AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2023: ಪಂಜಾಬ್ ಕಿಂಗ್ಸ್​ಗೆ ಬಿಗ್ ಶಾಕ್: ತಂಡದಿಂದ ಸ್ಟಾರ್ ಆಟಗಾರ ಔಟ್

IPL 2023 Kannada: ಪಂಜಾಬ್ ಕಿಂಗ್ಸ್ ತಂಡ ಹೀಗಿದೆ: ಶಿಖರ್ ಧವನ್ (ನಾಯಕ), ಶಾರುಖ್ ಖಾನ್, ಪ್ರಭ್​ ಸಿಮ್ರಾನ್ ಸಿಂಗ್, ಭಾನುಕಾ ರಾಜಪಕ್ಸೆ, ಜಿತೇಶ್ ಶರ್ಮಾ, ರಾಜ್ ಬಾವಾ, ರಿಷಿ ಧವನ್, ಲಿಯಾಮ್ ಲಿವಿಂಗ್‌ಸ್ಟೋನ್.

TV9 Web
| Edited By: |

Updated on:Mar 21, 2023 | 11:27 PM

Share
ಇಂಡಿಯನ್ ಪ್ರೀಮಿಯರ್ ಲೀಗ್ ಆರಂಭಕ್ಕೆ ದಿನಗಳು ಮಾತ್ರ ಉಳಿದಿರುವಾಗ ಪಂಜಾಬ್ ಕಿಂಗ್ಸ್ ತಂಡಕ್ಕೆ ಆಘಾತ ಎದುರಾಗಿದೆ. ಟೂರ್ನಿ ಶುರುವಾಗಲು ವಾರ ಮಾತ್ರ ಬಾಕಿಯಿರುವಾಗ ತಂಡದ ಪ್ರಮುಖ ಆಟಗಾರ ಐಪಿಎಲ್​ನಿಂದ ಹೊರಗುಳಿಯುತ್ತಿರುವುದಾಗಿ ತಿಳಿಸಿದ್ದಾರೆ.

1 / 6
ಹೌದು, ಪಂಜಾಬ್ ಕಿಂಗ್ಸ್ ತಂಡದ ವಿಕೆಟ್ ಕೀಪರ್ ಬ್ಯಾಟರ್ ಜಾನಿ ಬೈರ್​ಸ್ಟೋವ್ ಐಪಿಎಲ್​ನಿಂದ ಹೊರಗುಳಿದಿದ್ದಾರೆ. ಕಳೆದ ಕೆಲ ತಿಂಗಳಿಂದ ಗಾಯದ ಸಮಸ್ಯೆಯಿಂದ ಬಳಲುತ್ತಿದ್ದ ಅವರು ಐಪಿಎಲ್​ ಮೂಲಕ ಕಂಬ್ಯಾಕ್ ಮಾಡಲಿದ್ದಾರೆ ಎಂದು ನಿರೀಕ್ಷಿಸಲಾಗಿತ್ತು.

2 / 6
ಆದರೀಗ ಸಂಪೂರ್ಣ ಫಿಟ್​ ಆಗಿರದ ಕಾರಣ ಐಪಿಎಲ್​ನಿಂದ ಹೊರಗುಳಿಯಲು ಜಾನಿ ಬೈರ್​ಸ್ಟೋವ್ ನಿರ್ಧರಿಸಿದ್ದಾರೆ. ಬೈರ್​ಸ್ಟೋವ್ ಕಳೆದ ವರ್ಷ ಸೆಪ್ಟೆಂಬರ್​ನಲ್ಲಿ ಗಾಯಗೊಂಡಿದ್ದರು. ಗಾಲ್ಫ್ ಆಡುತ್ತಿದ್ದ ವೇಳೆ ಜಾರಿಬಿದ್ದಿದ್ದರಿಂದ ಅವರ ಕಾಲಿಗೆ ಗಂಭೀರ ಗಾಯವಾಗಿತ್ತು. ಇದೇ ಕಾರಣದಿಂದ ಟಿ20 ವಿಶ್ವಕಪ್​ನಲ್ಲೂ  ಆಡಿರಲಿಲ್ಲ.

3 / 6
ಇದೀಗ 7 ತಿಂಗಳು ಕಳೆದರೂ ಜಾನಿ ಬೈರ್​ಸ್ಟೋವ್ ಮೈದಾನಕ್ಕಿಳಿಯಲು ಸಂಪೂರ್ಣ ಫಿಟ್ ಆಗಿಲ್ಲ. ಹೀಗಾಗಿ ವೈದ್ಯರ ಸೂಚನೆ ಮೇರೆಗೆ ಐಪಿಎಲ್​ನಿಂದ ಹೊರಗುಳಿಯಲು ನಿರ್ಧರಿಸಿದ್ದಾರೆ ಎಂದು ವರದಿಯಾಗಿದೆ. ಅಲ್ಲದೆ ಮುಂದಿನ ಆ್ಯಶಸ್ ಸರಣಿ ವೇಳೆ ಅವರು ಇಂಗ್ಲೆಂಡ್ ತಂಡದಲ್ಲಿ ಕಾಣಿಸಿಕೊಳ್ಳುವ ಸಾಧ್ಯತೆಯಿದೆ.

4 / 6
ಇತ್ತ ಪಂಜಾಬ್ ಕಿಂಗ್ಸ್ ಫ್ರಾಂಚೈಸಿ ಜಾನಿ ಬೈರ್​ಸ್ಟೋವ್ ಬದಲಿಗೆ ಮತ್ತೋರ್ವ ವಿಕೆಟ್ ಕೀಪರ್ ಬ್ಯಾಟರ್​ನ ಆಯ್ಕೆ ಮಾಡಬೇಕಿದೆ. ಇಲ್ಲಿ ವಿದೇಶಿ ಆಟಗಾರ ಹೊರಗುಳಿದಿರುವ ಕಾರಣ ಫಾರಿನ್ ಪ್ಲೇಯರ್​ನನ್ನೇ ಆಯ್ಕೆ ಮಾಡಬೇಕಾದ ಅನಿವಾರ್ಯತೆ ಪಂಜಾಬ್ ಕಿಂಗ್ಸ್ ಮುಂದಿದೆ.

5 / 6
ಪಂಜಾಬ್ ಕಿಂಗ್ಸ್ ತಂಡ ಹೀಗಿದೆ: ಶಿಖರ್ ಧವನ್ (ನಾಯಕ), ಶಾರುಖ್ ಖಾನ್, ಪ್ರಭ್​ ಸಿಮ್ರಾನ್ ಸಿಂಗ್, ಭಾನುಕಾ ರಾಜಪಕ್ಸೆ, ಜಿತೇಶ್ ಶರ್ಮಾ, ರಿಷಿ ಧವನ್, ಲಿಯಾಮ್ ಲಿವಿಂಗ್‌ಸ್ಟೋನ್, ಅಥರ್ವ ಥೈಡೆ, ಅರ್ಷ್‌ದೀಪ್ ಸಿಂಗ್, ಬಲ್ತೇಜ್ ಸಿಂಗ್, ನಾಥನ್ ಎಲ್ಲಿಸ್, ಕಗಿಸೊ ರಬಾಡ, ರಾಹುಲ್ ಚಾಹರ್, ಹರ್‌ಪ್ರೀತ್ ಬ್ರಾರ್, ಶಿವಂ ಸಿಂಗ್, ಮೋಹಿತ್ ರಥಿ, ವಿದ್ವತ್ ಕಾವೇರಪ್ಪ, ಹರ್‌ಪ್ರೀತ್ ಭಾಟಿಯಾ, ಸಿಕಂದರ್ ರಾಝ, ಸ್ಯಾಮ್ ಕರನ್, ಮ್ಯಾಥ್ಯೂ ಶಾರ್ಟ್​, ಗುರ್ನೂರ್ ಸಿಂಗ್ ಬ್ರಾರ್.

6 / 6

Published On - 10:23 pm, Tue, 21 March 23

ಅರಸು ದಾಖಲೆ ಬ್ರೇಕ್ ಮಾಡಲಿರುವ ಸಿಎಂ ಸಿದ್ದರಾಮಯ್ಯಗೆ ​​ಜೋಶಿ ಟಕ್ಕರ್

ಡ್ರ್ಯಾಗನ್ ಬೋಟಿಂಗ್​​: ಮೈಸೂರಿಗೆ ಬರುವವರು ಇದನ್ನು ಮಿಸ್ ಮಾಡ್ಬೇಡಿ

ಆಂಧ್ರದ ಶ್ರೀಕಾಕುಳಂನಲ್ಲಿ ರೈಲಿನ ಮೇಲೆ ಹತ್ತಿದ ಯುವಕನ ಹುಚ್ಚಾಟ

ಚಿಕ್ಕಮಗಳೂರು ಅರಣ್ಯ ಪ್ರದೇಶದಲ್ಲಿ ಕಾಡ್ಗಿಚ್ಚು: ವಿಡಿಯೋ ನೋಡಿ

ಕುಡಿದ ಮತ್ತಿನಲ್ಲಿ ಮಗನನ್ನೇ ಕಡಿದ ಅಪ್ಪ, ಛಿದ್ರವಾದ ಕುಟುಂಬ

ಕೊಪ್ಪಳ ಅಜ್ಜನ ಜಾತ್ರೆ ದ್ರೋಣ್ ಕ್ಯಾಮೆರಾದಲ್ಲಿ ಕಂಡಿದ್ದು ಹೀಗೆ

ಬಿಗ್ ಬಾಸ್ ಫಿನಾಲೆಗೆ ಗಿಲ್ಲಿ, ಧನುಷ್: ಭವಿಷ್ಯ ನುಡಿದ ಸ್ಪಂದನಾ ಸೋಮಣ್ಣ

ಸಿದ್ದರಾಮಯ್ಯ ಹೊಸ ದಾಖಲೆ: ಬೆಂಬಲಿಗರಿಂದ ನಾಟಿ ಕೋಳಿ ಔತಣ

ಆಂಧ್ರದಲ್ಲಿ ಭಾರಿ ಅನಿಲ ಸೋರಿಕೆಯಾಗಿ ಬೆಂಕಿ ದುರಂತ; ಸ್ಥಳೀಯರ ಸ್ಥಳಾಂತರ

ಗವಿಸಿದ್ದೇಶ್ವರ ಮಹಾರಥೋತ್ಸವ: ಪುಣ್ಯ ಕ್ಷಣಕ್ಕೆ ಸಾಕ್ಷಿಯಾದ 5 ಲಕ್ಷ ಮಂದಿ