IPL 2023: RCB ತಂಡದ ಮುಂದಿನ ಪಂದ್ಯ ಗ್ರೀನ್ ಗೇಮ್..!
IPL 2023 Kannada: RCB ತಂಡ ಹೀಗಿದೆ: ಫಾಫ್ ಡುಪ್ಲೆಸಿಸ್ (ನಾಯಕ), ವಿರಾಟ್ ಕೊಹ್ಲಿ, ರಜತ್ ಪಾಟಿದಾರ್, ಮೈಕೆಲ್ ಬ್ರೇಸ್ವೆಲ್, ದಿನೇಶ್ ಕಾರ್ತಿಕ್, ಅನೂಜ್ ರಾವತ್, ಫಿನ್ ಅಲೆನ್, ಜೋಶ್ ಹ್ಯಾಝಲ್ವುಡ್, ಮೊಹಮ್ಮದ್ ಸಿರಾಜ್, ಕರ್ಣ್ ಶರ್ಮಾ, ಸಿದ್ಧಾರ್ಥ್ ಕೌಲ್.
Updated on: Apr 20, 2023 | 11:22 PM

IPL 2023 RCB: ಐಪಿಎಲ್ನ 27ನೇ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ವಿರುದ್ಧ ಗೆಲ್ಲುವ ಮೂಲಕ ಆರ್ಸಿಬಿ ತಂಡವು ಗೆಲುವಿನ ಲಯಕ್ಕೆ ಮರಳಿದೆ. ಆಡಿರುವ 6 ಪಂದ್ಯಗಳಲ್ಲಿ 3 ಸೋಲು ಹಾಗೂ 3 ಗೆಲುವಿನೊಂದಿಗೆ ಅಂಕ ಪಟ್ಟಿಯಲ್ಲಿ 5ನೇ ಸ್ಥಾನದಲ್ಲಿರುವ ಆರ್ಸಿಬಿ ತಂಡದ ಮುಂದಿನ ಎದುರಾಳಿ ರಾಜಸ್ಥಾನ್ ರಾಯಲ್ಸ್.

ಏಪ್ರಿಲ್ 23 ರಂದು ನಡೆಯಲಿರುವ ಪಂದ್ಯವು ಆರ್ಸಿಬಿ ಪಾಲಿಗೆ ತುಂಬಾ ಮಹತ್ವದ್ದು. ಏಕೆಂದರೆ ಆರ್ಸಿಬಿ ರಾಜಸ್ಥಾನ್ ರಾಯಲ್ಸ್ ವಿರುದ್ಧ ಗ್ರೀನ್ ಗೇಮ್ ಅಭಿಯಾನದೊಂದಿಗೆ ಕಣಕ್ಕಿಳಿಯಲಿದೆ.

ರಾಜಸ್ಥಾನ್ ರಾಯಲ್ಸ್ ವಿರುದ್ಧ ಈ ಪಂದ್ಯದಲ್ಲಿ ಆರ್ಸಿಬಿ ಹಸಿರು ಜೆರ್ಸಿ ತೊಟ್ಟು ಕಣಕ್ಕಿಳಿಯಲಿದ್ದು, ಈ ಮೂಲಕ ಮರವನ್ನು ಉಳಿಸಿ-ಬೆಳೆಸುವ ಬಗ್ಗೆ ಸಂದೇಶ ಸಾರಲಿದೆ. 2011 ರಿಂದ ಆರ್ಸಿಬಿ ಫ್ರಾಂಚೈಸಿಯು ಇಂತಹದೊಂದು ಅಭಿಯಾನ ನಡೆಸುತ್ತಿದ್ದು, ಈ ಮೂಲಕ ಪರಿಸರ ಸಂರಕ್ಷಿಸುವ ಬಗ್ಗೆ ಅರಿವು ಮೂಡಿಸುವ ಹಾದಿಯಲ್ಲಿ ಸಾಗಿದೆ.

ವಿಶೇಷ ಎಂದರೆ ಈ ಪಂದ್ಯದಲ್ಲಿ ಆರ್ಸಿಬಿ ಧರಿಸುವ ಗ್ರೀನ್ ಜೆರ್ಸಿಯು ಶೇ.100 ರಷ್ಟು ಮರು ಬಳಕೆಯ ವಸ್ತುಗಳಿಂದ ತಯಾರಿಸಲಾಗಿರುತ್ತದೆ. ಈ ಮೂಲಕ ಪರಿಸರ ಸಂರಕ್ಷಣೆಯ ಜೊತೆಗೆ ಮರು ಬಳಕೆಯನ್ನು ಕೂಡ ಉತ್ತೇಜಿಸಲಿದೆ.

ಅಂದಹಾಗೆ ಈ ಗ್ರೀನ್ ಗೇಮ್ ಈ ಬಾರಿ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆಯುತ್ತಿರುವುದು ವಿಶೇಷ. 2019 ರಲ್ಲಿ ಕೊನೆಯ ಬಾರಿ ಆರ್ಸಿಬಿ ತವರು ಮೈದಾನದಲ್ಲಿ ಗ್ರೀನ್ ಗೇಮ್ ಆಡಿತ್ತು. ಇದೀಗ ಮೂರು ವರ್ಷಗಳ ಬಳಿಕ ಮತ್ತೆ ಗ್ರೀನ್ ಜೆರ್ಸಿಯಲ್ಲಿ ಕಣಕ್ಕಿಳಿಯಲು ಸಜ್ಜಾಗಿರುವುದು ವಿಶೇಷ.

RCB ತಂಡ ಹೀಗಿದೆ: ಫಾಫ್ ಡುಪ್ಲೆಸಿಸ್ (ನಾಯಕ), ವಿರಾಟ್ ಕೊಹ್ಲಿ, ರಜತ್ ಪಾಟಿದಾರ್, ಮೈಕೆಲ್ ಬ್ರೇಸ್ವೆಲ್, ದಿನೇಶ್ ಕಾರ್ತಿಕ್, ಅನೂಜ್ ರಾವತ್, ಫಿನ್ ಅಲೆನ್, ಜೋಶ್ ಹ್ಯಾಝಲ್ವುಡ್, ಮೊಹಮ್ಮದ್ ಸಿರಾಜ್, ಕರ್ಣ್ ಶರ್ಮಾ, ಸಿದ್ಧಾರ್ಥ್ ಕೌಲ್, ಹಿಮಾಂಶು ಶರ್ಮಾ, ರಜನ್ ಕುಮಾರ್, ಅವಿನಾಶ್ ಸಿಂಗ್, ಗ್ಲೆನ್ ಮ್ಯಾಕ್ಸ್ವೆಲ್, ವನಿಂದು ಹಸರಂಗ, ಮಹಿಪಾಲ್ ಲೋಮ್ರರ್, ಶಹಬಾಝ್ ಅಹ್ಮದ್, ಹರ್ಷಲ್ ಪಟೇಲ್, ಆಕಾಶ್ ದೀಪ್, ಡೇವಿಡ್ ವಿಲ್ಲಿ, ಸುಯಶ್ ಪ್ರಭುದೇಸಾಯಿ, ಮನೋಜ್ ಭಾಂಡಗೆ, ಸೋನು ಯಾದವ್, ವೇಯ್ನ್ ಪಾರ್ನೆಲ್, ವೈಶಾಕ್ ವಿಜಯಕುಮಾರ್.

TV9 Kannada
Read More




