IPL 2023: RCB ಆಟಗಾರರ ಕೈಯಲ್ಲಿ ಪರ್ಪಲ್​-ಆರೆಂಜ್ ಕ್ಯಾಪ್ಸ್

IPL 2023 Kannada: ಆರಂಭಿಕರಾಗಿ ಕಣಕ್ಕಿಳಿದ ಫಾಫ್ ಡುಪ್ಲೆಸಿಸ್ ಹಾಗೂ ವಿರಾಟ್ ಕೊಹ್ಲಿ 137 ರನ್​ಗಳ ಜೊತೆಯಾಟವಾಡುವ ಮೂಲಕ ತಂಡಕ್ಕೆ ಭರ್ಜರಿ ಆರಂಭ ಒದಗಿಸಿದ್ದರು.

TV9 Web
| Updated By: ಝಾಹಿರ್ ಯೂಸುಫ್

Updated on: Apr 20, 2023 | 8:30 PM

IPL 2023: ಮೊಹಾಲಿಯಲ್ಲಿ ನಡೆದ ಪಂಜಾಬ್ ಕಿಂಗ್ಸ್ ವಿರುದ್ಧದ ಪಂದ್ಯದಲ್ಲಿ ಭರ್ಜರಿ ಜಯ ಸಾಧಿಸುವ ಮೂಲಕ ಆರ್​ಸಿಬಿ ತಂಡವು ಗೆಲುವಿನ ಲಯಕ್ಕೆ ಮರಳಿದೆ. ಈ ಪಂದ್ಯದಲ್ಲಿ ಭರ್ಜರಿ ಪ್ರದರ್ಶನ ನೀಡಿದ ಆಟಗಾರರೆಂದರೆ ಫಾಫ್ ಡುಪ್ಲೆಸಿಸ್, ವಿರಾಟ್ ಕೊಹ್ಲಿ ಹಾಗೂ ಮೊಹಮ್ಮದ್ ಸಿರಾಜ್.

1 / 9
ಆರಂಭಿಕರಾಗಿ ಕಣಕ್ಕಿಳಿದ ಫಾಫ್ ಡುಪ್ಲೆಸಿಸ್ ಹಾಗೂ ವಿರಾಟ್ ಕೊಹ್ಲಿ 137 ರನ್​ಗಳ ಜೊತೆಯಾಟವಾಡುವ ಮೂಲಕ ತಂಡಕ್ಕೆ ಭರ್ಜರಿ ಆರಂಭ ಒದಗಿಸಿದ್ದರು. ಅಷ್ಟೇ ಅಲ್ಲದೆ ಕೊಹ್ಲಿ 59 ರನ್​ ಬಾರಿಸಿದರೆ, ಫಾಫ್ ಡುಪ್ಲೆಸಿಸ್ 56 ಎಸೆತಗಳಲ್ಲಿ 5 ಭರ್ಜರಿ ಸಿಕ್ಸ್, 5 ಫೋರ್​ನೊಂದಿಗೆ 84 ರನ್​ ಕಲೆಹಾಕಿದರು.

2 / 9
ಈ 84 ರನ್​ಗಳೊಂದಿಗೆ ಇದೀಗ ಫಾಫ್ ಡುಪ್ಲೆಸಿಸ್ ಅವರ ವೈಯುಕ್ತಿಕ ಸ್ಕೋರ್​ 300 ರ ಗಡಿದಾಟಿದೆ. ಈ ಮೂಲಕ ಆರೆಂಜ್ ಕ್ಯಾಪ್ ಪಟ್ಟಿಯಲ್ಲಿ ಆರ್​ಸಿಬಿ ನಾಯಕ ಅಗ್ರಸ್ಥಾನದಲ್ಲಿದ್ದಾರೆ.

3 / 9
ಫಾಫ್ ಡುಪ್ಲೆಸಿಸ್ 6 ಪಂದ್ಯಗಳಿಂದ ಒಟ್ಟು 343 ರನ್​ ಕಲೆಹಾಕಿದ್ದಾರೆ. ಈ ವೇಳೆ 4 ಅರ್ಧಶತಕಗಳು, 25 ಫೋರ್​ಗಳು ಹಾಗೂ 23 ಸಿಕ್ಸ್​ಗಳು ಬ್ಯಾಟ್​ನಿಂದ ಮೂಡಿಬಂದಿವೆ. ಇದೀಗ ಆರೆಂಜ್ ಕ್ಯಾಪ್​ ಧರಿಸಿರುವ ಡುಪ್ಲೆಸಿಸ್ ಮುಂದಿನ ಪಂದ್ಯಗಳಲ್ಲೂ ತಮ್ಮ ಭರ್ಜರಿ ಫಾರ್ಮ್​ ಮುಂದುವರೆಸುವ ವಿಶ್ವಾಸದಲ್ಲಿದ್ದಾರೆ.

4 / 9
IPL 2023: RCB ಆಟಗಾರರ ಕೈಯಲ್ಲಿ ಪರ್ಪಲ್​-ಆರೆಂಜ್ ಕ್ಯಾಪ್ಸ್

5 / 9
ಇನ್ನು ಮೊಹಾಲಿಯಲ್ಲಿ ಪಂಜಾಬ್ ಕಿಂಗ್ಸ್ ವಿರುದ್ಧದ ಪಂದ್ಯದಲ್ಲಿ ಮಾರಕ ದಾಳಿ ಸಂಘಟಿಸಿದ ಮೊಹಮ್ಮದ್ ಸಿರಾಜ್ 4 ಓವರ್​ಗಳಲ್ಲಿ ಕೇವಲ 21 ರನ್​ ನೀಡಿ 4 ವಿಕೆಟ್ ಕಬಳಿಸಿದ್ದರು. ಈ ನಾಲ್ಕು ವಿಕೆಟ್​ಗಳೊಂದಿಗೆ ಸಿರಾಜ್ ಅವರ ಒಟ್ಟು ವಿಕೆಟ್ 12 ಕ್ಕೇರಿದೆ.

6 / 9
ಈ ಬಾರಿ ಒಟ್ಟು 6 ಪಂದ್ಯಗಳಲ್ಲಿ ಬೌಲಿಂಗ್ ಮಾಡಿರುವ ಮೊಹಮ್ಮದ್ ಸಿರಾಜ್ 24 ಓವರ್​ಗಳಲ್ಲಿ 161 ರನ್ ನೀಡಿ 12 ವಿಕೆಟ್ ಕಬಳಿಸಿದ್ದಾರೆ. ಈ ಭರ್ಜರಿ ಪ್ರದರ್ಶನದ ಮೂಲಕ ಪರ್ಪಲ್ ಕ್ಯಾಪ್​ ಧರಿಸಿದ್ದಾರೆ.

7 / 9
ಸದ್ಯ ಪರ್ಪಲ್​ ಕ್ಯಾಪ್​ ಪಟ್ಟಿಯಲ್ಲಿ ಸಿರಾಜ್ ಅಗ್ರಸ್ಥಾನದಲ್ಲಿದ್ದು, ನಂತರದ ಸ್ಥಾನದಲ್ಲಿ 11 ವಿಕೆಟ್ ಕಬಳಿಸಿರುವ ಲಕ್ನೋ ಸೂಪರ್ ಜೈಂಟ್ಸ್ ತಂಡದ ಮಾರ್ಕ್​ ವುಡ್, ಗುಜರಾತ್ ಟೈಟಾನ್ಸ್ ತಂಡದ ರಶೀದ್ ಖಾನ್, ರಾಜಸ್ಥಾನ್ ರಾಯಲ್ಸ್ ತಂಡದ ಯುಜ್ವೇಂದ್ರ ಚಹಾಲ್ ಇದ್ದಾರೆ. ಹೀಗಾಗಿ ಮುಂಬರುವ ಪಂದ್ಯಗಳಲ್ಲಿ ಪರ್ಪಲ್​ ಕ್ಯಾಪ್​ಗಾಗಿ ಭರ್ಜರಿ ಪೈಪೋಟಿ ಕಂಡು ಬರಲಿದೆ.

8 / 9
ಪರ್ಪಲ್ ಕ್ಯಾಪ್, ಆರೆಂಜ್ ಕ್ಯಾಪ್​ನೊಂದಿಗೆ ಮೊಹಮ್ಮದ್ ಸಿರಾಜ್ ಹಾಗೂ ಫಾಫ್ ಡುಪ್ಲೆಸಿಸ್

9 / 9
Follow us
Video: ಜಾರ್ಖಂಡ್​ನಲ್ಲಿ ಬಸ್ ಪಲ್ಟಿ, 7 ಮಂದಿ ಸಾವು

ರಾಜ್ಯದಲ್ಲಿ ಅಧಿಕಾರ ನಡೆಸುತ್ತಿರೋದು ಒಂದು ಯು-ಟರ್ನ್ ಸರ್ಕಾರ: ಬೊಮ್ಮಾಯಿ

ಚನ್ನಪಟ್ಟಣ ಉಪ ಚುನಾವಣೆಯಲ್ಲಿ ಜೆಡಿಎಸ್ ಅಭ್ಯರ್ಥಿ ಗೆಲ್ಲೋದು: ಕುಮಾರಸ್ವಾಮಿ

6,6,6,6,6,6,6,6: ಸಿಕ್ಸರ್​ಗಳ ಸುರಿಮಳೆ, 8 ಎಸೆತಗಳಲ್ಲಿ 8 ಸಿಕ್ಸ್​

ಬೈಂದೂರಲ್ಲಿ ಲ್ಯಾಂಡ್ ಆದ ಬಳಿಕ ಶಿವಕುಮಾರ್​ಗೆ ಶೆಡ್ಯೂಲ್ ಮರೆತುಹೋಯಿತೇ?

ಯಾರದ್ದೋ ಪಿಂಚಣಿ ಹಣ, ಇನ್ನಯಾರದ್ದೋ ಖಾತೆಗೆ ಜಮೆ: ವೃದ್ಧ ದಂಪತಿ ಕಣ್ಣೀರು

ಕೇವಲ 2 ತಿಂಗಳು ಹಿಂದೆ ಚಿಕ್ಕಬಳ್ಳಾಪುರದಿಂದ ಟ್ರಾನ್ಸ್​ಫರ್ ಆಗಿರುವ ಅಧಿಕಾರಿ

ಸಿಎಂ ಇವತ್ತು ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್​ರನ್ನು ಭೇಟಿಯಾಗಲಿದ್ದಾರೆ

ಕೇವಲ 27 ದಿನಗಳಲ್ಲೇ ಮತ್ತೆ ಕೋಟ್ಯಧಿಪತಿಯಾದ ಮಾದಪ್ಪ

ಪ್ರಧಾನಿ ಮೋದಿಗೆ ಗಾಯಾನಾದ ಅತ್ಯುನ್ನತ ನಾಗರಿಕ ಪ್ರಶಸ್ತಿ