- Kannada News Photo gallery Cricket photos IPL 2023 Points Table after delhi capitals vs gujarat titans match
IPL 2023 Points Table: ಹಾಲಿ ಚಾಂಪಿಯನ್ಗಳಿಗೆ ನಂ.1 ಪಟ್ಟ; ಆರ್ಸಿಬಿಗೆ ಯಾವ ಸ್ಥಾನ?
IPL 2023 Points Table: ಇನ್ನು ಕೊನೆಯ ಎರಡು ಸ್ಥಾನಗಳಲ್ಲಿ ಕ್ರಮವಾಗಿ ಮುಂಬೈ ಇಂಡಿಯನ್ಸ್ ಒಂಬತ್ತನೇ ಮತ್ತು ಸನ್ ರೈಸರ್ಸ್ ಹೈದರಾಬಾದ್ 10 ನೇ ಸ್ಥಾನದಲ್ಲಿವೆ. ಈ ಎರಡೂ ತಂಡಗಳು ತಲಾ ಒಂದು ಪಂದ್ಯ ಆಡಿ ಸೋತಿವೆ.
Updated on:Apr 05, 2023 | 4:11 PM

ಡೆಲ್ಲಿ ವಿರುದ್ಧ ಅಮೋಘ ಜಯ ಸಾಧಿಸಿದ ಹಾಲಿ ಚಾಂಪಿಯನ್ ಗುಜರಾತ್ ಟೈಟಾನ್ಸ್ ಸತತ ಎರಡು ಗೆಲುವಿನೊಂದಿಗೆ ಅಂಕಪಟ್ಟಿಯಲ್ಲಿ ಮೊದಲ ಸ್ಥಾನ ಪಡೆದುಕೊಂಡಿದೆ. ಆಡಿದ ಮೊದಲ ಪಂದ್ಯದಲ್ಲಿ ಈ ತಂಡ ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನು ಸೋಲಿಸಿತ್ತು. ಆ ಬಳಿಕ ಡೆಲ್ಲಿ ತಂಡವನ್ನು ಆರು ವಿಕೆಟ್‌ಗಳಿಂದ ಸೋಲಿಸಿದ ಪಾಂಡ್ಯ ಪಡೆ 4 ಅಂಕಗಳೊಂದಿಗೆ ಅಂಕಪಟ್ಟಿಯಲ್ಲಿ 1ನೇ ಸ್ಥಾನಕ್ಕೇರಿದೆ.

ಇನ್ನು ಈ ಪಂದ್ಯಕ್ಕೂ ಮುನ್ನ ಸಂಜು ಸ್ಯಾಮ್ಸನ್ ನಾಯಕತ್ವದ ರಾಜಸ್ಥಾನ್ ರಾಯಲ್ಸ್ ತಂಡ ಅಂಕಪಟ್ಟಿಯಲ್ಲಿ ನಂಬರ್ 1 ಸ್ಥಾನದಲ್ಲಿತ್ತು. ಆದರೆ ಗುಜರಾತ್ ಗೆಲುವಿನ ನಂತರ ಈ ತಂಡ ಇದೀಗ ಎರಡನೇ ಸ್ಥಾನಕ್ಕೆ ಇಳಿದಿದೆ. ರಾಜಸ್ಥಾನ ಆಡಿದ ಮೊದಲ ಪಂದ್ಯದಲ್ಲಿಯೇ ಗೆಲುವು ಸಾಧಿಸುವುದರೊಂದಿಗೆ ಎರಡು ಅಂಕಗಳನ್ನು ಹೊಂದಿದೆ.

ರಾಜಸ್ಥಾನದ ನಂತರ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಮೂರನೇ ಸ್ಥಾನದಲ್ಲಿದ್ದು. ಆಡಿರುವ ಒಂದು ಪಂದ್ಯದಲ್ಲಿ ಗೆಲುವು ಸಾಧಿಸಿ, ಎರಡು ಅಂಕಗಳನ್ನು ಪಡೆದುಕೊಂಡಿದೆ.

ಇದುವರೆಗೆ ಎರಡು ಪಂದ್ಯಗಳನ್ನು ಆಡಿರುವ ಕೆಎಲ್ ರಾಹುಲ್ ನಾಯಕತ್ವದ ಲಕ್ನೋ ಸೂಪರ್ ಜೈಂಟ್ಸ್ ತಂಡ, ಒಂದು ಗೆಲುವು, ಒಂದು ಸೋಲಿನೊಂದಿಗೆ ಮೂರನೇ ಸ್ಥಾನದಿಂದ ನಾಲ್ಕನೇ ಸ್ಥಾನಕ್ಕೆ ಇಳಿದೆದೆ.

ಐದನೇ ಸ್ಥಾನದಲ್ಲಿ ಪಂಜಾಬ್ ಕಿಂಗ್ಸ್ ತಂಡವಿದ್ದು, ಆಡಿದ ಮೊದಲ ಪಂದ್ಯದಲ್ಲಿ ಗೆಲುವು ಸಾಧಿಸಿ ಎರಡು ಅಂಕ ಸಂಪಾಧಿಸಿದೆ.

6ನೇ ಸ್ಥಾನದಲ್ಲಿ ಧೋನಿ ಸಾರಥ್ಯದ ಸಿಎಸ್ಕೆ ತಂಡವಿದ್ದು, ಈ ತಂಡ ಆಡಿರುವ 2 ಪಂದ್ಯಗಳಲ್ಲಿ 1 ಗೆಲುವು, ಒಂದು ಸೋಲಿನೊಂದಿಗೆ 2 ಅಂಕ ಪಡೆದುಕೊಂಡಿದೆ.

ಆಡಿದ ಮೊದಲ ಪಂದ್ಯದಲ್ಲೇ ಹೀನಾಯ ಸೋಲು ಅನುಭವಿಸಿದ್ದ ಕೆಕೆಆರ್ ತಂಡ 7ನೇ ಸ್ಥಾನದಲ್ಲಿದೆ.

ಗುಜರಾತ್ ವಿರುದ್ಧ ತನ್ನ ಎರಡನೇ ಪಂದ್ಯದಲ್ಲಿ ಸೋಲು ಅನುಭವಿಸಿದ ಡೆಲ್ಲಿ ತಂಡ ಸೋತ ನಂತರವೂ ಲಾಭ ಪಡೆದುಕೊಂಡಿದೆ. ಈ ಪಂದ್ಯಕ್ಕೂ ಮುನ್ನ ಒಂಬತ್ತನೇ ಸ್ಥಾನದಲ್ಲಿದ್ದ ಡೆಲ್ಲಿ ಈಗ ಎಂಟನೇ ಸ್ಥಾನಕ್ಕೆ ಬಂದಿದೆ.

ಇನ್ನು ಕೊನೆಯ ಎರಡು ಸ್ಥಾನಗಳಲ್ಲಿ ಕ್ರಮವಾಗಿ ಮುಂಬೈ ಇಂಡಿಯನ್ಸ್ ಒಂಬತ್ತನೇ ಮತ್ತು ಸನ್ ರೈಸರ್ಸ್ ಹೈದರಾಬಾದ್ 10 ನೇ ಸ್ಥಾನದಲ್ಲಿವೆ. ಈ ಎರಡೂ ತಂಡಗಳು ತಲಾ ಒಂದು ಪಂದ್ಯ ಆಡಿ ಸೋತಿವೆ.
Published On - 4:11 pm, Wed, 5 April 23




