IPL 2023: RCB ತಂಡದಿಂದ ಮೂವರು ಔಟ್: ಹೀಗಿರಲಿದೆ ಪ್ಲೇಯಿಂಗ್ 11
IPL 2023 RCB Playing 11: ಮೊಣಕಾಲಿನ ನೋವಿನ ಸಮಸ್ಯೆಯಿಂದ ಬಳಲುತ್ತಿರುವ ಆಸ್ಟ್ರೇಲಿಯಾ ವೇಗಿ ಜೋಶ್ ಹ್ಯಾಝಲ್ವುಡ್ ಇನ್ನೂ ಕೂಡ ತಂಡವನ್ನು ಸೇರಿಕೊಂಡಿಲ್ಲ.
Updated on: Apr 01, 2023 | 8:30 PM

IPL 2023 RCB Playing 11: ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆಯಲಿರುವ ಐಪಿಎಲ್ನ 5ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಮುಂಬೈ ಇಂಡಿಯನ್ಸ್ ತಂಡಗಳು ಮುಖಾಮುಖಿಯಾಗಲಿದೆ. ಆದರೆ ಈ ಪಂದ್ಯಕ್ಕೆ ಆರ್ಸಿಬಿ ತಂಡದ ಮೂವರು ಆಟಗಾರರು ಅಲಭ್ಯರಾಗುವುದು ಖಚಿತವಾಗಿದೆ.

ಹೌದು, ಮುಂಬೈ ಇಂಡಿಯನ್ಸ್ ವಿರುದ್ಧದ ಪಂದ್ಯಕ್ಕೆ ರಜತ್ ಪಾಟಿದಾರ್, ಜೋಶ್ ಹ್ಯಾಝಲ್ವುಡ್ ಹಾಗೂ ವನಿಂದು ಹಸರಂಗ ಅಲಭ್ಯರಾಗಿದ್ದಾರೆ. ಪಾದದ ನೋವಿನಿಂದ ಬಳಲುತ್ತಿರುವ ರಜತ್ ಪಾಟಿದಾರ್ಗೆ NCA ಕಡೆಯಿಂದ ಗ್ರೀನ್ ಸಿಗ್ನಲ್ ಸಿಗಬೇಕಿದೆ.

ಇನ್ನು ಮೊಣಕಾಲಿನ ನೋವಿನ ಸಮಸ್ಯೆಯಿಂದ ಬಳಲುತ್ತಿರುವ ಆಸ್ಟ್ರೇಲಿಯಾ ವೇಗಿ ಜೋಶ್ ಹ್ಯಾಝಲ್ವುಡ್ ಇನ್ನೂ ಕೂಡ ತಂಡವನ್ನು ಸೇರಿಕೊಂಡಿಲ್ಲ. ಕೆಲ ಮೂಲಗಳ ಮಾಹಿತಿ ಪ್ರಕಾರ, ಅವರು ಏಪ್ರಿಲ್ 14 ರ ಬಳಿಕ ಭಾರತಕ್ಕೆ ಆಗಮಿಸಲಿದ್ದಾರೆ.

ಹಾಗೆಯೇ ನ್ಯೂಜಿಲೆಂಡ್ ವಿರುದ್ಧ ಟಿ20 ಸರಣಿ ಆಡುತ್ತಿರುವ ವನಿಂದು ಹಸರಂಗ ಕೂಡ ಮೊದಲ ಪಂದ್ಯಕ್ಕೆ ಅಲಭ್ಯರಾಗಿದ್ದಾರೆ. ಅವರು ಏಪ್ರಿಲ್ 10 ರ ಬಳಿಕ ಆರ್ಸಿಬಿ ತಂಡವನ್ನು ಕೂಡಿಕೊಳ್ಳಲಿದ್ದಾರೆ. ಅದರಂತೆ ಆರ್ಸಿಬಿ ತಂಡದ ಸಂಭಾವ್ಯ ಪ್ಲೇಯಿಂಗ್ ಇಲೆವೆನ್ ಹೀಗಿರಲಿದೆ...

1- ಫಾಫ್ ಡುಪ್ಲೆಸಿಸ್ (ನಾಯಕ)

2- ವಿರಾಟ್ ಕೊಹ್ಲಿ

3- ಸುಯಶ್ ಪ್ರಭುದೇಸಾಯಿ

3- ಗ್ಲೆನ್ ಮ್ಯಾಕ್ಸ್ವೆಲ್

5- ಮಹಿಪಾಲ್ ಲೊಮ್ರೋರ್ (ಆಲ್ರೌಂಡರ್)

4- ಮೈಕಲ್ ಬ್ರೇಸ್ವೆಲ್ (ಆಲ್ರೌಂಡರ್)

5- ದಿನೇಶ್ ಕಾರ್ತಿಕ್

5- ಶಹಬಾಝ್ ಅಹ್ಮದ್

9- ರೀಸ್ ಟೋಪ್ಲಿ

9- ಹರ್ಷಲ್ ಪಟೇಲ್

10- ಮೊಹಮ್ಮದ್ ಸಿರಾಜ್

RCB ತಂಡ ಹೀಗಿದೆ: ಫಾಫ್ ಡುಪ್ಲೆಸಿಸ್ (ನಾಯಕ), ವಿರಾಟ್ ಕೊಹ್ಲಿ, ಮೈಕೆಲ್ ಬ್ರೇಸ್ವೆಲ್, ದಿನೇಶ್ ಕಾರ್ತಿಕ್, ಅನೂಜ್ ರಾವತ್, ಫಿನ್ ಅಲೆನ್, ಜೋಶ್ ಹ್ಯಾಝಲ್ವುಡ್, ಮೊಹಮ್ಮದ್ ಸಿರಾಜ್, ಕರ್ಣ್ ಶರ್ಮಾ, ಸಿದ್ಧಾರ್ಥ್ ಕೌಲ್, ಹಿಮಾಂಶು ಶರ್ಮಾ, ರಜನ್ ಕುಮಾರ್, ಅವಿನಾಶ್ ಸಿಂಗ್, ಗ್ಲೆನ್ ಮ್ಯಾಕ್ಸ್ವೆಲ್, ವನಿಂದು ಹಸರಂಗ, ಮಹಿಪಾಲ್ ಲೋಮ್ರರ್, ಶಹಬಾಝ್ ಅಹ್ಮದ್, ಹರ್ಷಲ್ ಪಟೇಲ್, ಆಕಾಶ್ ದೀಪ್, ಕೇದಾರ್ ಜಾಧವ್, ಸುಯಶ್ ಪ್ರಭುದೇಸಾಯಿ, ಮನೋಜ್ ಭಾಂಡಗೆ, ಸೋನು ಯಾದವ್, ವೇಯ್ನ್ ಪಾರ್ನೆಲ್, ವೈಶಾಕ್ ವಿಜಯಕುಮಾರ್.



















