ಈ ಬಾರಿಯ ಐಪಿಎಲ್ ಮಾರ್ಚ್ 31 ರಿಂದ ಪ್ರಾರಂಭವಾಗಲಿದ್ದು, ಮೊದಲ ಪಂದ್ಯವು ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆಯಲಿದೆ. ಇದಕ್ಕೂ ಮುನ್ನ ಐಪಿಎಲ್ ಉದ್ಘಾಟನಾ ಸಮಾರಂಭವೂ ನಡೆಯಲಿದ್ದು, ಇದರಲ್ಲಿ ಹಲವು ಬಾಲಿವುಡ್ ತಾರೆಯರು ಕಾಣಿಸಿಕೊಳ್ಳಲಿದ್ದಾರೆ. ಉದ್ಘಾಟನಾ ಸಮಾರಂಭದಲ್ಲಿ ಯಾವ ತಾರೆಯರು ಪ್ರದರ್ಶನ ನೀಡಲಿದ್ದಾರೆ ಎಂಬುದರ ಕುರಿತು ಇನ್ನೂ ಅಧಿಕೃತ ಮಾಹಿತಿ ಹೊರಬಿದ್ದಿಲ್ಲ. ಆದರೆ ಕೆಲವು ಸ್ಟಾರ್ಗಳ ಹೆಸರುಗಳು ಸಖತ್ ಸದ್ದು ಮಾಡುತ್ತಿವೆ.