AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2023: ವಿರಾಟ್ ಕೊಹ್ಲಿಗೆ 24 ಲಕ್ಷ ರೂ. ದಂಡ: ಬ್ಯಾನ್ ಭೀತಿಯಲ್ಲಿ RCB ನಾಯಕ..!

IPL 2023 Kannada: ರಾಜಸ್ಥಾನ್ ರಾಯಲ್ಸ್ ವಿರುದ್ಧದ ಪಂದ್ಯದಲ್ಲಿ ನಾಯಕ ವಿರಾಟ್ ಕೊಹ್ಲಿ ನಿಗದಿತ ಸಮಯದೊಳಗೆ ಓವರ್​ಗಳನ್ನು ಪೂರ್ಣಗೊಳಿಸುವಲ್ಲಿ ವಿಫಲರಾಗಿದ್ದಾರೆ.

TV9 Web
| Edited By: |

Updated on:Apr 25, 2023 | 1:48 PM

Share
IPL 2023: ರಾಜಸ್ಥಾನ್ ರಾಯಲ್ಸ್​ ವಿರುದ್ಧದ ಗೆಲುವಿನ ಖುಷಿಯ ತೇಲುತ್ತಿದ್ದ ಆರ್​ಸಿಬಿ ತಂಡಕ್ಕೆ ಬಿಗ್ ಶಾಕ್ ಎದುರಾಗಿದೆ. ಆರ್​ಆರ್ ವಿರುದ್ಧದ ಪಂದ್ಯದಲ್ಲಿ ಸ್ಲೋ ಓವರ್ ರೇಟ್​ಗಾಗಿ ಆರ್​ಸಿಬಿ ತಂಡಕ್ಕೆ ಭಾರೀ ಮೊತ್ತದ ದಂಡ ವಿಧಿಸಲಾಗಿದೆ.

1 / 8
ಇಲ್ಲಿ ನಿಧಾನಗತಿಯ ಓವರ್​ ರೇಟ್​ಗಾಗಿ ಆರ್​ಸಿಬಿ ತಂಡದ ಹಂಗಾಮಿ ನಾಯಕ ವಿರಾಟ್ ಕೊಹ್ಲಿಗೆ 24 ಲಕ್ಷ ರೂ. ದಂಡ ವಿಧಿಸಿದರೆ, ಪ್ಲೇಯಿಂಗ್ ಇಲೆವೆನ್​ನ ಭಾಗವಾಗಿದ್ದ ಉಳಿದ ಆಟಗಾರರಿಗೆ 6 ಲಕ್ಷ ರೂ. ಅಥವಾ ಪಂದ್ಯ ಶುಲ್ಕದ 25 ಪ್ರತಿಶತದಷ್ಟು ದಂಡವನ್ನು ವಿಧಿಸಲಾಗಿದೆ.

2 / 8
ಆರ್​ಸಿಬಿ ತಂಡದ ನಾಯಕ 2ನೇ ಬಾರಿ ನಿಧಾನಗತಿಯಲ್ಲಿ ಓವರ್ ಮುಗಿಸಿದ್ದು, ಹೀಗಾಗಿ ಕಳೆದ ಬಾರಿಗಿಂತ ಈ ಬಾರಿ ಹೆಚ್ಚಿನ ದಂಡ ವಿಧಿಸಲಾಗಿದೆ. ಏತನ್ಮಧ್ಯೆ, ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧದ ಪಂದ್ಯದಲ್ಲಿ ನಿಧಾನಗತಿಯಲ್ಲಿ ಓವರ್​ಗಳನ್ನು ಮುಗಿಸಿದ್ದ ಪರಿಣಾಮ​ ಫಾಫ್‌ ಡುಪ್ಲೆಸಿಸ್​ಗೆ 12 ಲಕ್ಷ ದಂಡ ವಿಧಿಸಲಾಗಿತ್ತು. ಇದೀಗ ಆರ್​ಸಿಬಿ 2ನೇ ಬಾರಿ ತಪ್ಪನ್ನು ಪುನರಾವರ್ತಿಸಿದೆ.

3 / 8
ಒಂದು ವೇಳೆ ಆರ್​ಸಿಬಿ ತಂಡದ ಹಂಗಾಮಿ ನಾಯಕ ವಿರಾಟ್ ಕೊಹ್ಲಿ ಮುಂದಿನ ಪಂದ್ಯದಲ್ಲೂ ಇದೇ ತಪ್ಪನ್ನು ಮಾಡಿದರೆ, ಒಂದು ಪಂದ್ಯದ ನಿಷೇಧಕ್ಕೆ ಒಳಗಾಗಲಿದ್ದಾರೆ. ಹೀಗಾಗಿ ಕೆಕೆಆರ್ ವಿರುದ್ಧದ ಪಂದ್ಯದಲ್ಲಿ ಆರ್​ಸಿಬಿ ನಿಗದಿತ ಸಮಯದಲ್ಲಿ 20 ಓವರ್​ಗಳನ್ನು ಪೂರ್ಣಗೊಳಿಸಬೇಕಾಗುತ್ತದೆ.

4 / 8
ಐಸಿಸಿ ನಿಯಮದ ಪ್ರಕಾರ ಟಿ20 ಕ್ರಿಕೆಟ್​ನಲ್ಲಿ 20 ಓವರ್​ಗಳನ್ನು 1 ಗಂಟೆ 25 ನಿಮಿಷದೊಳಗೆ ಪೂರ್ಣಗೊಳಿಸಬೇಕು. ಒಂದು ವೇಳೆ ಅದಕ್ಕಿಂತ ಹೆಚ್ಚಿನ ಸಮಯ ತೆಗೆದುಕೊಂಡರೆ ಉಳಿದ ಓವರ್​ಗಳ ವೇಳೆ ಫೀಲ್ಡಿಂಗ್ ತಂಡವು ಬೌಂಡರಿ ಲೈನ್​ನಿಂದ ಒಬ್ಬ ​ಆಟಗಾರನನ್ನು 30 ಯಾರ್ಡ್​ ಸರ್ಕಲ್​ನಲ್ಲಿ ನಿಲ್ಲಿಸಬೇಕಾಗುತ್ತದೆ.

5 / 8
ಇನ್ನು ಸ್ಲೋ ಓವರ್​ ರೇಟ್​ ನಿಯಮದ ಅಡಿಯಲ್ಲಿ ಮೊದಲ ತಪ್ಪಿಗೆ ನಾಯಕನನ್ನು ದೋಷಿಯನ್ನಾಗಿಸಲಾಗುತ್ತದೆ. ಅದರಂತೆ ಮೊದಲ ಬಾರಿಯ ತಪ್ಪಿಗೆ 12 ಲಕ್ಷ ರೂ. ದಂಡ ವಿಧಿಸಲಾಗುತ್ತದೆ. ಇದು ಪುನರಾವರ್ತನೆಯಾದರೆ 24 ಲಕ್ಷ ರೂ. ದಂಡ ನಿಗದಿ ಮಾಡಲಾಗಿದೆ. ಅಲ್ಲದೆ ತಂಡದ ಇತರೆ ಆಟಗಾರರು ಪಂದ್ಯ ಶುಲ್ಕದ ಶೇ.25 ರಷ್ಟು ಮೊತ್ತವನ್ನು ದಂಡವಾಗಿ ಪಾವತಿಸಬೇಕು.

6 / 8
ಇದೀಗ ರಾಜಸ್ಥಾನ್ ರಾಯಲ್ಸ್ ವಿರುದ್ಧದ ಪಂದ್ಯದಲ್ಲಿ ನಾಯಕ ವಿರಾಟ್ ಕೊಹ್ಲಿ ನಿಗದಿತ ಸಮಯದೊಳಗೆ ಓವರ್​ಗಳನ್ನು ಪೂರ್ಣಗೊಳಿಸುವಲ್ಲಿ ವಿಫಲರಾಗಿದ್ದಾರೆ. ಹೀಗಾಗಿ ಅವರಿಗೆ 24 ಲಕ್ಷ ರೂ. ಹಾಗೂ ಉಳಿದ ಆಟಗಾರರಿಗೆ 6 ಲಕ್ಷ ರೂ. ಅಥವಾ ಪಂದ್ಯ ಶುಲ್ಕದ 25 ರಷ್ಟು ದಂಡ ವಿಧಿಸಿದೆ.

7 / 8
ಅಲ್ಲದೆ ಆರ್​ಸಿಬಿ ನಾಯಕನಿಗೆ ಕೊನೆಯ ಎಚ್ಚರಿಕೆಯನ್ನು ಕೂಡ ನೀಡಲಾಗಿದ್ದು, ಈ ತಪ್ಪು ಮುಂದಿನ ಪಂದ್ಯಗಳಲ್ಲಿ ಪುನರಾವರ್ತನೆಯಾದರೆ ತಂಡದ ನಾಯಕ ಒಂದು ಪಂದ್ಯದಿಂದ ಹೊರಗುಳಿಯಬೇಕಾಗುತ್ತದೆ.

8 / 8

Published On - 11:16 pm, Mon, 24 April 23

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್

ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ

ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು

ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ

ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ

ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ

ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ

ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​

ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ

ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ