IPL 2023: ಕೈಕೊಟ್ಟ ಬೌಲರ್​ಗಳು: ಸೋಲಿನೊಂದಿಗೆ RCB ಅಭಿಯಾನ ಅಂತ್ಯ..!

IPL 2023 Kannada: ಈ ಪಂದ್ಯದಲ್ಲಿ ಟಾಸ್ ಗೆದ್ದ ಗುಜರಾತ್ ಟೈಟಾನ್ಸ್ ತಂಡದ ನಾಯಕ ಹಾರ್ದಿಕ್ ಪಾಂಡ್ಯ ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲು ಬ್ಯಾಟ್ ಮಾಡಿದ ಆರ್​ಸಿಬಿಗೆ ವಿರಾಟ್ ಕೊಹ್ಲಿ ಹಾಗೂ ಫಾಫ್ ಡುಪ್ಲೆಸಿಸ್ ಉತ್ತಮ ಆರಂಭ ಒದಗಿಸಿದ್ದರು.

ಝಾಹಿರ್ ಯೂಸುಫ್
|

Updated on:May 22, 2023 | 12:46 AM

IPL 2023: ಐಪಿಎಲ್​ ಸೀಸನ್​ 16 ರಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಅಭಿಯಾನ ಅಂತ್ಯವಾಗಿದೆ. ಗುಜರಾತ್ ಟೈಟಾನ್ಸ್​ ವಿರುದ್ಧದ ನಿರ್ಣಾಯಕ ಪಂದ್ಯದಲ್ಲಿ ಸೋಲುವ ಮೂಲಕ ಆರ್​ಸಿಬಿ ಪ್ಲೇಆಫ್ ಅವಕಾಶವನ್ನು ಕೈಚೆಲ್ಲಿಕೊಂಡಿತು.

1 / 11
ಈ ಪಂದ್ಯದಲ್ಲಿ ಟಾಸ್ ಗೆದ್ದ ಗುಜರಾತ್ ಟೈಟಾನ್ಸ್ ತಂಡದ ನಾಯಕ ಹಾರ್ದಿಕ್ ಪಾಂಡ್ಯ ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲು ಬ್ಯಾಟ್ ಮಾಡಿದ ಆರ್​ಸಿಬಿಗೆ ವಿರಾಟ್ ಕೊಹ್ಲಿ ಹಾಗೂ ಫಾಫ್ ಡುಪ್ಲೆಸಿಸ್ ಉತ್ತಮ ಆರಂಭ ಒದಗಿಸಿದ್ದರು.

2 / 11
ಇದಾದ ಬಳಿಕ ಆರ್​ಸಿಬಿ ತಂಡದ ಮಧ್ಯಮ ಕ್ರಮಾಂಕ ದಿಢೀರ್ ಕುಸಿತಕ್ಕೊಳಗಾದರೂ ವಿರಾಟ್ ಕೊಹ್ಲಿ ಏಕಾಂಗಿಯಾಗಿ ಇನಿಂಗ್ಸ್​ ಕಟ್ಟುವ ಜವಾಬ್ದಾರಿ ಹೆಗಲೇರಿಸಿಕೊಂಡರು. ಅದರಂತೆ ಏಕಾಂಗಿಯಾಗಿ ಹೋರಾಟ ಮುಂದುವರೆಸಿದ ಕಿಂಗ್ ಕೊಹ್ಲಿ 60 ಎಸೆತಗಳಲ್ಲಿ ಭರ್ಜರಿ ಶತಕ ಪೂರೈಸಿದರು.

3 / 11
ವಿರಾಟ್ ಕೊಹ್ಲಿಯ ಈ ಅಜೇಯ ಶತಕದ ನೆರವಿನಿಂದ ಆರ್​ಸಿಬಿ ತಂಡವು ನಿಗದಿತ 20 ಓವರ್​ಗಳಲ್ಲಿ 5 ವಿಕೆಟ್ ಕಳೆದುಕೊಂಡು 197 ರನ್​ ಕಲೆಹಾಕಿತು.

4 / 11
ಇತ್ತ ಬೃಹತ್ ಪೇರಿಸಿ ಗೆಲ್ಲುವ ವಿಶ್ವಾಸದೊಂದಿಗೆ ಕಣಕ್ಕಿಳಿದಿದ್ದ ಆರ್​ಸಿಬಿಗೆ ಮತ್ತೊಮ್ಮೆ ಪವರ್​ಪ್ಲೇನಲ್ಲೇ ಯಶಸ್ಸು ತಂದುಕೊಡುವಲ್ಲಿ ಮೊಹಮ್ಮದ್ ಸಿರಾಜ್ ಯಶಸ್ವಿಯಾದರು. ಆದರೆ ಬಳಿಕ ಜೊತೆಯಾದ ಶುಭ್​ಮನ್ ಗಿಲ್ ಹಾಗೂ ವಿಜಯ್ ಶಂಕರ್ 123 ರನ್​ಗಳ ಜೊತೆಯಾಟವಾಡಿದರು.

5 / 11
ವಿಕೆಟ್ ಪಡೆಯುವಲ್ಲಿ ವಿಫಲರಾದ ಆರ್​ಸಿಬಿ ಬೌಲರ್​ಗಳು ದುಬಾರಿಯಾಗಿ ಪರಿಣಮಿಸಿದರು. ಇದಾಗ್ಯೂ ಅಂತಿಮ ಹಂತದಲ್ಲಿ ಸತತ ವಿಕೆಟ್ ಕಬಳಿಸುವ ಮೂಲಕ ಕಂಬ್ಯಾಕ್ ಮಾಡಿದರೂ ಅದಾಗಲೇ ಗುಜರಾತ್ ಟೈಟಾನ್ಸ್​ ತಂಡವು ಗೆಲುವಿನತ್ತ ದಾಪುಗಾಲಿಟ್ಟಿತು.

6 / 11
ಕೊನೆಯ 2 ಓವರ್​ಗಳಲ್ಲಿ ಗುಜರಾತ್ ಟೈಟಾನ್ಸ್ ತಂಡವು 19 ರನ್​ಗಳ ಟಾರ್ಗೆಟ್ ಪಡೆಯಿತು. ಈ ಹಂತದಲ್ಲಿ ಹರ್ಷಲ್ ಪಟೇಲ್ ಎಸೆತದಲ್ಲಿ ಗಿಲ್ ಭರ್ಜರಿ ಸಿಕ್ಸ್ ಸಿಡಿಸಿದರು. ಅಲ್ಲದೆ ಅಂತಿಮ ಓವರ್​ಗೆ ಕೇವಲ 8 ರನ್​ಗಳ ಗುರಿಗೆ ತಂದು ನಿಲ್ಲಿಸಿದರು.

7 / 11
ಕೊನೆಯ ಓವರ್​ನಲ್ಲಿ ವೇಯ್ನ್ ಪಾರ್ನೆಲ್​ಗೆ ಭರ್ಜರಿ ಸಿಕ್ಸ್ ಸಿಡಿಸುವ ಮೂಲಕ ಶುಭ್​ಮನ್ ಗಿಲ್ 52 ಎಸೆತಗಳಲ್ಲಿ ಶತಕ ಪೂರೈಸುವುದರ ಜೊತೆಗೆ ಗುಜರಾತ್ ಟೈಟಾನ್ಸ್​ಗೆ 6 ವಿಕೆಟ್​ಗಳ ಅಮೋಘ ಗೆಲುವು ತಂದುಕೊಟ್ಟರು.

8 / 11
ಆರ್​ಸಿಬಿ ಪರ ವಿಜಯ್ ಕುಮಾರ್ ವೈಶಾಖ್ 4 ಓವರ್​ಗಳಲ್ಲಿ 40 ರನ್​ ನೀಡಿ 1 ವಿಕೆಟ್ ಪಡೆದರೆ, ಹೊಸ ಆಟಗಾರ ಹಿಮಾಂಶು ಶರ್ಮಾ 3 ಓವರ್​ಗಳಲ್ಲಿ 28 ರನ್ ನೀಡಿದರು. ಇನ್ನು ಹರ್ಷಲ್ ಪಟೇಲ್ 4 ಓವರ್​ಗಳಲ್ಲಿ 29 ರನ್ ನೀಡಿ 1 ವಿಕೆಟ್ ಉರುಳಿಸಿದರೆ, ವೇಯ್ನ್ ಪಾರ್ನೆಲ್ 3.1 ಓವರ್​ಗಳಲ್ಲಿ 42 ರನ್ ನೀಡಿದರು. ಹಾಗೆಯೇ ಸಿರಾಜ್ 4 ಓವರ್​ಗಳಲ್ಲಿ 32 ರನ್ ನೀಡಿ 2 ವಿಕೆಟ್ ಕಬಳಿಸಿದರು. ಅಂದರೆ ಬೌಲರ್​ಗಳ ಕಳಪೆ ಪ್ರದರ್ಶನದಿಂದಾಗಿ ಆರ್​ಸಿಬಿ ತಂಡವು 6 ವಿಕೆಟ್​ಗಳಿಂದ ಸೋಲೊಪ್ಪಿಕೊಳ್ಳಬೇಕಾಯಿತು.

9 / 11
ಇದರೊಂದಿಗೆ ಆಡಿರುವ 14 ಪಂದ್ಯಗಳಲ್ಲಿ 7 ಜಯ ಹಾಗೂ 7 ಸೋಲಿನೊಂದಿಗೆ ಆರ್​ಸಿಬಿ ತಂಡವು 16ನೇ ಸೀಸನ್ ಐಪಿಎಲ್ ಅಭಿಯಾನ ಅಂತ್ಯಗೊಳಿಸಿದೆ.

10 / 11
ಇತ್ತ ಆರ್​ಸಿಬಿ ಸೋಲಿನೊಂದಿಗೆ ಅತ್ತ 16 ಪಾಯಿಂಟ್ಸ್ ಕಲೆಹಾಕಿದ್ದ ಮುಂಬೈ ಇಂಡಿಯನ್ಸ್ ತಂಡವು ಅಂಕಪಟ್ಟಿಯಲ್ಲಿ 4ನೇ ಸ್ಥಾನ ಅಲಂಕರಿಸಿ ಪ್ಲೇಆಫ್ ಪ್ರವೇಶಿಸಿದೆ.

11 / 11

Published On - 12:44 am, Mon, 22 May 23

Follow us
ಸರ್ಕಾರೀ ಗೌರವಗಳೊಂದಿಗೆ ಅಂತ್ಯಸಂಸ್ಕಾರ ನಡೆಸಲು ಸಿಎಸ್​ಗೆ ಸಿಎಂ ಸೂಚನೆ

ಡಿಸೆಂಬರ್ 29ರಂದು ನಿಧನರಾದ ದಿವಿನ್ ಫೆಬ್ರುವರಿ 22ರಂದು ಮದುವೆಯಾಗಲಿದ್ದರು

ಬಿಗ್​ ಬಾಸ್ ಮನೆಗೆ ಬಂದ ಗೌತಮಿ ಜಾದವ್ ಪತಿ​; ಹೇಗಿತ್ತು ಮಂಜು ರಿಯಾಕ್ಷನ್?

ಭಾವುಕ ಜೀವಿ ಸಾರಾ ಮಹೇಶ್ ಗತಿಸಿದ ಚಿಂಟುಳನ್ನು ನೆನೆದು ಕಣ್ಣೀರಾಗುತ್ತಾರೆ!

ರಸ್ತೆ ತಡೆಗೋಡೆಯಿಲ್ಲದಿದ್ದರೆ ಬಸ್ಸು ಪ್ರಪಾತಕ್ಕೆ ಉರುಳುತಿತ್ತು!

ಕೆಪಿಸಿಸಿ ಅಧ್ಯಕ್ಷನನ್ನು ಬದಲಾಯಿಸುವುದು ಹೈಕಮಾಂಡ್​ಗೆ ಬಿಟ್ಟ ವಿಚಾರ: ಸಚಿವ

ತಂದೆ ಮುಖ ನೋಡಿ ಅಳು ನಿಲ್ಲಿಸಲೇ ಇಲ್ಲ ಉಗ್ರಂ ಮಂಜು; ಎಮೋಷನಲ್ ಎಪಿಸೋಡ್

ಪೊಲೀಸರ ಮೇಲೆ ಅಪಾರ ನಂಬಿಕೆಯಿದೆ, ಸಿಬಿಐ ತನಿಖೆ ಬೇಕಿಲ್ಲ: ಸಿದ್ದರಾಮಯ್ಯ

ಸಂವಿಧಾನದ ಆಶಯಗಳಿಗೆ ಕಾಂಗ್ರೆಸ್​ನಿಂದ ಅಪಪ್ರಚಾರ: ಸಿಟಿ ರವಿ

ಯುವಕ ಯುವತಿಯರ ಜೊತೆ ಮಧ್ಯವಯಸ್ಕ ಮಹಿಳೆಯರೂ ಪಬ್​ಗೆ ಬಂದಿದ್ದರು