- Kannada News Photo gallery Cricket photos IPL 2023 Player Retention Complete list of players in kannada
IPL 2023 Retained Players: ಐಪಿಎಲ್ ಹರಾಜಿಗೂ ಮುನ್ನ ಎಲ್ಲಾ ಹತ್ತು ತಂಡಗಳಲ್ಲಿರುವ ಆಟಗಾರರ ಪಟ್ಟಿ ಹೀಗಿದೆ
IPL 2023 Retained Players: ಐಪಿಎಲ್ 2023ರ ಮಿನಿ ಹರಾಜಿಗೆ ಒಟ್ಟು 991 ಆಟಗಾರರು ನೋಂದಾಯಿಸಿಕೊಂಡಿದ್ದರು. ಬಳಿಕ 405 ಆಟಗಾರರನ್ನು ಈ ಹರಾಜಿಗೆ ಅಂತಿಮಗೊಳಿಸಲಾಗಿದೆ. ಇವರಲ್ಲಿ 273 ಆಟಗಾರರು ಭಾರತೀಯರಾಗಿದ್ದಾರೆ. 132 ಆಟಗಾರರು ವಿದೇಶಿಯರಾಗಿದ್ದಾರೆ.
Updated on: Dec 21, 2022 | 5:59 PM

ಕೊಚ್ಚಿಯಲ್ಲಿ ನಡೆಯಲ್ಲಿರುವ ಐಪಿಎಲ್ ಮಿನಿ ಹರಾಜಿಗೆ ಇನ್ನು ಎರಡು ದಿನ ಮಾತ್ರ ಬಾಕಿ ಉಳಿದಿದ್ದು, ಡಿಸೆಂಬರ್ 23ರಂದು ಈ ಮೆಗಾ ಈವೆಂಟ್ ನಡೆಯಲಿದೆ. ಇದೇ ಶುಕ್ರವಾರ ಮಧ್ಯಾಹ್ನ 2.30ಕ್ಕೆ ಈ ಹರಾಜು ಪ್ರಕ್ರಿಯೆ ಆರಂಭವಾಗಲಿದೆ. ಐಪಿಎಲ್ 2023ರ ಮಿನಿ ಹರಾಜಿಗೆ ಒಟ್ಟು 991 ಆಟಗಾರರು ನೋಂದಾಯಿಸಿಕೊಂಡಿದ್ದರು. ಬಳಿಕ 405 ಆಟಗಾರರನ್ನು ಈ ಹರಾಜಿಗೆ ಅಂತಿಮಗೊಳಿಸಲಾಗಿದೆ. ಇವರಲ್ಲಿ 273 ಆಟಗಾರರು ಭಾರತೀಯರಾಗಿದ್ದಾರೆ. 132 ಆಟಗಾರರು ವಿದೇಶಿಯರಾಗಿದ್ದಾರೆ. ಇವರಲ್ಲಿ ಎಲ್ಲಾ ತಂಡಗಳು ತಮ್ಮಲ್ಲಿ ಖಾಲಿ ಇರುವ ಜಾಗಗಳನ್ನು ತುಂಬಿಕೊಳ್ಳಬೇಕಾಗಿದೆ. ಇದಕ್ಕೂ ಮೊದಲೇ ಎಲ್ಲಾ ಫ್ರಾಂಚೈಸಿಗಳು ತಮಗೆ ಬೇಡವಾದ ಆಟಗಾರರನ್ನು ತಂಡದಿಂದ ಹೊರಹಾಕಿ, ಬೇಕಾದವರನ್ನು ತನ್ನಲ್ಲಿಯೇ ಉಳಿಸಿಕೊಂಡಿದ್ದವು. ಎಲ್ಲಾ ಫ್ರಾಂಚೈಸಿಗಳು ಹರಾಜಿಗೂ ಮುನ್ನ ಉಳಿಸಿಕೊಂಡ ಆಟಗಾರರ ಪಟ್ಟಿ ಇಂತಿದೆ.

ಮುಂಬೈ ಇಂಡಿಯನ್ಸ್: ರೋಹಿತ್ ಶರ್ಮಾ, ಟಿಮ್ ಡೇವಿಡ್, ರಮಣದೀಪ್ ಸಿಂಗ್, ತಿಲಕ್ ವರ್ಮಾ, ಸೂರ್ಯಕುಮಾರ್ ಯಾದವ್, ಇಶಾನ್ ಕಿಶನ್, ಟ್ರಿಸ್ಟಾನ್ ಸ್ಟಬ್ಸ್, ಡೆವಾಲ್ಡ್ ಬ್ರೇವಿಸ್, ಜೋಫ್ರಾ ಆರ್ಚರ್, ಜಸ್ಪ್ರೀತ್ ಬುಮ್ರಾ, ಅರ್ಜುನ್ ತೆಂಡೂಲ್ಕರ್, ಅರ್ಷದ್ ಖಾನ್, ಕುಮಾರ್ ಕಾರ್ತಿಕೇಯ, ಹೃತಿಕ್ ಶೋಕಿನ್ ಮತ್ತು ಆಕಾಶ್ ಮಧ್ವಾಲ್.

ಕೋಲ್ಕತ್ತಾ ನೈಟ್ ರೈಡರ್ಸ್: ಶ್ರೇಯಸ್ ಅಯ್ಯರ್, ಆಂಡ್ರೆ ರಸೆಲ್, ನಿತೀಶ್ ರಾಣಾ, ವೆಂಕಟೇಶ್ ಅಯ್ಯರ್, ಸುನಿಲ್ ನರೈನ್, ಉಮೇಶ್ ಯಾದವ್, ಟಿಮ್ ಸೌಥಿ, ಹರ್ಷಿತ್ ರಾಣಾ, ವರುಣ್ ಚಕ್ರವರ್ತಿ, ಅನುಕುಲ್ ರಾಯ್ ಮತ್ತು ರಿಂಕು ಸಿಂಗ್

ಪಂಜಾಬ್ ಕಿಂಗ್ಸ್: ಶಿಖರ್ ಧವನ್, ಶಾರುಖ್ ಖಾನ್, ಜಾನಿ ಬೈರ್‌ಸ್ಟೋವ್, ಪ್ರಭ್ಸಿಮ್ರಾನ್ ಸಿಂಗ್, ಭಾನುಕಾ ರಾಜಪಕ್ಸೆ, ಜಿತೇಶ್ ಶರ್ಮಾ, ರಾಜ್ ಬಾವಾ, ರಿಷಿ ಧವನ್, ಲಿಯಾಮ್ ಲಿವಿಂಗ್‌ಸ್ಟೋನ್, ಅಥರ್ವ ಥೈಡೆ, ಅರ್ಷ್‌ದೀಪ್ ಸಿಂಗ್, ಬಲ್ತೇಜ್ ಸಿಂಗ್, ನಾಥನ್ ಎಲ್ಲಿಸ್, ಕಗಿಸೊ ರಬಾಡ, ರಾಹುಲ್ ಚಾಹರ್ ಮತ್ತು ಹರ್ಪೀತ್ ಬ್ರಾರ್.

ರಾಯಲ್ ಚಾಲೆಂಜರ್ಸ್ ಬೆಂಗಳೂರು: ಫಾಫ್ ಡು ಪ್ಲೆಸಿಸ್, ವಿರಾಟ್ ಕೊಹ್ಲಿ, ಸುಯೇಶ್ ಪ್ರಭುದೇಸಾಯಿ, ರಜತ್ ಪಾಟಿದಾರ್, ದಿನೇಶ್ ಕಾರ್ತಿಕ್, ಅನುಜ್ ರಾವತ್, ಫಿನ್ ಅಲೆನ್, ಗ್ಲೆನ್ ಮ್ಯಾಕ್ಸ್‌ವೆಲ್, ವನಿಂದು ಹಸರಂಗ, ಶಹಬಾಜ್ ಅಹ್ಮದ್, ಹರ್ಷಲ್ ಪಟೇಲ್, ಡೇವಿಡ್ ವಿಲ್ಲಿ, ಕರ್ಣ್ ಶರ್ಮಾ, ಮಹಿಪಾಲ್ ಲೊಮರ್, ಮೊಹಮ್ಮದ್ ಸಿರಾಜ್, ಜೋಶ್ ಹ್ಯಾಜಲ್‌ವುಡ್, ಸಿದ್ಧಾರ್ಥ್ ಕೌಲ್ ಮತ್ತು ಆಕಾಶ್ ದೀಪ್

ರಾಜಸ್ಥಾನ್ ರಾಯಲ್ಸ್: ಸಂಜು ಸ್ಯಾಮ್ಸನ್, ಯಶಸ್ವಿ ಜೈಸ್ವಾಲ್, ಶಿಮ್ರೋನ್ ಹೆಟ್ಮೆಯರ್, ದೇವದತ್ ಪಡಿಕಲ್, ಜೋಸ್ ಬಟ್ಲರ್, ಧ್ರುವ್ ಜುರೆಲ್, ರಿಯಾನ್ ಪರಾಗ್, ಪ್ರಸಿದ್ಧ್ ಕೃಷ್ಣ, ಟ್ರೆಂಟ್ ಬೌಲ್ಟ್, ಒಬೆದ್ ಮೆಕಾಯ್, ನವದೀಪ್ ಸೈನಿ, ಕುಲದೀಪ್ ಸೇನ್, ಕುಲದೀಪ್ ಯಾದವ್, ಆರ್. ಅಶ್ವಿನ್, ಯುಜುವೇಂದ್ರ ಚಹಾಲ್,

ಲಕ್ನೋ ಸೂಪರ್ ಜೈಂಟ್ಸ್: ಕೆಎಲ್ ರಾಹುಲ್, ಆಯುಷ್ ಬಡೋನಿ, ಕರಣ್ ಶರ್ಮಾ, ಮನನ್ ವೋಹ್ರಾ, ಕ್ವಿಂಟನ್ ಡಿ ಕಾಕ್, ಮಾರ್ಕಸ್ ಸ್ಟೊಯಿನಿಸ್, ಕೃಷ್ಣಪ್ಪ ಗೌತಮ್, ದೀಪಕ್ ಹೂಡಾ, ಕೈಲ್ ಮೇಯರ್ಸ್, ಕೃನಾಲ್ ಪಾಂಡ್ಯ, ಅವೇಶ್ ಖಾನ್, ಮೊಹ್ಸಿನ್ ಖಾನ್, ಮಾರ್ಕ್ ವುಡ್, ಮಯಾಂಕ್ ಯಾದವ್ ಮತ್ತು ರವಿ ಬಿಷ್ನೋಯಿ.

ಗುಜರಾತ್ ಟೈಟಾನ್ಸ್: ಹಾರ್ದಿಕ್ ಪಾಂಡ್ಯ, ಶುಭಮನ್ ಗಿಲ್, ಡೇವಿಡ್ ಮಿಲ್ಲರ್, ಅಭಿನವ್ ಮನೋಹರ್, ಸಾಯಿ ಸುದರ್ಶನ್, ವೃದ್ಧಿಮಾನ್ ಸಹಾ, ಮ್ಯಾಥ್ಯೂ ವೇಡ್, ರಶೀದ್ ಖಾನ್, ರಾಹುಲ್ ತೆವಾಟಿಯಾ, ವಿಜಯ್ ಶಂಕರ್, ಮೊಹಮ್ಮದ್ ಶಮಿ, ಅಲ್ಜಾರಿ ಜೋಸೆಫ್, ಯಶ್ ದಯಾಳ್, ಪ್ರದೀಪ್ ಸಾಂಗ್ವಾನ್, ದರ್ಶನ್ ನಲ್ಕಂಡೆ, ಜಯಂತ್ ನಲ್ಕಂಡೆ, ಆರ್ ಸಾಯಿ ಕಿಶೋರ್ ಮತ್ತು ನೂರ್ ಅಹ್ಮದ್

ಸನ್‌ರೈಸರ್ಸ್ ಹೈದರಾಬಾದ್: ಅಬ್ದುಲ್ ಸಮದ್, ಅಡೆನ್ ಮರ್ಕ್ರಾಮ್, ರಾಹುಲ್ ತ್ರಿಪಾಠಿ, ಗ್ಲೆನ್ ಫಿಲಿಪ್ಸ್, ಅಭಿಷೇಕ್ ಶರ್ಮಾ, ಮಾರ್ಕೊ ಯಾನ್ಸನ್, ವಾಷಿಂಗ್ಟನ್ ಸುಂದರ್, ಫಜಲ್‌ಹಕ್ ಫಾರೂಕಿ, ಕಾರ್ತಿಕ್ ತ್ಯಾಗಿ, ಭುವನೇಶ್ವರ್ ಕುಮಾರ್, ಟಿ ನಟರಾಜನ್ ಮತ್ತು ಉಮ್ರಾನ್ ಮಲಿಕ್.

ಚೆನ್ನೈ ಸೂಪರ್ ಕಿಂಗ್ಸ್: ಎಂಎಸ್ ಧೋನಿ, ಡೆವೊನ್ ಕಾನ್ವೇ, ರುತುರಾಜ್ ಗಾಯಕ್ವಾಡ್, ಅಂಬಟಿ ರಾಯುಡು, ಸುಭ್ರಾಂಶು ಸೇನಾಪತಿ, ಮೊಯಿನ್ ಅಲಿ, ಶಿವಂ ದುಬೆ, ರಾಜವರ್ಧನ್ ಹಂಗೇರ್‌ಗಾಕರ್, ಡ್ವೇನ್ ಪ್ರಿಟೋರಿಯಸ್, ಮಿಚೆಲ್ ಸ್ಯಾಂಟ್ನರ್, ರವೀಂದ್ರ ಜಡೇಜಾ, ತುಷಾರ್ ದೇಶಪಾಂಡೆ, ಮುಖೇಶ್ ಚೌಧರಿ, ಪ್ರಶಾಂತ್ ಸೋಲಂಕಿ ಮತ್ತು ಮಹೇಶ ತೀಕ್ಷಣ




