IPL 2023 Final: ಐಪಿಎಲ್ ಫೈನಲ್ ವೇಳೆ ಮಳೆ ಬಂದರೆ ಫಲಿತಾಂಶ ನಿರ್ಧರಿಸುವುದು ಹೇಗೆ? ಇಲ್ಲಿದೆ ಮಾಹಿತಿ

| Updated By: ಝಾಹಿರ್ ಯೂಸುಫ್

Updated on: May 28, 2023 | 10:05 PM

IPL 2023 Kannada: ಒಂದು ವೇಳೆ ಫೈನಲ್ ಪಂದ್ಯದ ಮಳೆ ಬಂದರೆ ಐಪಿಎಲ್ ರೈನ್ ರೂಲ್ಸ್ ಪ್ರಕಾರವೇ ಪಂದ್ಯ ನಡೆಯಲಿದೆ. ಅಂದರೆ ಮಳೆ ಬಂದರೆ ಪಂದ್ಯವನ್ನು ಆಯೋಜಿಸಲು ಕೆಲ ನಿಯಮಗಳನ್ನು ರೂಪಿಸಲಾಗಿದೆ.

1 / 9
IPL 2023 Final: ಅಹಮದಾಬಾದ್​ನಲ್ಲಿ ನಡೆಯಬೇಕಿದ್ದ ಐಪಿಎಲ್ ಫೈನಲ್ ಪಂದ್ಯಕ್ಕೆ ವರುಣ ಅಡ್ಡಿಯಾಗಿದ್ದಾನೆ. 7.30 ಕ್ಕೆ ಶುರವಾಗಬೇಕಿದ್ದ ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ಗುಜರಾತ್ ಟೈಟಾನ್ಸ್ ನಡುವಣ ಪಂದ್ಯವು ಮಳೆಯ ಕಾರಣ ವಿಳಂಬವಾಗಿದೆ.

2 / 9
ಸದ್ಯ ಅಹಮದಾಬಾದ್​ನಲ್ಲಿ ಸತತ ಮಳೆಯಾಗುತ್ತಿದ್ದು, ಹೀಗಾಗಿ ಪಂದ್ಯ ಹೇಗೆ ನಡೆಯಲಿದೆ ಎಂಬ ಪ್ರಶ್ನೆಯೊಂದು ಹುಟ್ಟಿಕೊಂಡಿದೆ. ಒಂದು ವೇಳೆ ಮಳೆ ನಿಂತರೆ, ಐಪಿಎಲ್ ರೈನ್ ರೂಲ್ಸ್ ಪ್ರಕಾರ ಪಂದ್ಯ ನಡೆಯಲಿದೆ. ಅಂದರೆ ಮಳೆ ಬಂದರೆ ಪಂದ್ಯವನ್ನು ಆಯೋಜಿಸಲು ಕೆಲ ನಿಯಮಗಳನ್ನು ರೂಪಿಸಲಾಗಿದೆ.

3 / 9
ಫೈನಲ್ ಪಂದ್ಯದ ವೇಳೆ ಮಳೆ ಬಂದರೆ ಯಾವೆಲ್ಲಾ ನಿಯಮಗಳ ಪ್ರಕಾರ ಪಂದ್ಯವನ್ನು ಪೂರ್ಣಗೊಳಿಸಲಾಗುತ್ತದೆ ಎಂಬುದರ ಸಂಪೂರ್ಣ ಮಾಹಿತಿ ಈ ಕೆಳಗಿನಂತಿದೆ...

4 / 9
- ಟಾಸ್ ಪ್ರಕ್ರಿಯೆಗೂ ಮುನ್ನ ಮಳೆ ಬಂದು ಪಂದ್ಯ ತಡವಾಗಿ ಆರಂಭವಾದರೂ ಓವರ್​ಗಳನ್ನು ಕಡಿತಗೊಳಿಸುವುದಿಲ್ಲ. ಅಂದರೆ ಪಂದ್ಯವು ರಾತ್ರಿ 9.40 ರೊಳಗೆ ಶುರುವಾದರೆ ಯಾವುದೇ ಓವರ್​ ಕಡಿತ ಇರುವುದಿಲ್ಲ. 2 ತಂಡಗಳು 20 ಓವರ್​ಗಳನ್ನು ಆಡಲಿದೆ. (ಒಂದು ವೇಳೆ ಮತ್ತೆ ಅಡಚಣೆ ಉಂಟಾಗಲಿದೆ ಎಂಬ ಸೂಚನೆಯಿದ್ದರೆ ಮಾತ್ರ ಓವರ್​ಗಳ ಕಡಿತಕ್ಕೆ ಮುಂದಾಗಬಹುದು)

5 / 9
- ಮಳೆಯಿಂದ ವಿಳಂಬವಾಗಿ ರಾತ್ರಿ 9.40 ರ ಬಳಿಕ ಪಂದ್ಯ ಆರಂಭವಾಗುವುದಾರೆ, ಓವರ್​ಗಳ ಕಡಿತ ಮಾಡಲಾಗುತ್ತದೆ. ಅಲ್ಲದೆ ಆ ಬಳಿಕ ಡಕ್​ವರ್ತ್​ ಲೂಯಿಸ್ ನಿಯಮದ ಪ್ರಕಾರ ಫಲಿತಾಂಶ ನಿರ್ಧರಿಸಬೇಕಿದ್ದರೆ ಉಭಯ ತಂಡಗಳು ಕನಿಷ್ಠ 5 ಓವರ್​ಗಳನ್ನು ಆಡಿರಬೇಕು.

6 / 9
- ಇನ್ನು ನಿಗದಿತ ಸಮಯದೊಳಗೆ ಪಂದ್ಯ ನಡೆಯದಿದ್ದರೆ ಹೆಚ್ಚುವರಿ ಸಮಯ ತೆಗೆದುಕೊಳ್ಳಲಾಗುತ್ತದೆ. ಈ ಮೂಲಕ 5 ಓವರ್​ಗಳ ಪಂದ್ಯವನ್ನು ಆಯೋಜಿಸಲಿದೆ. ಈ 5 ಓವರ್​ಗಳ ಪಂದ್ಯವು ರಾತ್ರಿ 11.56 ರಿಂದ ಶುರುವಾಗಲಿದ್ದು, 12.50 ರೊಳಗೆ ಮುಗಿಯಲಿದೆ.

7 / 9
- ಇನ್ನು 11.56 ರಿಂದ 12.50 ರೊಳಗೆ 5 ಓವರ್​ಗಳ ಪಂದ್ಯ ಆಯೋಜಿಸಲು ಸಾಧ್ಯವಾಗದಿದ್ದರೆ ಸೂಪರ್ ಓವರ್ ನಡೆಸುವ ಸಾಧ್ಯತೆಯಿದೆ.

8 / 9
IPL 2022 ರಲ್ಲಿ ಫೈನಲ್ ಪಂದ್ಯಕ್ಕಾಗಿ ಮೀಸಲು ದಿನವನ್ನು ಘೋಷಿಸಲಾಗಿತ್ತು. ಅದರಂತೆ ಈ ಬಾರಿ ಕೂಡ ನಿಗದಿತ ಸಮಯದೊಳಗೆ ಪಂದ್ಯ ನಡೆಸಲು ಸಾಧ್ಯವಾಗದಿದ್ದರೆ ಸೋಮವಾರ ಪಂದ್ಯವನ್ನು ಆಯೋಜಿಸಲಿದೆ ಎಂದು ಗುಜರಾತ್ ಟೈಟಾನ್ಸ್ ತಿಳಿಸಿದೆ.

9 / 9
- ಒಂದು ವೇಳೆ ಮಳೆಯಿಂದಾಗಿ ಸೋಮವಾರ ಕೂಡ ಕನಿಷ್ಠ ಸೂಪರ್ ಓವರ್ ಪಂದ್ಯ ನಡೆಯದಿದ್ದರೆ, ಲೀಗ್​ ಹಂತದ 70 ಪಂದ್ಯಗಳ ನಂತರ ಪಾಯಿಂಟ್ಸ್​ ಟೇಬಲ್​ನಲ್ಲಿ ಅಗ್ರಸ್ಥಾನ ಅಲಂಕರಿಸಿದ ತಂಡವನ್ನು ಚಾಂಪಿಯನ್ಸ್ ಎಂದು ಘೋಷಿಸಲಾಗುತ್ತದೆ. ಎಂದು ವರದಿಯಾಗಿದೆ.

Published On - 8:29 pm, Sat, 27 May 23