IPL 2023: ರಣರೋಚಕ ಘಟ್ಟದಲ್ಲಿ ಪ್ಲೇಆಫ್ ರೇಸ್: 5 ತಂಡಗಳ ನಡುವೆ ನೇರ ಪೈಪೋಟಿ
TV9 Web | Updated By: ಝಾಹಿರ್ ಯೂಸುಫ್
Updated on:
May 17, 2023 | 3:21 PM
IPL 2023 Kannada: ಚೆನ್ನೈ, ಮುಂಬೈ ಹಾಗೂ ಲಕ್ನೋ ತಂಡಗಳು ಮುಂದಿನ ಪಂದ್ಯಗಳಲ್ಲಿ ಗೆದ್ದರೆ ಮಾತ್ರ ಪ್ಲೇಆಫ್ ಪ್ರವೇಶಿಸಬಹುದು. ಆದರೆ ಇಲ್ಲಿ 4ನೇ ಸ್ಥಾನ ಪಡೆಯುವ ತಂಡದೊಂದಿಗೆ ಪಂಜಾಬ್ ಕಿಂಗ್ಸ್ ಹಾಗೂ ಆರ್ಸಿಬಿಗೆ ನೆಟ್ ರನ್ ರೇಟ್ ಪೈಪೋಟಿ ನೀಡುವ ಉತ್ತಮ ಅವಕಾಶವಿದೆ.
1 / 9
IPL 2023: ಐಪಿಎಲ್ನ 16ನೇ ಆವೃತ್ತಿಯ ಲೀಗ್ ಹಂತದ ಪಂದ್ಯಗಳು ಮುಕ್ತಾಯದ ಹಂತಕ್ಕೆ ಬಂದು ನಿಂತಿದೆ. ಈಗಾಗಲೇ 64 ಪಂದ್ಯಗಳು ಮುಗಿದರೂ ಪ್ಲೇಆಫ್ ಅನ್ನು ಖಚಿತಪಡಿಸಿಕೊಂಡಿರುವುದು ಗುಜರಾತ್ ಟೈಟಾನ್ಸ್ ಮಾತ್ರ. ಹಾಗೆಯೇ ಡೆಲ್ಲಿ ಕ್ಯಾಪಿಟಲ್ಸ್ ಹಾಗೂ ಸನ್ರೈಸರ್ಸ್ ಹೈದರಾಬಾದ್ ಪ್ಲೇಆಸ್ ರೇಸ್ನಿಂದ ಹೊರಬಿದ್ದಿದೆ.
2 / 9
ಅಂದರೆ ಇನ್ನುಳಿದ 3 ಸ್ಥಾನಗಳಿಗಾಗಿ ಈಗಲೂ 7 ತಂಡಗಳ ನಡುವೆ ಪೈಪೋಟಿ ಇದೆ. ಆದರೆ ಇಲ್ಲಿ ಕೆಕೆಆರ್ ಹಾಗೂ ರಾಜಸ್ಥಾನ್ ರಾಯಲ್ಸ್ ತಂಡಗಳಿಗೆ ಪಾಯಿಂಟ್ಸ್ ಟೇಬಲ್ನಲ್ಲಿ 4ನೇ ಸ್ಥಾನ ಪಡೆಯುವ ತಂಡ 14 ಅಂಕಗಳಿಸಿದರೆ ಮಾತ್ರ ಪ್ಲೇಆಫ್ ಪ್ರವೇಶಿಸುವ ಅವಕಾಶ ಇರಲಿದೆ. ಅಂದರೆ ಮುಂಬೈ ಇಂಡಿಯನ್ಸ್ ಮುಂದಿನ ಪಂದ್ಯದಲ್ಲಿ ಗೆದ್ದರೆ ಕೆಕೆಆರ್ ಹಾಗೂ ಆರ್ಆರ್ ತಂಡಗಳು ಪ್ಲೇಆಫ್ ರೇಸ್ನಿಂದ ಹೊರಬೀಳಲಿದೆ.
3 / 9
ಇದಾಗ್ಯೂ ಅಂಕ ಪಟ್ಟಿಯಲ್ಲಿ ಅಗ್ರ ನಾಲ್ಕರಲ್ಲಿ ಸ್ಥಾನ ಪಡೆಯಲು ಇತರೆ 5 ತಂಡಗಳ ನಡುವೆ ನೇರ ಪೈಪೋಟಿ ಏರ್ಪಟ್ಟಿದೆ. ಆದರೆ ಈ ಪೈಪೋಟಿ ನಡುವೆ ಇದೀಗ ಸಿಎಸ್ಕೆ, ಮುಂಬೈ ಇಂಡಿಯನ್ಸ್ ಹಾಗೂ ಲಕ್ನೋ ಸೂಪರ್ ಜೈಂಟ್ಸ್ ತಂಡಗಳು ಸಂಕಷ್ಟಕ್ಕೆ ಸಿಲುಕಿದೆ.
4 / 9
ಚೆನ್ನೈ, ಮುಂಬೈ ಹಾಗೂ ಲಕ್ನೋ ತಂಡಗಳು ಮುಂದಿನ ಪಂದ್ಯಗಳಲ್ಲಿ ಗೆದ್ದರೆ ಮಾತ್ರ ಪ್ಲೇಆಫ್ ಪ್ರವೇಶಿಸಬಹುದು. ಆದರೆ ಇಲ್ಲಿ 4ನೇ ಸ್ಥಾನ ಪಡೆಯುವ ತಂಡದೊಂದಿಗೆ ಪಂಜಾಬ್ ಕಿಂಗ್ಸ್ ಹಾಗೂ ಆರ್ಸಿಬಿಗೆ ನೆಟ್ ರನ್ ರೇಟ್ ಪೈಪೋಟಿ ನೀಡುವ ಉತ್ತಮ ಅವಕಾಶವಿದೆ.
5 / 9
ಅಂದರೆ 15 ಅಂಕಗಳನ್ನು ಗಳಿಸಿರುವ ಸಿಎಸ್ಕೆ ಹಾಗೂ ಲಕ್ನೋ ತಂಡಗಳು ಮುಂದಿನ ಪಂದ್ಯಗಳನ್ನು ಗೆದ್ದರೆ ಮಾತ್ರ 17 ಅಂಕಗಳೊಂದಿಗೆ ಪ್ಲೇಆಫ್ ಪ್ರವೇಶಿಸಲಿದೆ. ಇತ್ತ ಮುಂಬೈ ಇಂಡಿಯನ್ಸ್ ಗೆದ್ದರೆ 16 ಅಂಕಗಳನ್ನು ಗಳಿಸಿ 4ನೇ ಸ್ಥಾನದಲ್ಲಿ ಕಾಣಿಸಿಕೊಳ್ಳಬಹುದು.
6 / 9
ಆದರೆ 12 ಅಂಕಗಳನ್ನು ಹೊಂದಿರುವ ಆರ್ಸಿಬಿ ಹಾಗೂ ಪಂಜಾಬ್ ಕಿಂಗ್ಸ್ ತಂಡಗಳು ಮುಂದಿನ 2 ಪಂದ್ಯಗಳನ್ನು ಗೆದ್ದುಕೊಂಡರೆ 16 ಅಂಕಗಳೊಂದಿಗೆ ನೆಟ್ ರನ್ ರೇಟ್ನಲ್ಲಿ ಮುಂಬೈ ಇಂಡಿಯನ್ಸ್ ತಂಡವನ್ನು ಹಿಂದಿಕ್ಕಿ ಪ್ಲೇಆಫ್ಗೆ ಎಂಟ್ರಿ ಕೊಡುವ ಅವಕಾಶ ಹೊಂದಿದೆ.
7 / 9
ಹಾಗೆಯೇ ಮುಂದಿನ ಪಂದ್ಯದಲ್ಲಿ ಲಕ್ನೋ ಸೂಪರ್ ಜೈಂಟ್ಸ್ ತಂಡ ಕೆಕೆಆರ್ ವಿರುದ್ಧ ಹಾಗೂ ಸಿಎಸ್ಕೆ ತಂಡ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಸೋತರೆ ಪ್ಲೇಆಫ್ ರೇಸ್ನಿಂದ ಹೊರಬೀಳುವ ಸಾಧ್ಯತೆಯಿದೆ. ಏಕೆಂದರೆ ಉಭಯ ತಂಡಗಳು 15 ಅಂಕಗಳನ್ನು ಮಾತ್ರ ಹೊಂದಿದ್ದು, ಇತ್ತ ಮುಂಬೈ ಇಂಡಿಯನ್ಸ್, ಆರ್ಸಿಬಿ ಹಾಗೂ ಪಂಜಾಬ್ ಕಿಂಗ್ಸ್ಗೆ 16 ಪಾಯಿಂಟ್ಸ್ ಕಲೆಹಾಕುವ ಅವಕಾಶ ಇದೆ.
8 / 9
ಅಂದರೆ ಇಲ್ಲಿ ಚೆನ್ನೈ ಸೂಪರ್ ಕಿಂಗ್ಸ್, ಲಕ್ನೋ ಸೂಪರ್ ಜೈಂಟ್ಸ್, ರಾಯಲ್ ಚಾಲೆಂಜರ್ಸ್ ಬೆಂಗಳೂರು, ಮುಂಬೈ ಇಂಡಿಯನ್ಸ್ ಹಾಗೂ ಪಂಜಾಬ್ ಕಿಂಗ್ಸ್ ನಡುವೆ ಅಂಕ ಪಟ್ಟಿಯಲ್ಲಿನ 3 ಸ್ಥಾನಗಳಿಗಾಗಿ ನೇರ ಪೈಪೋಟಿ ಏರ್ಪಟ್ಟಿದೆ.
9 / 9
ಹೀಗಾಗಿಯೇ ಈ ವಾರ ನಡೆಯಲಿರುವ ಈ ತಂಡಗಳ ಪಂದ್ಯಗಳು ರಣರೋಚಕ ಹೋರಾಟಕ್ಕೆ ಸಾಕ್ಷಿಯಾಗಬಹುದು. ಈ ಹೋರಾಟದಲ್ಲಿ ಯಾರು ಗೆದ್ದು, ಯಾರು ಹೊರಬೀಳಲಿದ್ದಾರೆ ಎಂಬುದೇ ಈಗ ಕುತೂಹಲ.