
IPL 2023 RCB vs KKR: ಐಪಿಎಲ್‌ನ 36ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಕೊಲ್ಕತ್ತಾ ನೈಟ್ ರೈಡರ್ಸ್ ತಂಡಗಳು ಮುಖಾಮುಖಿಯಾಗಲಿದೆ. ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆಯಲಿರುವ ಈ ಪಂದ್ಯದಲ್ಲಿ ಆರ್ಸಿಬಿ ಆಡುವ ಬಳಗದ ಆಯ್ಕೆಯೇ ದೊಡ್ಡ ಸವಾಲು.

ಏಕೆಂದರೆ ತಂಡದಲ್ಲಿ ವಿದೇಶಿ ಆಟಗಾರರಾಗಿ ಫಾಫ್ ಡುಪ್ಲೆಸಿಸ್, ಗ್ಲೆನ್ ಮ್ಯಾಕ್ಸ್ವೆಲ್, ವನಿಂದು ಹಸರಂಗ ಹಾಗೂ ಡೇವಿಡ್ ವಿಲ್ಲಿ ಕಣಕ್ಕಿಳಿಯುತ್ತಿದ್ದಾರೆ. ಇದೀಗ ಪ್ರಮುಖ ವೇಗಿ ಜೋಶ್ ಹ್ಯಾಝಲ್ವುಡ್ ಕೂಡ ಸಂಪೂರ್ಣ ಫಿಟ್ ಆಗಿದ್ದಾರೆ. ಹೀಗಾಗಿ ಓರ್ವ ವಿದೇಶಿ ಆಟಗಾರನನ್ನು ತಂಡದಿಂದ ಕೈ ಬಿಡಬೇಕಾಗುತ್ತದೆ.

ಇಲ್ಲಿ ಜೋಶ್ ಹ್ಯಾಝಲ್ವುಡ್ಗೆ ಸ್ಥಾನ ನೀಡಬೇಕಿದ್ದರೆ ಡೇವಿಡ್ ವಿಲ್ಲಿಯನ್ನು ಕೈ ಬಿಡಬೇಕಾಗುತ್ತದೆ. ಆದರೆ 3 ಪಂದ್ಯಗಳಲ್ಲಿ ಕಣಕ್ಕಿಳಿದಿದ್ದ ವಿಲ್ಲಿ ಉತ್ತಮ ಪ್ರದರ್ಶನವನ್ನೇ ನೀಡಿದ್ದಾರೆ.

ಈ ಬಾರಿಯ ಐಪಿಎಲ್ನಲ್ಲಿ ಮೂರು ಪಂದ್ಯಗಳಲ್ಲಿ ಬೌಲಿಂಗ್ ಮಾಡಿದ್ದ ಡೇವಿಡ್ ವಿಲ್ಲಿ ಒಟ್ಟು 12 ಓವರ್ ಬೌಲಿಂಗ್ ಮಾಡಿದ್ದಾರೆ. ಈ ವೇಳೆ ಕೇವಲ 74 ರನ್ ನೀಡಿ 3 ವಿಕೆಟ್ ಕಬಳಿಸಿದ್ದಾರೆ. ಅಂದರೆ 72 ಎಸೆತಗಳಲ್ಲಿ ನೀಡಿರುವುದು ಕೇವಲ 74 ರನ್ ಮಾತ್ರ.

ಅಂದರೆ ಡೇವಿಡ್ ವಿಲ್ಲಿ ಕಣಕ್ಕಿಳಿದ ಮೂರು ಪಂದ್ಯಗಳಲ್ಲೂ ಉತ್ತಮ ಬೌಲಿಂಗ್ ಪ್ರದರ್ಶನ ನೀಡಿದ್ದಾರೆ. ಇದೀಗ ಜೋಶ್ ಹ್ಯಾಝಲ್ವುಡ್ಗಾಗಿ ಅವರನ್ನು ತಂಡದಿಂದ ಕೈ ಬಿಡಬೇಕಾದ ಅನಿವಾರ್ಯತೆ ಆರ್ಸಿಬಿ ಮುಂದಿದೆ.

ಅತ್ತ ಐಪಿಎಲ್‌ನ 2022 ರ ಆವೃತ್ತಿಯಲ್ಲಿ ಆರ್ಸಿಬಿ ಪರ ಅತಿ ಹೆಚ್ಚು ವಿಕೆಟ್ ಪಡೆದ ವೇಗಿ ಜೋಶ್ ಹ್ಯಾಝಲ್ವುಡ್. 12 ಪಂದ್ಯಗಳಿಂದ ಒಟ್ಟು 20 ವಿಕೆಟ್ ಪಡೆಯುವ ಮೂಲಕ ಮಿಂಚಿದ್ದರು. ಆದರೆ ಮೊಣಕಾಲಿನ ನೋವಿನ ಸಮಸ್ಯೆಯ ಕಾರಣ ಮೊದಲಾರ್ಧದಲ್ಲಿ ಕಣಕ್ಕಿಳಿದಿರಲಿಲ್ಲ. ಇದೀಗ ಸಂಪೂರ್ಣ ಫಿಟ್ ಆಗಿದ್ದು, ಕೆಕೆಆರ್ ವಿರುದ್ಧ ಕಣಕ್ಕಿಳಿಯಲು ಸಜ್ಜಾಗಿದ್ದಾರೆ.

ಆದರೆ ಡೇವಿಡ್ ವಿಲ್ಲಿ ಅಥವಾ ಜೋಶ್ ಹ್ಯಾಝಲ್ವುಡ್... ಇವರಿಬ್ಬರಲ್ಲಿ ಆರ್ಸಿಬಿ ಪ್ಲೇಯಿಂಗ್ ಇಲೆವೆನ್ನಲ್ಲಿ ಯಾರಿಗೆ ಮಣೆಹಾಕಲಿದೆ ಎಂಬುದೇ ಈಗ ಪ್ರಶ್ನೆ.

RCB ತಂಡ ಹೀಗಿದೆ: ಫಾಫ್ ಡುಪ್ಲೆಸಿಸ್ (ನಾಯಕ), ವಿರಾಟ್ ಕೊಹ್ಲಿ, ರಜತ್ ಪಾಟಿದಾರ್, ಮೈಕೆಲ್ ಬ್ರೇಸ್ವೆಲ್, ದಿನೇಶ್ ಕಾರ್ತಿಕ್, ಅನೂಜ್ ರಾವತ್, ಫಿನ್ ಅಲೆನ್, ಜೋಶ್ ಹ್ಯಾಝಲ್ವುಡ್, ಮೊಹಮ್ಮದ್ ಸಿರಾಜ್, ಕರ್ಣ್ ಶರ್ಮಾ, ಸಿದ್ಧಾರ್ಥ್ ಕೌಲ್, ಹಿಮಾಂಶು ಶರ್ಮಾ, ರಜನ್ ಕುಮಾರ್, ಅವಿನಾಶ್ ಸಿಂಗ್, ಗ್ಲೆನ್ ಮ್ಯಾಕ್ಸ್ವೆಲ್, ವನಿಂದು ಹಸರಂಗ, ಮಹಿಪಾಲ್ ಲೋಮ್ರರ್, ಶಹಬಾಝ್ ಅಹ್ಮದ್, ಹರ್ಷಲ್ ಪಟೇಲ್, ಆಕಾಶ್ ದೀಪ್, ಡೇವಿಡ್ ವಿಲ್ಲಿ, ಸುಯಶ್ ಪ್ರಭುದೇಸಾಯಿ, ಮನೋಜ್ ಭಾಂಡಗೆ, ಸೋನು ಯಾದವ್, ವೇಯ್ನ್ ಪಾರ್ನೆಲ್, ವೈಶಾಖ್ ವಿಜಯಕುಮಾರ್.