IPL 2023: ಶಸ್ತ್ರಚಿಕಿತ್ಸೆಗೆ ಒಳಗಾದ RCB ಆಟಗಾರ..!
TV9 Web | Updated By: ಝಾಹಿರ್ ಯೂಸುಫ್
Updated on:
May 03, 2023 | 7:22 PM
IPL 2023 Kannada: ಆರ್ಸಿಬಿ ಪರ 3ನೇ ಕ್ರಮಾಂಕದಲ್ಲಿ ಆಡಿದ್ದ ರಜತ್ ಒಟ್ಟು 333 ರನ್ ಬಾರಿಸಿದ್ದರು. ಅಲ್ಲದೆ ಆರ್ಸಿಬಿ ಪರ ಅತ್ಯಧಿಕ ರನ್ ಕಲೆಹಾಕಿದ ಮೂರನೇ ಆಟಗಾರನಾಗಿ ಹೊರಹೊಮ್ಮಿದ್ದರು.
1 / 6
IPL 2023: ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಆಟಗಾರನಾಗಿದ್ದ ರಜತ್ ಪಾಟಿದಾರ್ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದಾರೆ. ಈ ಬಗ್ಗೆ ಖುದ್ದು ಪಾಟಿದಾರ್ ಮಾಹಿತಿ, ಶೀಘ್ರದಲ್ಲೇ ಕಂಬ್ಯಾಕ್ ಮಾಡುತ್ತೇನೆ ಎಂದು ತಿಳಿಸಿದ್ದಾರೆ.
2 / 6
ಈ ಬಾರಿ ಆರ್ಸಿಬಿ ತಂಡದಲ್ಲಿದ್ದ ರಜತ್ ಪಾಟಿದಾರ್ ಪಾದದ ನೋವಿನ ಸಮಸ್ಯೆಗೆ ಒಳಗಾಗಿದ್ದರು. ಹೀಗಾಗಿ ಐಪಿಎಲ್ ಆರಂಭಕ್ಕೂ ಮುನ್ನ ತಂಡದಿಂದ ಹೊರಗುಳಿದಿದ್ದರು. ಅಲ್ಲದೆ ಪಾಟಿದಾರ್ ಬದಲಿಗೆ ಕರ್ನಾಟಕದ ವೇಗಿ ವೈಶಾಕ್ ವಿಜಯಕುಮಾರ್ ಆರ್ಸಿಬಿ ತಂಡಕ್ಕೆ ಆಯ್ಕೆಯಾಗಿದ್ದರು.
3 / 6
ಇದೀಗ ತಮ್ಮ ಗಾಯದ ಬಗ್ಗೆ ಅಪ್ಡೇಟ್ ನೀಡಿರುವ ರಜತ್ ಪಾಟಿದಾರ್, ನಾನು ಇತ್ತೀಚಿಗೆ ಒಂದು ಗಾಯದ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದೇನೆ. ಈಗ ಚೇತರಿಕೆಯ ಹಾದಿಯಲ್ಲಿದ್ದೇನೆ ಎಂದು ಹೇಳಲು ನನಗೆ ಸಂತೋಷವಾಗಿದೆ.
4 / 6
ಹಾಗೆಯೇ ಮೈದಾನಕ್ಕೆ ಹಿಂತಿರುಗಲು ಮತ್ತು ನಾನು ಹೆಚ್ಚು ಇಷ್ಟಪಡುವದನ್ನು ಮಾಡಲು ಕಾಯಲು ಸಾಧ್ಯವಿಲ್ಲ. ನಿಮ್ಮ ಪ್ರಾರ್ಥನೆ ಮತ್ತು ಶುಭಾಶಯಗಳಿಗಾಗಿ ಎಲ್ಲರಿಗೂ ಧನ್ಯವಾದಗಳು. ಶೀಘ್ರದಲ್ಲೇ ಕಂಬ್ಯಾಕ್ ಮಾಡುವುದಾಗಿ ತಿಳಿಸಿದ್ದಾರೆ.
5 / 6
ಕಳೆದ ಸೀಸನ್ನಲ್ಲಿ ಆರ್ಸಿಬಿ ಪರ 3ನೇ ಕ್ರಮಾಂಕದಲ್ಲಿ ಆಡಿದ್ದ ರಜತ್ ಒಟ್ಟು 333 ರನ್ ಬಾರಿಸಿದ್ದರು. ಅಲ್ಲದೆ ಆರ್ಸಿಬಿ ಪರ ಅತ್ಯಧಿಕ ರನ್ ಕಲೆಹಾಕಿದ ಮೂರನೇ ಆಟಗಾರನಾಗಿ ಹೊರಹೊಮ್ಮಿದ್ದರು. ಆದರೆ ಈ ಬಾರಿ ಪಾಟಿದಾರ್ ಅವರ ಅನುಪಸ್ಥಿತಿ ಆರ್ಸಿಬಿ ತಂಡವನ್ನು ಕಾಡುತ್ತಿದೆ.
6 / 6
ಏಕೆಂದರೆ ಆರ್ಸಿಬಿ ಆಡಿರುವ 9 ಪಂದ್ಯಗಳಲ್ಲೂ ಮಧ್ಯಮ ಕ್ರಮಾಂಕದ ಬ್ಯಾಟ್ಸ್ಮನ್ಗಳು ಯಶಸ್ವಿಯಾಗಿಲ್ಲ. ಅದರಲ್ಲೂ ಮೂರನೇ ಕ್ರಮಾಂಕದಲ್ಲಿ ಹಲವು ಆಟಗಾರರನ್ನು ಕಣಕ್ಕಿಳಿಸಿದರೂ ಯಾವುದೇ ಬ್ಯಾಟರ್ ಮಿಂಚದಿರುವುದು ಆರ್ಸಿಬಿ ತಂಡದ ಚಿಂತೆಯನ್ನು ಹೆಚ್ಚಿಸಿದೆ.