
IPL 2023 Orange Cap Winner: ಇಂಡಿಯನ್ ಪ್ರೀಮಿಯರ್ ಲೀಗ್ನ 16ನೇ ಆವೃತ್ತಿಗೆ ತೆರೆ ಬಿದ್ದಿದೆ. ಅಹಮದಾಬಾದ್ನಲ್ಲಿ ನಡೆದ ಫೈನಲ್ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ ತಂಡವನ್ನು ಬಗ್ಗು ಬಡಿಯುವ ಮೂಲಕ ಚೆನ್ನೈ ಸೂಪರ್ ಕಿಂಗ್ಸ್ ತಂಡದ ಚಾಂಪಿಯನ್ ಪಟ್ಟ ಅಲಂಕರಿಸಿದೆ.

ಇತ್ತ ಟೂರ್ನಿಯುದ್ದಕ್ಕೂ ಅದ್ಭುತ ಪ್ರದರ್ಶನ ನೀಡಿ ಯುವ ದಾಂಡಿಗ ಶುಭ್ಮನ್ ಗಿಲ್ ಆರೆಂಜ್ ಕ್ಯಾಪ್ ಅನ್ನು ತಮ್ಮದಾಗಿಸಿಕೊಂಡಿದ್ದಾರೆ. ಹಾಗಿದ್ರೆ ಈ ಬಾರಿ ಅತೀ ಹೆಚ್ಚು ರನ್ ಕಲೆಹಾಕಿದ ಬ್ಯಾಟರ್ಗಳು ಯಾರೆಲ್ಲಾ ಎಂದು ನೋಡೋಣ...

1- ಶುಭ್ಮನ್ ಗಿಲ್: ಗುಜರಾತ್ ಟೈಟಾನ್ಸ್ ಪರ 17 ಪಂದ್ಯಗಳಲ್ಲಿ ಆರಂಭಿಕರಾಗಿ ಕಣಕ್ಕಿಳಿದ ಶುಭ್ಮನ್ ಗಿಲ್ 3 ಭರ್ಜರಿ ಶತಕ ಹಾಗೂ 4 ಅರ್ಧಶತಕಗಳೊಂದಿಗೆ ಒಟ್ಟು 890 ರನ್ ಕಲೆಹಾಕಿದ್ದಾರೆ. ಈ ಮೂಲಕ ಆರೆಂಜ್ ಕ್ಯಾಪ್ ಅನ್ನು ತಮ್ಮದಾಗಿಸಿಕೊಂಡಿದ್ದಾರೆ.

2- ಫಾಫ್ ಡುಪ್ಲೆಸಿಸ್: ಆರ್ಸಿಬಿ ತಂಡದ ನಾಯಕ ಫಾಫ್ ಡುಪ್ಲೆಸಿಸ್ 14 ಪಂದ್ಯಗಳಲ್ಲಿ 8 ಅರ್ಧಶತಕಗಳೊಂದಿಗೆ ಒಟ್ಟು 730 ರನ್ ಕಲೆಹಾಕಿದ್ದಾರೆ.

3- ಡೆವೊನ್ ಕಾನ್ವೆ: ಸಿಎಸ್ಕೆ ತಂಡದ ಆರಂಭಿಕ ಆಟಗಾರ ಡೆವೊನ್ ಕಾನ್ವೆ 15 ಇನಿಂಗ್ಸ್ಗಳಲ್ಲಿ 6 ಅರ್ಧಶತಕಗಳೊಂದಿಗೆ ಒಟ್ಟು 672 ರನ್ ಕಲೆಹಾಕಿದ್ದಾರೆ.

4- ವಿರಾಟ್ ಕೊಹ್ಲಿ: ಆರ್ಸಿಬಿ ತಂಡದ ಸ್ಟಾರ್ ಬ್ಯಾಟರ್ ವಿರಾಟ್ ಕೊಹ್ಲಿ 14 ಇನಿಂಗ್ಸ್ಗಳಲ್ಲಿ 2 ಭರ್ಜರಿ ಶತಕ ಹಾಗೂ 6 ಅರ್ಧಶತಕಗಳೊಂದಿಗೆ ಒಟ್ಟು 639 ರನ್ಗಳಿಸಿದ್ದಾರೆ.

5- ಯಶಸ್ವಿ ಜೈಸ್ವಾಲ್: ರಾಜಸ್ಥಾನ್ ರಾಯಲ್ಸ್ ತಂಡದ ಆರಂಭಿಕ ಆಟಗಾರ 14 ಪಂದ್ಯಗಳಲ್ಲಿ 1 ಶತಕ ಹಾಗೂ 5 ಅರ್ಧಶತಕಗಳೊಂದಿಗೆ ಒಟ್ಟು 625 ರನ್ ಕಲೆಹಾಕಿದ್ದಾರೆ.