- Kannada News Photo gallery Cricket photos IPL 2023: Punjab Kings appoint Sunil Joshi as bowling coach Kannada News zp
IPL 2023: ಕನ್ನಡಿಗನನ್ನು ಬೌಲಿಂಗ್ ಕೋಚ್ ಆಗಿ ಆಯ್ಕೆ ಮಾಡಿದ ಪಂಜಾಬ್ ಕಿಂಗ್ಸ್
IPL 2023 Kannada: ಟೀಮ್ ಇಂಡಿಯಾ ಪರ 15 ಟೆಸ್ಟ್ ಪಂದ್ಯಗಳನ್ನಾಡಿರುವ ಸುನಿಲ್ ಜೋಶಿ ಒಟ್ಟು 41 ವಿಕೆಟ್ ಪಡೆದಿದ್ದಾರೆ. ಹಾಗೆಯೇ 69 ಏಕದಿನ ಪಂದ್ಯಗಳಿಂದ 69 ವಿಕೆಟ್ ಕಬಳಿಸಿದ್ದಾರೆ.
Updated on: Jan 16, 2023 | 6:28 PM

ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್ 16 ಗಾಗಿ ಪಂಜಾಬ್ ಕಿಂಗ್ಸ್ ಫ್ರಾಂಚೈಸಿಯು ಭರ್ಜರಿ ತಯಾರಿಯಲ್ಲಿದೆ. ಈಗಾಗಲೇ ಹೊಸ ಕೋಚ್ ಆಗಿ ಆಸ್ಟ್ರೇಲಿಯಾದ ಟ್ರೆವರ್ ಬೇಲಿಸ್ ಅವರನ್ನು ನೇಮಿಸಲಾಗಿದೆ. ಇದೀಗ ತಂಡದ ಸ್ಪಿನ್ ಬೌಲಿಂಗ್ ಕೋಚ್ ಸ್ಥಾನಕ್ಕೆ ಕನ್ನಡಿಗ ಸುನೀಲ್ ಜೋಶಿ ಅವರನ್ನು ಆಯ್ಕೆ ಮಾಡಲಾಗಿದೆ.

ಈ ಹಿಂದೆ ಪಂಜಾಬ್ ಕಿಂಗ್ಸ್ ತಂಡದ ಮುಖ್ಯ ಕೋಚ್ ಆಗಿ ಕನ್ನಡಿಗ ಅನಿಲ್ ಕುಂಬ್ಳೆ ಕಾಣಿಸಿಕೊಂಡಿದ್ದರು. ಅಲ್ಲದೆ ಬೌಲಿಂಗ್ ವಿಭಾಗದ ಉಸ್ತುವಾರಿಯನ್ನೂ ಕೂಡ ಕುಂಬ್ಳೆ ನೋಡಿಕೊಳ್ಳುತ್ತಿದ್ದರು. ಇದೀಗ ಪಂಜಾಬ್ ಕಿಂಗ್ಸ್ ಕೋಚಿಂಗ್ ಸಿಬ್ಬಂದಿಗಳು ಬದಲಾಗಿದ್ದಾರೆ.

ಹೀಗಾಗಿ ಹೊಸ ಸ್ಪಿನ್ ಬೌಲಿಂಗ್ ಕೋಚ್ ಆಗಿ ಸುನಿಲ್ ಜೋಶಿ ಅವರನ್ನು ನೇಮಿಸಲಾಗಿದೆ. ಈ ಹಿಂದೆ ಐಪಿಎಲ್ನಲ್ಲಿ ಆರ್ಸಿಬಿ ಪರ 4 ಪಂದ್ಯಗಳನ್ನಾಡಿದ್ದ ಜೋಶಿ 1 ವಿಕೆಟ್ ಪಡೆದಿದ್ದರು. 2008 ರ ಬಳಿಕ ಐಪಿಎಲ್ನಿಂದ ಹೊರಗುಳಿದ ಜೋಶಿ ಟೀಮ್ ಇಂಡಿಯಾ ಆಯ್ಕೆ ಸಮಿತಿಯಲ್ಲೂ ಕಾಣಿಸಿಕೊಂಡಿದ್ದರು. ಆದರೆ ದಕ್ಷಿಣ ವಲಯ ಆಯ್ಕೆಗಾರ ಸ್ಥಾನದಿಂದ ಕೆಳಗಿಳಿದ ಬಳಿಕ ಜೋಶಿ ಇದೀಗ ಐಪಿಎಲ್ ಮೂಲಕ ಹೊಸ ಇನಿಂಗ್ಸ್ ಆರಂಭಿಸಲು ಮುಂದಾಗಿದ್ದಾರೆ.

ಟೀಮ್ ಇಂಡಿಯಾ ಪರ 15 ಟೆಸ್ಟ್ ಪಂದ್ಯಗಳನ್ನಾಡಿರುವ ಸುನಿಲ್ ಜೋಶಿ ಒಟ್ಟು 41 ವಿಕೆಟ್ ಪಡೆದಿದ್ದಾರೆ. ಹಾಗೆಯೇ 69 ಏಕದಿನ ಪಂದ್ಯಗಳಿಂದ 69 ವಿಕೆಟ್ ಕಬಳಿಸಿದ್ದಾರೆ. ಅಷ್ಟೇ ಅಲ್ಲದೆ ಚೊಚ್ಚಲ ಐಪಿಎಲ್ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದಲ್ಲೂ ಕಾಣಿಸಿಕೊಂಡಿದ್ದರು. ಇದೀಗ ಪಂಜಾಬ್ ಕಿಂಗ್ಸ್ ಬೌಲಿಂಗ್ ಕೋಚ್ ಆಗಿ ಮತ್ತೆ ಐಪಿಎಲ್ಗೆ ಹಿಂತಿರುಗುತ್ತಿರುವುದು ವಿಶೇಷ.

ಪಂಜಾಬ್ ಕಿಂಗ್ಸ್: ಶಿಖರ್ ಧವನ್, ಶಾರುಖ್ ಖಾನ್, ಜಾನಿ ಬೈರ್‌ಸ್ಟೋವ್, ಪ್ರಭ್ ಸಿಮ್ರಾನ್ ಸಿಂಗ್, ಭಾನುಕಾ ರಾಜಪಕ್ಸೆ, ಶಿವಂ ಸಿಂಗ್, ಮೋಹಿತ್ ರಥಿ, ವಿದ್ವತ್ ಕಾವೇರಪ್ಪ, ಹರ್‌ಪ್ರೀತ್ ಭಾಟಿಯಾ , ಸಿಕಂದರ್ ರಾಜಾ, ಸ್ಯಾಮ್ ಕರನ್, ಜಿತೇಶ್ ಶರ್ಮಾ, ರಾಜ್ ಬಾವಾ, ರಿಷಿ ಧವನ್, ಲಿಯಾಮ್ ಲಿವಿಂಗ್‌ಸ್ಟೋನ್, ಅಥರ್ವ ಥೈಡೆ, ಅರ್ಷ್‌ದೀಪ್ ಸಿಂಗ್, ಬಲ್ತೇಜ್ ಸಿಂಗ್, ನಾಥನ್ ಎಲ್ಲಿಸ್, ಕಗಿಸೊ ರಬಾಡ, ರಾಹುಲ್ ಚಾಹರ್, ಹರ್‌ಪ್ರೀತ್ ಬ್ರಾರ್.




