- Kannada News Photo gallery Cricket photos IPL 2023: Rajat Patidar could miss first half of IPL Kannada News
IPL 2023: RCB ತಂಡಕ್ಕೆ ಮತ್ತೊಂದು ಆಘಾತ: ಮೊದಲಾರ್ಧದಿಂದ ಯುವ ಆಟಗಾರ ಔಟ್
IPL 2023 Kannada: RCB ತಂಡ ಹೀಗಿದೆ: ಫಾಫ್ ಡುಪ್ಲೆಸಿಸ್ (ನಾಯಕ), ವಿರಾಟ್ ಕೊಹ್ಲಿ, ದಿನೇಶ್ ಕಾರ್ತಿಕ್, ಅನೂಜ್ ರಾವತ್, ಫಿನ್ ಅಲೆನ್, ಜೋಶ್ ಹ್ಯಾಝಲ್ವುಡ್, ಮೊಹಮ್ಮದ್ ಸಿರಾಜ್, ಕರ್ಣ್ ಶರ್ಮಾ, ಸಿದ್ಧಾರ್ಥ್ ಕೌಲ್, ರೀಸ್ ಟೋಪ್ಲಿ.
Updated on: Mar 25, 2023 | 11:29 PM

IPL 2023: ಐಪಿಎಲ್ನ ಮೊದಲ ಪಂದ್ಯದಲ್ಲಿ ಬಲಿಷ್ಠ ಮುಂಬೈ ಇಂಡಿಯನ್ಸ್ ತಂಡಕ್ಕೆ ಸೋಲುಣಿಸಿ ಶುಭಾರಂಭ ಮಾಡಿದ್ದ ಆರ್ಸಿಬಿ (RCB) ತಂಡಕ್ಕೆ ಆಘಾತ ಎದುರಾಗಿದೆ. ತಂಡದ ಪ್ರಮುಖ ಆಟಗಾರ ಐಪಿಎಲ್ನಿಂದ ಹೊರಬಿದ್ದಿದ್ದಾರೆ.

ಹೌದು, ಆರ್ಸಿಬಿ ತಂಡದ ಮಧ್ಯಮ ಕ್ರಮಾಂಕದ ಬ್ಯಾಟ್ಸ್ಮನ್ ರಜತ್ ಪಾಟಿದಾರ್ ಪಾದದ ನೋವಿನ ಕಾರಣ ಐಪಿಎಲ್ನಿಂದ ಹೊರಗುಳಿಯಲು ನಿರ್ಧರಿಸಿದ್ದಾರೆ. ಈ ಹಿಂದೆ ಪಾಟಿದಾರ್ ಐಪಿಎಲ್ನ ಮೊದಲಾರ್ಧದಲ್ಲಿ ಕಾಣಿಸಿಕೊಳ್ಳುವುದಿಲ್ಲ ಎಂದು ವರದಿಯಾಗಿತ್ತು.

ಆದರೀಗ ಅವರು ಸಂಪೂರ್ಣವಾಗಿ ಚೇತರಿಸಿಕೊಳ್ಳಲು ಸಾಕಷ್ಟು ಸಮಯ ತೆಗೆದುಕೊಳ್ಳಲಿದೆ ಎಂದು ಎನ್‌ಸಿಎ ವೈದ್ಯರು ತಿಳಿಸಿದ್ದಾರೆ. ಹೀಗಾಗಿ ಪಾಟಿದಾರ್ ಈ ಬಾರಿಯ ಐಪಿಎಲ್ನಿಂದ ಹೊರಗುಳಿಯುವ ನಿರ್ಧಾರ ತೆಗೆದುಕೊಂಡಿದ್ದಾರೆ.

ಕಳೆದ ಸೀಸನ್ನಲ್ಲಿ ಆರ್ಸಿಬಿ ಪರ 3ನೇ ಕ್ರಮಾಂಕದಲ್ಲಿ ಆಡಿದ್ದ ರಜತ್ ಒಟ್ಟು 333 ರನ್ ಬಾರಿಸಿದ್ದರು. ಅಲ್ಲದೆ ಆರ್ಸಿಬಿ ಪರ ಅತ್ಯಧಿಕ ರನ್ ಕಲೆಹಾಕಿದ ಮೂರನೇ ಆಟಗಾರನಾಗಿ ಹೊರಹೊಮ್ಮಿದ್ದರು. ಇದೀಗ ಪ್ರಮುಖ ಆಟಗಾರ ಹೊರಗುಳಿಯುತ್ತಿರುವುದು ಆರ್ಸಿಬಿ ತಂಡಕ್ಕೆ ಹಿನ್ನಡೆಯನ್ನುಂಟು ಮಾಡಲಿದೆ.

ಇದರ ನಡುವೆ ರಜತ್ ಪಾಟಿದಾರ್ ಕೂಡ ಆರ್ಸಿಬಿ ತಂಡದಿಂದ ಹೊರಬಿದ್ದಿರುವುದು ತಂಡಕ್ಕೆ ಹಿನ್ನಡೆಯನ್ನುಂಟು ಮಾಡಬಹುದು. ಏಕೆಂದರೆ ಈ ಮೂವರು ಆಟಗಾರರು ಆರ್ಸಿಬಿ ತಂಡದ ಪ್ಲೇಯಿಂಗ್ ಇಲೆವೆನ್ನ ಖಾಯಂ ಸದಸ್ಯರು. ಹೀಗಾಗಿ ಪ್ರಮುಖ ಆಟಗಾರರ ಅಲಭ್ಯತೆಯು ಆರ್ಸಿಬಿ ತಂಡದ ಪಾಲಿಗೆ ಮುಂದಿನ ಪಂದ್ಯಗಳಿಗೆ ಮುಳುವಾಗಬಹುದು.

RCB ತಂಡ ಹೀಗಿದೆ: ಫಾಫ್ ಡುಪ್ಲೆಸಿಸ್ (ನಾಯಕ), ವಿರಾಟ್ ಕೊಹ್ಲಿ, ದಿನೇಶ್ ಕಾರ್ತಿಕ್, ಅನೂಜ್ ರಾವತ್, ಫಿನ್ ಅಲೆನ್, ಜೋಶ್ ಹ್ಯಾಝಲ್ವುಡ್, ಮೊಹಮ್ಮದ್ ಸಿರಾಜ್, ಕರ್ಣ್ ಶರ್ಮಾ, ಸಿದ್ಧಾರ್ಥ್ ಕೌಲ್, ರೀಸ್ ಟೋಪ್ಲಿ, ಹಿಮಾಂಶು ಶರ್ಮಾ, ರಜನ್ ಕುಮಾರ್, ಅವಿನಾಶ್ ಸಿಂಗ್, ಗ್ಲೆನ್ ಮ್ಯಾಕ್ಸ್ವೆಲ್, ವನಿಂದು ಹಸರಂಗ, ಮಹಿಪಾಲ್ ಲೋಮ್ರರ್, ಶಹಬಾಝ್ ಅಹ್ಮದ್, ಹರ್ಷಲ್ ಪಟೇಲ್, ಆಕಾಶ್ ದೀಪ್, ಡೇವಿಡ್ ವಿಲ್ಲಿ, ಸುಯಶ್ ಪ್ರಭುದೇಸಾಯಿ, ಮನೋಜ್ ಭಾಂಡಗೆ, ಸೋನು ಯಾದವ್, ಮೈಕೆಲ್ ಬ್ರೇಸ್ವೆಲ್.

RCB ತಂಡ ಹೀಗಿದೆ: ಫಾಫ್ ಡುಪ್ಲೆಸಿಸ್ (ನಾಯಕ), ವಿರಾಟ್ ಕೊಹ್ಲಿ, ದಿನೇಶ್ ಕಾರ್ತಿಕ್, ಅನೂಜ್ ರಾವತ್, ಫಿನ್ ಅಲೆನ್, ಜೋಶ್ ಹ್ಯಾಝಲ್ವುಡ್, ಮೊಹಮ್ಮದ್ ಸಿರಾಜ್, ಕರ್ಣ್ ಶರ್ಮಾ, ಸಿದ್ಧಾರ್ಥ್ ಕೌಲ್, ರೀಸ್ ಟೋಪ್ಲಿ, ಹಿಮಾಂಶು ಶರ್ಮಾ, ರಜನ್ ಕುಮಾರ್, ಅವಿನಾಶ್ ಸಿಂಗ್, ಗ್ಲೆನ್ ಮ್ಯಾಕ್ಸ್ವೆಲ್, ವನಿಂದು ಹಸರಂಗ, ಮಹಿಪಾಲ್ ಲೋಮ್ರರ್, ಶಹಬಾಝ್ ಅಹ್ಮದ್, ಹರ್ಷಲ್ ಪಟೇಲ್, ಆಕಾಶ್ ದೀಪ್, ಡೇವಿಡ್ ವಿಲ್ಲಿ, ಸುಯಶ್ ಪ್ರಭುದೇಸಾಯಿ, ಮನೋಜ್ ಭಾಂಡಗೆ, ಸೋನು ಯಾದವ್, ಮೈಕೆಲ್ ಬ್ರೇಸ್ವೆಲ್, ರಜತ್ ಪಾಟಿದಾರ್ (ಗಾಯಾಳು).









