IPL 2023: ಐಪಿಎಲ್ 50 ಫೈಟ್: RCB ಆಡುವ ಬಳಗದಲ್ಲಿ ಮಹತ್ವದ ಬದಲಾವಣೆ ಸಾಧ್ಯತೆ
IPL 2023 RCB Playing XI vs DC: RCB ತಂಡ ಹೀಗಿದೆ: ಫಾಫ್ ಡುಪ್ಲೆಸಿಸ್ (ನಾಯಕ), ವಿರಾಟ್ ಕೊಹ್ಲಿ, ಮೈಕೆಲ್ ಬ್ರೇಸ್ವೆಲ್, ದಿನೇಶ್ ಕಾರ್ತಿಕ್, ಅನೂಜ್ ರಾವತ್, ಫಿನ್ ಅಲೆನ್, ಜೋಶ್ ಹ್ಯಾಝಲ್ವುಡ್, ಮೊಹಮ್ಮದ್ ಸಿರಾಜ್, ಕರ್ಣ್ ಶರ್ಮಾ, ಸಿದ್ಧಾರ್ಥ್ ಕೌಲ್, ಹಿಮಾಂಶು ಶರ್ಮಾ, ರಜನ್ ಕುಮಾರ್, ಅವಿನಾಶ್ ಸಿಂಗ್, ಗ್ಲೆನ್ ಮ್ಯಾಕ್ಸ್ವೆಲ್.
Updated on: May 04, 2023 | 11:21 PM

IPL 2023: ಐಪಿಎಲ್ನ 50ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ತಂಡಗಳು ಮುಖಾಮುಖಿಯಾಗಲಿದೆ. ಶನಿವಾರ ಅರುಣ್ ಜೇಟ್ಲಿ ಮೈದಾನದಲ್ಲಿ ನಡೆಯಲಿರುವ ಈ ಪಂದ್ಯದಲ್ಲಿ ಗೆಲ್ಲುವ ಮೂಲಕ ಗೆಲುವಿನ ಲಯ ಮುಂದುವರೆಸುವ ಇರಾದೆಯಲ್ಲಿದೆ ಉಭಯ ತಂಡಗಳು.

ಆದರೆ ಗ್ಲೆನ್ ಮ್ಯಾಕ್ಸ್ವೆಲ್ ಸ್ಥಾನದಲ್ಲಿ ಕಣಕ್ಕಿಳಿದಿದ್ದ ಮಹಿಪಾಲ್ ಲೋಮ್ರರ್ ಆಕರ್ಷಕ ಅರ್ಧಶತಕ ಬಾರಿಸಿ ಮಿಂಚಿದ್ದರು. ಹೀಗಾಗಿ ಮುಂಬೈ ಇಂಡಿಯನ್ಸ್ ವಿರುದ್ಧದ ಪಂದ್ಯದಲ್ಲಿ ಲೋಮ್ರರ್ ಅವರನ್ನು 3ನೇ ಕ್ರಮಾಂಕದಲ್ಲಿ ಕಣಕ್ಕಿಳಿಸಿ, ಮ್ಯಾಕ್ಸ್ವೆಲ್ರನ್ನು ಮತ್ತೆ 4ನೇ ಸ್ಥಾನದಲ್ಲಿ ಕಣಕ್ಕಿಳಿಸಬಹುದು. ಅದರಂತೆ ಆರ್ಸಿಬಿ ತಂಡದ ಸಂಭಾವ್ಯ ಪ್ಲೇಯಿಂಗ್ 11 ಹೀಗಿರಲಿದೆ...

ಅಲ್ಲದೆ ಒಟ್ಟು 12 ಅಂಕಗಳೊಂದಿಗೆ ಪಾಯಿಂಟ್ಸ್ ಟೇಬಲ್ನಲ್ಲಿ ಟಾಪ್-4 ಹಂತಕ್ಕೇರಬಹುದು. ಹೀಗಾಗಿ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧದ ಪಂದ್ಯವು ಆರ್ಸಿಬಿ ಪಾಲಿಗೆ ಮಹತ್ವದ ಪಂದ್ಯವಾಗಿ ಮಾರ್ಪಟ್ಟಿದೆ. ಇತ್ತ ಈ ಮಹತ್ವದ ಪಂದ್ಯಕ್ಕಾಗಿ ಆರ್ಸಿಬಿ ಪ್ಲೇಯಿಂಗ್ ಇಲೆವೆನ್ನಲ್ಲೂ ಬದಲಾವಣೆ ಮಾಡಿಕೊಳ್ಳುವ ಸಾಧ್ಯತೆ ಹೆಚ್ಚಿದೆ.

ಏಕೆಂದರೆ ಆರ್ಸಿಬಿ ಪರ ಕಳೆದ 9 ಪಂದ್ಯಗಳಲ್ಲಿ 3ನೇ ಕ್ರಮಾಂಕದಲ್ಲಿ ಕಣಕ್ಕಿಳಿದಿರುವ ಯಾವುದೇ ಆಟಗಾರರು ಯಶಸ್ವಿಯಾಗಿಲ್ಲ. ಮಹಿಪಾಲ್ ಲೋಮ್ರರ್, ಶಹಬಾಝ್ ಅಹ್ಮದ್, ಮೈಕೆಲ್ ಬ್ರೇಸ್ವೆಲ್, ದಿನೇಶ್ ಕಾರ್ತಿಕ್, ಅನೂಜ್ ರಾವತ್ ಸೇರಿದಂತೆ ಐವರು ಆಟಗಾರರು 3ನೇ ಕ್ರಮಾಂಕದಲ್ಲಿ ಬ್ಯಾಟ್ ಬೀಸಿದ್ದಾರೆ. ಅಚ್ಚರಿ ಎಂದರೆ ಐದು ಬ್ಯಾಟ್ಸ್ಮನ್ಗಳು ಸೇರಿ ಕಲೆಹಾಕಿರುವುದು ಕೇವಲ 56 ರನ್ ಮಾತ್ರ.

ಹೀಗಾಗಿಯೇ ಆರ್ಸಿಬಿ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧದ ಪಂದ್ಯದಲ್ಲಿ 3ನೇ ಕ್ರಮಾಂಕದಲ್ಲಿ ಬದಲಾವಣೆ ಮಾಡಿಕೊಳ್ಳುವ ಸಾಧ್ಯತೆ ಹೆಚ್ಚಿದೆ. ಅದರಲ್ಲೂ ದಿಢೀರ್ ಆಗಿ ಅನುಭವಿ ಆಟಗಾರ ಕೇದಾರ್ ಜಾಧವ್ ಅವರನ್ನು ಆರ್ಸಿಬಿ ಆಯ್ಕೆ ಮಾಡಿಕೊಂಡಿದೆ. ಇತ್ತ ತಂಡದಲ್ಲಿರುವ ಆಟಗಾರರೆಲ್ಲರೂ ವಿಫಲರಾಗಿರುವ ಕಾರಣ ಕೇದರ್ ಜಾಧವ್ಗೆ ಅವಕಾಶ ನೀಡುವ ಸಾಧ್ಯತೆಯಿದೆ. ಅದರಂತೆ ಆರ್ಸಿಬಿ ತಂಡದ ಸಂಭಾವ್ಯ ಪ್ಲೇಯಿಂಗ್ ಇಲೆವೆನ್ ಹೀಗಿರಲಿದೆ...

1- ಫಾಫ್ ಡುಪ್ಲೆಸಿಸ್ (ನಾಯಕ)

2- ವಿರಾಟ್ ಕೊಹ್ಲಿ

5- ಕೇದಾರ್ ಜಾಧವ್

3- ಗ್ಲೆನ್ ಮ್ಯಾಕ್ಸ್ವೆಲ್

5- ಸುಯಶ್ ಪ್ರಭುದೇಸಾಯಿ

5- ದಿನೇಶ್ ಕಾರ್ತಿಕ್

7- ವನಿಂದು ಹಸರಂಗ

8- ವೈಶಾಕ್ ವಿಜಯಕುಮಾರ್

9- ಹರ್ಷಲ್ ಪಟೇಲ್

10- ಮೊಹಮ್ಮದ್ ಸಿರಾಜ್

11- ಜೋಶ್ ಹ್ಯಾಝಲ್ವುಡ್

RCB ತಂಡ ಹೀಗಿದೆ: ಫಾಫ್ ಡುಪ್ಲೆಸಿಸ್ (ನಾಯಕ), ವಿರಾಟ್ ಕೊಹ್ಲಿ, ಮೈಕೆಲ್ ಬ್ರೇಸ್ವೆಲ್, ದಿನೇಶ್ ಕಾರ್ತಿಕ್, ಅನೂಜ್ ರಾವತ್, ಫಿನ್ ಅಲೆನ್, ಜೋಶ್ ಹ್ಯಾಝಲ್ವುಡ್, ಮೊಹಮ್ಮದ್ ಸಿರಾಜ್, ಕರ್ಣ್ ಶರ್ಮಾ, ಸಿದ್ಧಾರ್ಥ್ ಕೌಲ್, ಹಿಮಾಂಶು ಶರ್ಮಾ, ರಜನ್ ಕುಮಾರ್, ಅವಿನಾಶ್ ಸಿಂಗ್, ಗ್ಲೆನ್ ಮ್ಯಾಕ್ಸ್ವೆಲ್, ವನಿಂದು ಹಸರಂಗ, ಮಹಿಪಾಲ್ ಲೋಮ್ರರ್, ಶಹಬಾಝ್ ಅಹ್ಮದ್, ಹರ್ಷಲ್ ಪಟೇಲ್, ಆಕಾಶ್ ದೀಪ್, ಕೇದಾರ್ ಜಾಧವ್, ಸುಯಶ್ ಪ್ರಭುದೇಸಾಯಿ, ಮನೋಜ್ ಭಾಂಡಗೆ, ಸೋನು ಯಾದವ್, ವೇಯ್ನ್ ಪಾರ್ನೆಲ್, ವೈಶಾಕ್ ವಿಜಯಕುಮಾರ್.
























