- Kannada News Photo gallery Cricket photos Kannada News | Punjab Kings fall way behind in RCB's Playoffs Race
IPL 2023: ಪಂಜಾಬ್ ಕಿಂಗ್ಸ್ ಸೋಲು RCBಗೆ ಪ್ಲಸ್ ಪಾಯಿಂಟ್
IPL 2023 Kannada: ಆರ್ಸಿಬಿ ಹಾಗೂ ಪಂಜಾಬ್ ಕಿಂಗ್ಸ್ ಪ್ಲೇಆಫ್ ರೇಸ್ನಲ್ಲಿ ಸಮಬಲದಲ್ಲಿದ್ದರು. ಉಭಯ ತಂಡಗಳು 12 ಅಂಕಗಳನ್ನು ಪಡೆದಿದ್ದರಿಂದ ಕೊನೆಯ 2 ಪಂದ್ಯಗಳನ್ನು ಗೆದ್ದು 16 ಪಾಯಿಂಟ್ಸ್ನೊಂದಿಗೆ ಪ್ಲೇಆಫ್ ಪ್ರವೇಶಿಸುವ ಅವಕಾಶ ಇತ್ತು.
Updated on: May 18, 2023 | 4:57 PM

IPL 2023: ಐಪಿಎಲ್ನ 64ನೇ ಪಂದ್ಯದಲ್ಲೇ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಪಂಜಾಬ್ ಕಿಂಗ್ಸ್ ಸೋಲನುಭವಿಸಿದೆ. ಈ ಸೋಲಿನೊಂದಿಗೆ ಪಂಜಾಬ್ ಕಿಂಗ್ಸ್ ತಂಡವು ಪ್ಲೇಆಫ್ ರೇಸ್ನಲ್ಲಿ ಹಿಂದುಳಿದಿದೆ. ಇತ್ತ ಡೆಲ್ಲಿ ಕ್ಯಾಪಿಟಲ್ಸ್ ತಂಡದ ಗೆಲುವು ಆರ್ಸಿಬಿ ತಂಡಕ್ಕೆ ಪ್ಲಸ್ ಪಾಯಿಂಟ್ ಆಗಿ ಮಾರ್ಪಟ್ಟಿದೆ.

ಏಕೆಂದರೆ 64ನೇ ಪಂದ್ಯಕ್ಕೂ ಮುನ್ನ ಆರ್ಸಿಬಿ ಹಾಗೂ ಪಂಜಾಬ್ ಕಿಂಗ್ಸ್ ಪ್ಲೇಆಫ್ ರೇಸ್ನಲ್ಲಿ ಸಮಬಲದಲ್ಲಿದ್ದರು. ಉಭಯ ತಂಡಗಳು 12 ಅಂಕಗಳನ್ನು ಪಡೆದಿದ್ದರಿಂದ ಕೊನೆಯ 2 ಪಂದ್ಯಗಳನ್ನು ಗೆದ್ದು 16 ಪಾಯಿಂಟ್ಸ್ನೊಂದಿಗೆ ಪ್ಲೇಆಫ್ ಪ್ರವೇಶಿಸುವ ಅವಕಾಶ ಇತ್ತು.

ಆದರೀಗ ಪಂಜಾಬ್ ಕಿಂಗ್ಸ್ ಸೋತಿದ್ದರಿಂದ ಆರ್ಸಿಬಿ ತಂಡದ ಹಾದಿ ಮತ್ತಷ್ಟು ಸುಗಮವಾಗಿದೆ. ಏಕೆಂದರೆ ಪಂಜಾಬ್ ಕಿಂಗ್ಸ್ ತಂಡ ಕೊನೆಯ ಪಂದ್ಯದಲ್ಲಿ ಗೆದ್ದರೂ ಇನ್ನು 14 ಪಾಯಿಂಟ್ಸ್ ಮಾತ್ರ ಗಳಿಸಲಿದೆ.

ಇತ್ತ ಆರ್ಸಿಬಿ ತನ್ನ ಮುಂದಿನ 2 ಪಂದ್ಯಗಳನ್ನು ಗೆದ್ದು 16 ಪಾಯಿಂಟ್ಸ್ನೊಂದಿಗೆ ಪ್ಲೇಆಫ್ ಪ್ರವೇಶಿಸಬಹುದು. ಆದರೆ ಇಲ್ಲಿ ಆರ್ಸಿಬಿಗೆ ಮುಂಬೈ ಇಂಡಿಯನ್ಸ್ ತಂಡದಿಂದ ಪೈಪೋಟಿ ಎದುರಾಗಲಿದೆ.

ಏಕೆಂದರೆ ಪ್ರಸ್ತುತ ಪಾಯಿಂಟ್ಸ್ ಟೇಬಲ್ನಲ್ಲಿ 14 ಅಂಕಗಳೊಂದಿಗೆ ನಾಲ್ಕನೇ ಸ್ಥಾನದಲ್ಲಿರುವ ಮುಂಬೈ ಇಂಡಿಯನ್ಸ್ ಕೊನೆಯ ಪಂದ್ಯದಲ್ಲಿ ಗೆದ್ದರೆ 16 ಪಾಯಿಂಟ್ಸ್ಗಳಿಸಲಿದೆ. ಈ ಮೂಲಕ ಪ್ಲೇಆಫ್ಗೆ ಪ್ರವೇಶಿಸುವ ಉತ್ತಮ ಅವಕಾಶ ಹೊಂದಿದೆ.

ಇತ್ತ ಆರ್ಸಿಬಿ ತಂಡವು ಸನ್ರೈಸರ್ಸ್ ಹೈದರಾಬಾದ್ ಹಾಗೂ ಗುಜರಾತ್ ಟೈಟಾನ್ಸ್ ವಿರುದ್ಧ ಗೆದ್ದರೆ 16 ಪಾಯಿಂಟ್ಸ್ ಆಗಲಿದೆ. ಇಲ್ಲಿ ಮುಂಬೈ ಇಂಡಿಯನ್ಸ್ಗಿಂತ ಆರ್ಸಿಬಿ ತಂಡದ ನೆಟ್ ರನ್ ರೇಟ್ ಉತ್ತಮವಾಗಿದ್ದರೆ ಮಾತ್ರ ಫಾಫ್ ಡುಪ್ಲೆಸಿಸ್ ಪಡೆ 4ನೇ ಸ್ಥಾನದೊಂದಿಗೆ ಪ್ಲೇಆಫ್ ಪ್ರವೇಶಿಸಬಹುದು.

ಆದರೆ ಇಲ್ಲಿ ಆರ್ಸಿಬಿ ಲೀಗ್ ಹಂತದ ಕೊನೆಯ ಪಂದ್ಯವಾಡಲಿದೆ. ಇದುವೇ ಫಾಫ್ ಪಡೆಗೆ ಪ್ಲಸ್ ಪಾಯಿಂಟ್ ಆಗಲಿದೆ. ಏಕೆಂದರೆ ಮುಂಬೈ ಇಂಡಿಯನ್ಸ್ 16 ಅಂಕಗಳನ್ನು ಪಡೆದರೂ, ಆರ್ಸಿಬಿ ಗುಜರಾತ್ ವಿರುದ್ಧದ ಕೊನೆಯ ಪಂದ್ಯದಲ್ಲಿ ನೆಟ್ ರನ್ ರೇಟ್ ಟಾರ್ಗೆಟ್ ಮಾಡಿ ಗೆಲ್ಲಲು ಉತ್ತಮ ಅವಕಾಶವಿದೆ.

ಈ ಮೂಲಕ ಮುಂಬೈ ಇಂಡಿಯನ್ಸ್ ತಂಡವನ್ನು ಹಿಂದಿಕ್ಕಿ ಅಂಕಪಟ್ಟಿಯಲ್ಲಿ ನಾಲ್ಕನೇ ಸ್ಥಾನ ಅಲಂಕರಿಸುವ ಮೂಲಕ ಆರ್ಸಿಬಿ ತಂಡವು ಪ್ಲೇಆಫ್ಗೆ ಪ್ರವೇಶಿಸಬಹುದು.
























