IPL 2023 Playoffs: 4 ತಂಡಗಳು, 3 ಪಂದ್ಯ: ಹೀಗಿರಲಿದೆ ಪ್ಲೇಆಫ್ಸ್ ಫೈಟ್
IPL 2023 Kannada: ಪ್ಲೇಆಫ್ ಹಂತದಲ್ಲಿ ಮೊದಲು ಕ್ವಾಲಿಫೈಯರ್ ಪಂದ್ಯ ನಡೆಯಲಿದ್ದು, ಇದಾದ ಬಳಿಕ ಎಲಿಮಿನೇಟರ್ ಪಂದ್ಯ ಆಡಲಾಗುತ್ತದೆ. ಹಾಗೆಯೇ ಕೊನೆಯಲ್ಲಿ 2ನೇ ಕ್ವಾಲಿಫೈಯರ್ ಪಂದ್ಯ ನಡೆಯಲಿದೆ.
Updated on: May 22, 2023 | 6:52 PM

IPL 2023: ಐಪಿಎಲ್ನ ಲೀಗ್ ಹಂತದ ಪಂದ್ಯಗಳು ಪೂರ್ಣಗೊಂಡಿವೆ. ಇನ್ನುಳಿದಿರುವುದು ಕೇವಲ 4 ಪಂದ್ಯಗಳು ಮಾತ್ರ. ಈ ನಾಲ್ಕು ಪಂದ್ಯಗಳಲ್ಲಿ ಮೂರು ಮ್ಯಾಚ್ಗಳ ಮೂಲಕ ಫೈನಲಿಸ್ಟ್ ಅನ್ನು ನಿರ್ಧರಿಸಲಾಗುತ್ತದೆ.

ಅಂದರೆ ಪ್ಲೇಆಫ್ಸ್ ಪ್ರವೇಶಿಸಿರುವ ಗುಜರಾತ್ ಟೈಟಾನ್ಸ್, ಚೆನ್ನೈ ಸೂಪರ್ ಕಿಂಗ್ಸ್, ಲಕ್ನೋ ಸೂಪರ್ ಜೈಂಟ್ಸ್ ಹಾಗೂ ಮುಂಬೈ ಇಂಡಿಯನ್ಸ್ ತಂಡಗಳು ಫೈನಲ್ಗೂ ಮುನ್ನ 3 ಪಂದ್ಯಗಳನ್ನಾಡಲಿದೆ.

ಇಲ್ಲಿ ಪ್ಲೇಆಫ್ ಹಂತದಲ್ಲಿ ಮೊದಲು ಕ್ವಾಲಿಫೈಯರ್ ಪಂದ್ಯ ನಡೆಯಲಿದ್ದು, ಇದಾದ ಬಳಿಕ ಎಲಿಮಿನೇಟರ್ ಪಂದ್ಯ ಆಡಲಾಗುತ್ತದೆ. ಹಾಗೆಯೇ ಕೊನೆಯಲ್ಲಿ 2ನೇ ಕ್ವಾಲಿಫೈಯರ್ ಪಂದ್ಯ ನಡೆಯಲಿದೆ.

ಪಾಯಿಂಟ್ಸ್ ಟೇಬಲ್ನಲ್ಲಿ ಮೊದಲ ಹಾಗೂ ದ್ವಿತೀಯ ಸ್ಥಾನ ಪಡೆಯುವ ಮೊದಲ ಕ್ವಾಲಿಫೈಯರ್ ಪಂದ್ಯ ಆಡಲಿದೆ. ಈ ಪಂದ್ಯದಲ್ಲಿ ಗೆದ್ದ ತಂಡವು ನೇರವಾಗಿ ಫೈನಲ್ಗೆ ಪ್ರವೇಶಿಸಲಿದೆ.

ಅದರಂತೆ ಮೇ 23 ರಂದು ಚೆನ್ನೈನಲ್ಲಿ ನಡೆಯಲಿರುವ ಮೊದಲ ಕ್ವಾಲಿಫೈಯರ್ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ ಹಾಗೂ ಚೆನ್ನೈ ಸೂಪರ್ ಕಿಂಗ್ಸ್ ತಂಡಗಳು ಮುಖಾಮುಖಿಯಾಗಲಿದೆ.

ಇದಾದ ಬಳಿಕ ಅಂಕಪಟ್ಟಿಯಲ್ಲಿ 3ನೇ ಹಾಗೂ 4ನೇ ಸ್ಥಾನ ಪಡೆದ ತಂಡಗಳು ಎಲಿಮಿನೇಟರ್ ಪಂದ್ಯವಾಡಲಿದೆ. ಎಲಿಮಿನೇಟರ್ ಪಂದ್ಯದಲ್ಲಿ ಸೋತ ತಂಡವು ಟೂರ್ನಿಯಿಂದ ಹೊರಬೀಳಲಿದೆ.

ಅದರಂತೆ ಮೇ 24 ರಂದು ಚೆನ್ನೈನಲ್ಲಿ ನಡೆಯಲಿರುವ ಎಲಿಮಿನೇಟರ್ ಪಂದ್ಯದಲ್ಲಿ ಲಕ್ನೋ ಸೂಪರ್ ಜೈಂಟ್ಸ್ ಹಾಗೂ ಮುಂಬೈ ಇಂಡಿಯನ್ಸ್ ತಂಡಗಳು ಸೆಣಸಲಿದೆ.

ಇನ್ನು ಎಲಿಮಿನೇಟರ್ ಪಂದ್ಯದಲ್ಲಿ ಗೆದ್ದ ತಂಡವು ಮೊದಲ ಕ್ವಾಲಿಫೈಯರ್ನಲ್ಲಿ ಸೋತ ತಂಡದೊಡನೆ 2ನೇ ಕ್ವಾಲಿಫೈಯರ್ ಪಂದ್ಯವಾಡಲಿದೆ. ಇದರಲ್ಲಿ ಗೆಲ್ಲುವ ತಂಡ ಫೈನಲ್ಗೆ ಎಂಟ್ರಿ ಕೊಡಲಿದೆ.

ಅಂದರೆ ಇಲ್ಲಿ ಮೊದಲ ಕ್ವಾಲಿಫೈಯರ್ ಆಡುವ ಗುಜರಾತ್ ಟೈಟಾನ್ಸ್ ಹಾಗೂ ಸಿಎಸ್ಕೆ ತಂಡಗಳಿಗೆ ಫೈನಲ್ ಪ್ರವೇಶಿಸಲು 2 ಅವಕಾಶ ಇರಲಿದೆ. ಮೊದಲ ಕ್ವಾಲಿಫೈಯರ್ನಲ್ಲಿ ಗೆದ್ದ ತಂಡವು ಫೈನಲ್ಗೆ ಪ್ರವೇಶಿಸಿದರೆ, ಸೋತ ತಂಡವು 2ನೇ ಕ್ವಾಲಿಫೈಯರ್ನಲ್ಲಿ ಗೆದ್ದು ಫೈನಲ್ ಪ್ರವೇಶಿಸುವ ಅವಕಾಶ ಪಡೆಯಲಿದೆ.

ಮೇ 28 (ಭಾನುವಾರ): ಅಹಮದಾಬಾದ್ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಫೈನಲ್ ಪಂದ್ಯ ನಡೆಯಲಿದೆ.




