IPL 2023: RCB ತಂಡಕ್ಕೆ ಕಿವೀಸ್​ನ ಸ್ಟಾರ್ ಆಟಗಾರ ಎಂಟ್ರಿ?

| Updated By: ಝಾಹಿರ್ ಯೂಸುಫ್

Updated on: Mar 16, 2023 | 4:09 PM

IPL 2023 Kannada: ಐಪಿಎಲ್ ಸೀಸನ್ 16 ಮಾರ್ಚ್ 31 ರಿಂದ ಶುರುವಾಗಲಿದ್ದು, ಮೊದಲ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ಹಾಲಿ ಚಾಂಪಿಯನ್ ಗುಜರಾತ್ ಟೈಟಾನ್ಸ್ ಮುಖಾಮುಖಿಯಾಗಲಿದೆ.

1 / 6
ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್​ 16 ಆರಂಭಕ್ಕೂ ಮುನ್ನವೇ ಕೆಲ ತಂಡಗಳಿಂದ ಸ್ಟಾರ್ ಆಟಗಾರರು ಹೊರಬಿದ್ದಿದ್ದಾರೆ. ಮುಂಬೈ ಇಂಡಿಯನ್ಸ್ ತಂಡದಿಂದ ಜಸ್​ಪ್ರೀತ್ ಬುಮ್ರಾ ಹಾಗೂ ಜ್ಯೆ ರಿಚರ್ಡ್ಸನ್ ಹೊರಗುಳಿದ ಬೆನ್ನಲ್ಲೇ, ಇದೀಗ ಆರ್​ಸಿಬಿ ತಂಡದಿಂದ ವಿಲ್ ಜಾಕ್ಸ್ ಹೊರನಡೆದಿದ್ದಾರೆ.

2 / 6
ಈ ಬಾರಿಯ ಹರಾಜಿನಲ್ಲಿ ಆರ್​ಸಿಬಿ ತಂಡವು ಇಂಗ್ಲೆಂಡ್ ಆಲ್​ರೌಂಡರ್ ವಿಲ್ ಜಾಕ್ಸ್ ಅವರನ್ನು 3.2 ಕೋಟಿ ರೂ.ಗೆ ಖರೀದಿಸಿತ್ತು. ಆದರೆ ಬಾಂಗ್ಲಾದೇಶ್ ವಿರುದ್ಧದ ಸರಣಿಯ ವೇಳೆ ಕಾಲಿಗೆ ಗಾಯವಾಗಿದ್ದರಿಂದ ಇದೀಗ ಜಾಕ್ಸ್ ಐಪಿಎಲ್​ನಿಂದ ಹೊರಗುಳಿಯಲು ನಿರ್ಧರಿಸಿದ್ದಾರೆ.

3 / 6
ಇತ್ತ ವಿಲ್ ಜಾಕ್ಸ್ ಐಪಿಎಲ್​ನಿಂದ ಹೊರಬೀಳುತ್ತಿದ್ದಂತೆ ಆರ್​ಸಿಬಿ ಫ್ರಾಂಚೈಸಿ ನ್ಯೂಜಿಲೆಂಡ್ ಆಟಗಾರ ಮೈಕೆಲ್ ಬ್ರೇಸ್​ವೆಲ್ ಜೊತೆ ಮಾತುಕತೆ ನಡೆಸಿದೆ. ಈ ಬಾರಿಯ ಹರಾಜಿನಲ್ಲಿ 1 ಕೋಟಿ ರೂ. ಮೂಲ ಬೆಲೆಯೊಂದಿಗೆ ಕಾಣಿಸಿಕೊಂಡಿದ್ದ ಬ್ರೇಸ್​ವೆಲ್ ಅವರನ್ನು ಯಾವುದೇ ಫ್ರಾಂಚೈಸಿ ಖರೀದಿಸಿರಲಿಲ್ಲ.

4 / 6
ಇದೀಗ ವಿಲ್ ಜಾಕ್ಸ್ ಅವರ ಬದಲಿ ಆಟಗಾರನಾಗಿ ಮೈಕೆಲ್ ಬ್ರೇಸ್​ವೆಲ್ ಅವರನ್ನು ಆಯ್ಕೆ ಮಾಡಲು ಆರ್​​ಸಿಬಿ ಆಸಕ್ತಿ ಹೊಂದಿದೆ. ಇದೇ ಕಾರಣದಿಂದಾಗಿ ನ್ಯೂಜಿಲೆಂಡ್​ ತಂಡದ ಎಡಗೈ ದಾಂಡಿಗ ಆರ್​ಸಿಬಿ ತಂಡಕ್ಕೆ ಬರುವುದು ಬಹುತೇಕ ಖಚಿತ ಎನ್ನಲಾಗುತ್ತಿದೆ.

5 / 6
ಐಪಿಎಲ್ ಸೀಸನ್ 16 ಮಾರ್ಚ್ 31 ರಿಂದ ಶುರುವಾಗಲಿದ್ದು, ಮೊದಲ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ಹಾಲಿ ಚಾಂಪಿಯನ್ ಗುಜರಾತ್ ಟೈಟಾನ್ಸ್ ಮುಖಾಮುಖಿಯಾಗಲಿದೆ. ಇನ್ನು ಆರ್​ಸಿಬಿ ತಂಡವು ಏಪ್ರಿಲ್ 2 ರಂದು ಮುಂಬೈ ಇಂಡಿಯನ್ಸ್ ವಿರುದ್ಧ ಕಣಕ್ಕಿಳಿಯುವ ಮೂಲಕ ಐಪಿಎಲ್ ಅಭಿಯಾನ ಆರಂಭಿಸಲಿದೆ.

6 / 6
RCB ತಂಡ ಹೀಗಿದೆ: ಫಾಫ್ ಡುಪ್ಲೆಸಿಸ್ (ನಾಯಕ), ವಿರಾಟ್ ಕೊಹ್ಲಿ, ರಜತ್ ಪಾಟಿದಾರ್, ದಿನೇಶ್ ಕಾರ್ತಿಕ್, ಅನೂಜ್ ರಾವತ್, ಫಿನ್ ಅಲೆನ್, ಜೋಶ್ ಹ್ಯಾಝಲ್​ವುಡ್​, ಮೊಹಮ್ಮದ್ ಸಿರಾಜ್, ಕರ್ಣ್​ ಶರ್ಮಾ, ಸಿದ್ಧಾರ್ಥ್​ ಕೌಲ್, ರೀಸ್ ಟೋಪ್ಲಿ, ಹಿಮಾಂಶು ಶರ್ಮಾ, ರಜನ್ ಕುಮಾರ್, ಅವಿನಾಶ್ ಸಿಂಗ್, ಗ್ಲೆನ್ ಮ್ಯಾಕ್ಸ್​ವೆಲ್, ವನಿಂದು ಹಸರಂಗ, ಮಹಿಪಾಲ್ ಲೋಮ್ರರ್, ಶಹಬಾಝ್ ಅಹ್ಮದ್, ಹರ್ಷಲ್ ಪಟೇಲ್, ಆಕಾಶ್ ದೀಪ್, ಡೇವಿಡ್ ವಿಲ್ಲಿ, ಸುಯಶ್ ಪ್ರಭುದೇಸಾಯಿ, ಮನೋಜ್ ಭಾಂಡಗೆ, ಸೋನು ಯಾದವ್, ಮೈಕೆಲ್ ಬ್ರೇಸ್​ವೆಲ್.