Updated on: Apr 26, 2023 | 11:30 PM
IPL 2023: ಇಂಡಿಯನ್ ಪ್ರೀಮಿಯರ್ ಲೀಗ್ನ 36 ಪಂದ್ಯಗಳು ಮುಕ್ತಾಯಗೊಂಡಿದೆ. ಇತ್ತ ಆಡಿರುವ 8 ಪಂದ್ಯಗಳಲ್ಲಿ ಬ್ಯಾಟಿಂಗ್ ಹಾಗೂ ಬೌಲಿಂಗ್ನಲ್ಲಿ ಭರ್ಜರಿ ಪ್ರದರ್ಶನ ನೀಡುವ ಮೂಲಕ ಆರ್ಸಿಬಿ ಆಟಗಾರರು ಆರೆಂಜ್ ಹಾಗೂ ಪರ್ಪಲ್ ಕ್ಯಾಪ್ ತಮ್ಮದಾಗಿಸಿಕೊಂಡಿದ್ದಾರೆ.
36 ಪಂದ್ಯಗಳ ಬಳಿಕ ಅತ್ಯಧಿಕ ರನ್ ಕಲೆಹಾಕಿರುವ ಆರ್ಸಿಬಿ ತಂಡದ ನಾಯಕ ಫಾಫ್ ಡುಪ್ಲೆಸಿಸ್ ಆರೆಂಜ್ ಕ್ಯಾಪ್ ಧರಿಸಿದ್ದಾರೆ. ಡುಪ್ಲೆಸಿಸ್ 8 ಪಂದ್ಯಗಳಿಂದ 422 ರನ್ ಕಲೆಹಾಕಿದ್ದಾರೆ. ಈ ವೇಳೆ 5 ಅರ್ಧಶತಕಗಳನ್ನು ಬಾರಿಸಿ ಮಿಂಚಿದ್ದಾರೆ.
ಸದ್ಯ ಆರೆಂಜ್ ಕ್ಯಾಪ್ ಧರಿಸಿರುವ ಫಾಫ್ ಡುಪ್ಲೆಸಿಸ್ಗೆ ಪೈಪೋಟಿ ನೀಡುತ್ತಿರುವುದು ಕೂಡ ಆರ್ಸಿಬಿ ಆಟಗಾರ. ಅಂದರೆ ಈ ಪಟ್ಟಿಯಲ್ಲಿ ದ್ವಿತೀಯ ಸ್ಥಾನದಲ್ಲಿರುವುದು ವಿರಾಟ್ ಕೊಹ್ಲಿ. ಕಿಂಗ್ ಕೊಹ್ಲಿ 8 ಪಂದ್ಯಗಳಿಂದ 321 ರನ್ ಕಲೆಹಾಕಿ ಆರೆಂಜ್ ಕ್ಯಾಪ್ ರೇಸ್ನಲ್ಲಿ 2ನೇ ಸ್ಥಾನದಲ್ಲಿದ್ದಾರೆ.
ಇನ್ನು ಬೌಲಿಂಗ್ ವಿಭಾಗದಲ್ಲಿ ಮೊಹಮ್ಮದ್ ಸಿರಾಜ್ ಅತ್ಯಧಿಕ ವಿಕೆಟ್ ಪಡೆದು ಅಗ್ರಸ್ಥಾನದಲ್ಲಿದ್ದಾರೆ. 8 ಪಂದ್ಯಗಳಿಂದ 7.31 ರನ್ ಸರಾಸರಿಯಲ್ಲಿ 14 ವಿಕೆಟ್ ಕಬಳಿಸಿರುವ ಸಿರಾಜ್ ಪರ್ಪಲ್ ಕ್ಯಾಪ್ ಧರಿಸಿದ್ದಾರೆ.
ಇದಾಗ್ಯೂ ಸಿರಾಜ್ಗೆ ಗುಜರಾತ್ ಟೈಟಾನ್ಸ್ ತಂಡದ ಸ್ಪಿನ್ನರ್ ರಶೀದ್ ಖಾನ್ರಿಂದ ಭರ್ಜರಿ ಪೈಪೋಟಿ ಕಂಡು ಬರುತ್ತಿದೆ. ರಶೀದ್ ಖಾನ್ 7 ಪಂದ್ಯಗಳಿಂದ 14 ವಿಕೆಟ್ ಪಡೆದು 2ನೇ ಸ್ಥಾನದಲ್ಲಿದ್ದಾರೆ. ಹೀಗಾಗಿ ಮುಂದಿನ ಪಂದ್ಯಗಳಲ್ಲಿ ಸಿರಾಜ್ ಹಾಗೂ ರಶೀದ್ ನಡುವೆ ಪರ್ಪಲ್ ಕ್ಯಾಪ್ಗಾಗಿ ಭರ್ಜರಿ ಪೈಪೋಟಿ ಕಂಡು ಬರಲಿದೆ.
ಒಟ್ಟಿನಲ್ಲಿ ಕಪ್ ಗೆಲ್ಲುವ ಉತ್ಸಾಹದಲ್ಲಿರುವ ಆರ್ಸಿಬಿ ಪರ ಫಾಫ್ ಡುಪ್ಲೆಸಿಸ್ ಹಾಗೂ ಮೊಹಮ್ಮದ್ ಸಿರಾಜ್ ಭರ್ಜರಿ ಪ್ರದರ್ಶನ ನೀಡುತ್ತಿದ್ದು, ಈ ಮೂಲಕ ಆರೆಂಜ್ ಕ್ಯಾಪ್ ಹಾಗೂ ಪರ್ಪಲ್ ಕ್ಯಾಪ್ ಧರಿಸಿದ್ದಾರೆ.