ ದಾಖಲೆ ಪೂರನ್ ಪಾಲಾಯಿತು.

3 / 7

ಅಷ್ಟೇ ಅಲ್ಲದೆ ಲಕ್ನೋ ಸೂಪರ್ ಜೈಂಟ್ಸ್ ತಂಡದ ಪರ ಅತ್ಯಂತ ವೇಗದ ಅರ್ಧಶತಕ ಬಾರಿಸಿದ ದಾಖಲೆ ಕೂಡ ವಿಂಡೀಸ್ ದಾಂಡಿಗ ಪೂರನ್ ಪಾಲಾಗಿದೆ. ಇದಲ್ಲದೆ ಐಪಿಎಲ್​ನಲ್ಲಿ ಅತೀ ವೇಗದ ಹಾಫ್ ಸೆಂಚುರಿ ಸಿಡಿಸಿದ ಮೂರನೇ ಬ್ಯಾಟರ್ ಎನಿಸಿಕೊಂಡಿದ್ದಾರೆ.

4 / 7

ಐಪಿಎಲ್​ನಲ್ಲಿ ಅತ್ಯಂತ ವೇಗದ ಅರ್ಧಶತಕ ಬಾರಿಸಿದ ದಾಖಲೆ ಕೆಎಲ್ ರಾಹುಲ್ ಹೆಸರಿನಲ್ಲಿದೆ. 2018 ರಲ್ಲಿ ಕೆಎಲ್ ರಾಹುಲ್ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಕೇವಲ 14 ಎಸೆತಗಳಲ್ಲಿ ಅರ್ಧಶತಕ ಸಿಡಿಸಿದ್ದರು.

5 / 7

ಇದರ ನಂತರ 2022 ರಲ್ಲಿ ಪ್ಯಾಟ್ ಕಮಿನ್ಸ್ ಮುಂಬೈ ಇಂಡಿಯನ್ಸ್ ವಿರುದ್ಧ 14 ಎಸೆತಗಳಲ್ಲೇ ಹಾಫ್ ಸೆಂಚುರಿ ಬಾರಿಸುವ ಮೂಲಕ ಕೆಎಲ್ ರಾಹುಲ್ ಅವರ ದಾಖಲೆ ಸರಿಗಟ್ಟಿದ್ದರು.

6 / 7

ಇದೀಗ ಕೇವಲ 15 ಎಸೆತಗಳಲ್ಲಿ ಅರ್ಧಶತಕ ಸಿಡಿಸುವ ಮೂಲಕ ನಿಕೋಲಸ್ ಪೂರನ್, ಯೂಸುಫ್ ಪಠಾಣ್ (15 ಎಸೆತ) ಹಾಗೂ ಸುನಿಲ್ ನರೈನ್ (15 ಎಸೆತ) ಜೊತೆ ಜಂಟಿಯಾಗಿ ಮೂರನೇ ಸ್ಥಾನ ಅಲಂಕರಿಸಿದ್ದಾರೆ.

7 / 7

ಇನ್ನು ಈ ಪಂದ್ಯದಲ್ಲಿ ಕೇವಲ 19 ಎಸೆತಗಳಲ್ಲಿ 7 ಭರ್ಜರಿ ಸಿಕ್ಸ್ ಹಾಗೂ 4 ಫೋರ್​ನೊಂದಿಗೆ 62 ರನ್​ ಬಾರಿಸಿ ನಿಕೋಲಸ್ ಪೂರನ್ ಆರ್​ಸಿಬಿ ತೆಕ್ಕೆಯಿಂದ ಜಯವನ್ನು ಕಸಿದುಕೊಂಡರು. ಅಂತಿಮವಾಗಿ ಲಕ್ನೋ ಸೂಪರ್ ಜೈಂಟ್ಸ್​ 213 ರನ್​ಗಳ ಗುರಿಯನ್ನು ಚೇಸ್ ಮಾಡಿ 1 ವಿಕೆಟ್​ನ ರೋಚಕ ಜಯ ಸಾಧಿಸಿತು.

Published On - 11:52 pm, Mon, 10 April 23

Loading...
Unable to load recommendations.
Follow Us