IPL 2023: RCB ಗೆ ಬಿಗ್ ಶಾಕ್: ತಂಡದಿಂದ ಪ್ರಮುಖ ಆಟಗಾರ ಔಟ್..!

Edited By:

Updated on: Mar 15, 2023 | 10:08 PM

IPL 2023 Kannada: RCB ತಂಡ ಹೀಗಿದೆ: ಫಾಫ್ ಡುಪ್ಲೆಸಿಸ್ (ನಾಯಕ), ವಿರಾಟ್ ಕೊಹ್ಲಿ, ರಜತ್ ಪಾಟಿದಾರ್, ದಿನೇಶ್ ಕಾರ್ತಿಕ್, ಅನೂಜ್ ರಾವತ್, ಫಿನ್ ಅಲೆನ್, ಜೋಶ್ ಹ್ಯಾಝಲ್​ವುಡ್​, ಮೊಹಮ್ಮದ್ ಸಿರಾಜ್, ಕರ್ಣ್​ ಶರ್ಮಾ, ಸಿದ್ಧಾರ್ಥ್​ ಕೌಲ್, ರೀಸ್ ಟೋಪ್ಲಿ.

1 / 6
ಇಂಡಿಯನ್ ಪ್ರೀಮಿಯರ್ ಲೀಗ್ ಆರಂಭಕ್ಕೂ ಮುನ್ನವೇ ಆರ್​ಸಿಬಿ ತಂಡಕ್ಕೆ ಆಘಾತ ಎದುರಾಗಿದೆ. ಟೂರ್ನಿ ಆರಂಭಕ್ಕೆ ದಿನಗಳು ಮಾತ್ರ ಉಳಿದಿರುವಾಗ ಆರ್​ಸಿಬಿ ತಂಡದ ಪ್ರಮುಖ ಆಟಗಾರ ತಂಡದಿಂದ ಹೊರಗುಳಿಯಲು ನಿರ್ಧರಿಸಿದ್ದಾರೆ.

ಇಂಡಿಯನ್ ಪ್ರೀಮಿಯರ್ ಲೀಗ್ ಆರಂಭಕ್ಕೂ ಮುನ್ನವೇ ಆರ್​ಸಿಬಿ ತಂಡಕ್ಕೆ ಆಘಾತ ಎದುರಾಗಿದೆ. ಟೂರ್ನಿ ಆರಂಭಕ್ಕೆ ದಿನಗಳು ಮಾತ್ರ ಉಳಿದಿರುವಾಗ ಆರ್​ಸಿಬಿ ತಂಡದ ಪ್ರಮುಖ ಆಟಗಾರ ತಂಡದಿಂದ ಹೊರಗುಳಿಯಲು ನಿರ್ಧರಿಸಿದ್ದಾರೆ.

2 / 6

ಹೌದು, ಆರ್​ಸಿಬಿ ತಂಡದಲ್ಲಿರುವ ಇಂಗ್ಲೆಂಡ್​ನ ಯುವ ಆಲ್​ರೌಂಡರ್ ವಿಲ್ ಜಾಕ್ಸ್ ಗಾಯದ ಕಾರಣ ಐಪಿಎಲ್​ನಿಂದ ಹೊರಗುಳಿಯಲಿದ್ದಾರೆ ಎಂದು ವರದಿಯಾಗಿದೆ. ಇತ್ತೀಚೆಗಷ್ಟೇ ನಡೆದ ಬಾಂಗ್ಲಾದೇಶ್ ವಿರುದ್ಧದ ಸರಣಿಯ ವೇಳೆ ಜಾಕ್ಸ್ ಗಾಯಗೊಂಡಿದ್ದರು.

3 / 6

ಬಾಂಗ್ಲಾದೇಶ್ ವಿರುದ್ಧದ 2ನೇ ಏಕದಿನ ಪಂದ್ಯದ ವೇಳೆ ಫೀಲ್ಡಿಂಗ್ ಮಾಡುವಾಗ ಅವರ ಎಡತೊಡೆ ಭಾಗಕ್ಕೆ ಗಾಯವಾಗಿತ್ತು. ಈ ಗಾಯವು ಗಂಭೀರವಾಗಿರುವ ಕಾರಣ ಇದೀಗ ಐಪಿಎಲ್​ನಿಂದ ಹೊರಗುಳಿಯಲು ವಿಲ್ ಜಾಕ್ಸ್ ನಿರ್ಧರಿಸಿದ್ದಾರೆ.

4 / 6

ಅತ್ಯುತ್ತಮ ಸ್ಪಿನ್ ಆಲ್​ರೌಂಡರ್ ಆಗಿರುವ ವಿಲ್ ಜಾಕ್ಸ್ ಈ ಬಾರಿ ಆರ್​ಸಿಬಿ ತಂಡದ ಬಲಿಷ್ಠತೆಯನ್ನು ಹೆಚ್ಚಿಸುವ ನಿರೀಕ್ಷೆಯಿತ್ತು. ಅದರಲ್ಲೂ ಸ್ಪೋಟಕ ಬ್ಯಾಟಿಂಗ್ ನಡೆಸುವ ಜಾಕ್ಸ್ ಯಾವುದೇ ಕ್ರಮಾಂಕದಲ್ಲೂ ಬ್ಯಾಟ್ ಮಾಡಬಲ್ಲ ಸಾಮರ್ಥ್ಯ ಹೊಂದಿದ್ದರು.

5 / 6

ಹೀಗಾಗಿಯೇ ಆರ್​ಸಿಬಿ ಇಂಗ್ಲೆಂಡ್ ಆಲ್​ರೌಂಡರ್​ನನ್ನು ಬರೋಬ್ಬರಿ 3.2 ಕೋಟಿ ನೀಡಿ ಖರೀದಿಸಿತ್ತು. ಇದೀಗ ಗಾಯಗೊಂಡಿರುವುದರಿಂದ ವಿಲ್ ಜಾಕ್ಸ್​ ಐಪಿಎಲ್​ನಿಂದ ಹೊರಗುಳಿಯುವ ನಿರ್ಧಾರ ಮಾಡಿದ್ದಾರೆ.

6 / 6

RCB ತಂಡ ಹೀಗಿದೆ: ಫಾಫ್ ಡುಪ್ಲೆಸಿಸ್ (ನಾಯಕ), ವಿರಾಟ್ ಕೊಹ್ಲಿ, ರಜತ್ ಪಾಟಿದಾರ್, ದಿನೇಶ್ ಕಾರ್ತಿಕ್, ಅನೂಜ್ ರಾವತ್, ಫಿನ್ ಅಲೆನ್, ಜೋಶ್ ಹ್ಯಾಝಲ್​ವುಡ್​, ಮೊಹಮ್ಮದ್ ಸಿರಾಜ್, ಕರ್ಣ್​ ಶರ್ಮಾ, ಸಿದ್ಧಾರ್ಥ್​ ಕೌಲ್, ರೀಸ್ ಟೋಪ್ಲಿ, ಹಿಮಾಂಶು ಶರ್ಮಾ, ರಜನ್ ಕುಮಾರ್, ಅವಿನಾಶ್ ಸಿಂಗ್, ಗ್ಲೆನ್ ಮ್ಯಾಕ್ಸ್​ವೆಲ್, ವನಿಂದು ಹಸರಂಗ, ಮಹಿಪಾಲ್ ಲೋಮ್ರರ್, ಶಹಬಾಝ್ ಅಹ್ಮದ್, ಹರ್ಷಲ್ ಪಟೇಲ್, ಆಕಾಶ್ ದೀಪ್, ಡೇವಿಡ್ ವಿಲ್ಲಿ, ಸುಯಶ್ ಪ್ರಭುದೇಸಾಯಿ, ಮನೋಜ್ ಭಾಂಡಗೆ, ಸೋನು ಯಾದವ್.

TV9 Web

TV9 Kannada

Read More
Loading...
Unable to load recommendations.
Follow Us