- Kannada News Photo gallery Cricket photos Kannada News | IPL 2023 RCB Playing XI vs GT: RCB Playing 11
IPL 2023: RCB ತಂಡದಲ್ಲಿ ಮಹತ್ವದ ಬದಲಾವಣೆ ಸಾಧ್ಯತೆ: ಹೀಗಿರಲಿದೆ ಪ್ಲೇಯಿಂಗ್ ಇಲೆವೆನ್
IPL 2023 RCB Playing XI vs GT: ಈ ನಿರ್ಣಾಯಕ ಪಂದ್ಯಕ್ಕಾಗಿ RCB ತನ್ನ ಪ್ಲೇಯಿಂಗ್ ಇಲೆವೆನ್ನಲ್ಲಿ 1 ಬದಲಾವಣೆ ಮಾಡಿಕೊಳ್ಳುವ ಸಾಧ್ಯತೆಯಿದೆ.
Updated on: May 20, 2023 | 8:29 PM

IPL 2023 RCB Playing XI vs GT: ಐಪಿಎಲ್ ಸೀಸನ್ 16ರ ಕೊನೆಯ ಲೀಗ್ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಗುಜರಾತ್ ಟೈಟಾನ್ಸ್ ತಂಡಗಳು ಮುಖಾಮುಖಿಯಾಗಲಿದೆ. ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆಯಲಿರುವ ಈ ಪಂದ್ಯವು ಆರ್ಸಿಬಿ ಪಾಲಿಗೆ ನಿರ್ಣಾಯಕ.

ಏಕೆಂದರೆ ಈ ಪಂದ್ಯದಲ್ಲಿ ಗೆಲ್ಲುವ ಮೂಲಕ ಆರ್ಸಿಬಿ ಪ್ಲೇಆಫ್ಗೇರಬಹುದು. ಅತ್ತ ಈಗಾಗಲೇ ಪ್ಲೇಆಫ್ಗೆ ಪ್ರವೇಶಿಸಿರುವ ಗುಜರಾತ್ ಟೈಟಾನ್ಸ್ ತಂಡಕ್ಕೆ ಈ ಪಂದ್ಯ ಔಪಚಾರಿಕ. ಈ ಪಂದ್ಯದಲ್ಲಿ ಆರ್ಸಿಬಿ ಭರ್ಜರಿ ಜಯ ಸಾಧಿಸಿದರೆ ಅಂಕಪಟ್ಟಿಯಲ್ಲಿ 4ನೇ ಸ್ಥಾನ ಭದ್ರಪಡಿಸಿಕೊಳ್ಳುವುದು ಖಚಿತ.

ಹೀಗಾಗಿಯೇ ಈ ನಿರ್ಣಾಯಕ ಪಂದ್ಯಕ್ಕಾಗಿ ಆರ್ಸಿಬಿ ತನ್ನ ಪ್ಲೇಯಿಂಗ್ ಇಲೆವೆನ್ನಲ್ಲಿ 1 ಬದಲಾವಣೆ ಮಾಡಿಕೊಳ್ಳುವ ಸಾಧ್ಯತೆಯಿದೆ. ಅದರಂತೆ ಅಂತಿಮ ಪಂದ್ಯದಲ್ಲಿ ಕರ್ಣ್ ಶರ್ಮಾ ಬದಲು ವೇಗಿ ವೈಶಾಕ್ ವಿಜಯಕುಮಾರ್ ಕಣಕ್ಕಿಳಿಯಬಹುದು.

ಏಕೆಂದರೆ ಕಳೆದ ಪಂದ್ಯದಲ್ಲಿ ಕರ್ಣ್ ಶರ್ಮಾ 3 ಓವರ್ಗಳಲ್ಲಿ 45 ರನ್ ನೀಡಿ ದುಬಾರಿಯಾಗಿದ್ದರು. ಇತ್ತ ವೈಶಾಕ್ ವಿಜಯಕುಮಾರ್ಗೆ ಚಿನ್ನಸ್ವಾಮಿ ಸ್ಟೇಡಿಯಂ ತವರು ಮೈದಾನ.

ಹೀಗಾಗಿ ಆರ್ಸಿಬಿ ನಾಲ್ವರು ವೇಗಿಗಳೊಂದಿಗೆ ಕಣಕ್ಕಿಳಿಯುವ ಸಾಧ್ಯತೆ ಹೆಚ್ಚಿದೆ. ಅದರಂತೆ ಆರ್ಸಿಬಿ ತಂಡದ ಸಂಭಾವ್ಯ ಪ್ಲೇಯಿಂಗ್ ಇಲೆವೆನ್ ಹೀಗಿರಲಿದೆ.

1- ಫಾಫ್ ಡುಪ್ಲೆಸಿಸ್ (ನಾಯಕ)

2- ವಿರಾಟ್ ಕೊಹ್ಲಿ

3- ಗ್ಲೆನ್ ಮ್ಯಾಕ್ಸ್ವೆಲ್

4- ಮಹಿಪಾಲ್ ಲೊಮ್ರೋರ್

5- ದಿನೇಶ್ ಕಾರ್ತಿಕ್

6- ಅನೂಜ್ ರಾವತ್ (ವಿಕೆಟ್ ಕೀಪರ್)

7- ಮೈಕೆಲ್ ಬ್ರೇಸ್ವೆಲ್

8- ವೈಶಾಕ್ ವಿಜಯಕುಮಾರ್

9- ಹರ್ಷಲ್ ಪಟೇಲ್

10- ಮೊಹಮ್ಮದ್ ಸಿರಾಜ್

11- ವೇಯ್ನ್ ಪಾರ್ನೆಲ್

RCB ತಂಡ ಹೀಗಿದೆ: ಫಾಫ್ ಡುಪ್ಲೆಸಿಸ್ (ನಾಯಕ), ವಿರಾಟ್ ಕೊಹ್ಲಿ, ಮೈಕೆಲ್ ಬ್ರೇಸ್ವೆಲ್, ದಿನೇಶ್ ಕಾರ್ತಿಕ್, ಅನೂಜ್ ರಾವತ್, ಫಿನ್ ಅಲೆನ್, ಜೋಶ್ ಹ್ಯಾಝಲ್ವುಡ್, ಮೊಹಮ್ಮದ್ ಸಿರಾಜ್, ಕರ್ಣ್ ಶರ್ಮಾ, ಸಿದ್ಧಾರ್ಥ್ ಕೌಲ್, ಹಿಮಾಂಶು ಶರ್ಮಾ, ರಜನ್ ಕುಮಾರ್, ಅವಿನಾಶ್ ಸಿಂಗ್, ಗ್ಲೆನ್ ಮ್ಯಾಕ್ಸ್ವೆಲ್, ವನಿಂದು ಹಸರಂಗ, ಮಹಿಪಾಲ್ ಲೋಮ್ರರ್, ಶಹಬಾಝ್ ಅಹ್ಮದ್, ಹರ್ಷಲ್ ಪಟೇಲ್, ಆಕಾಶ್ ದೀಪ್, ಕೇದಾರ್ ಜಾಧವ್, ಸುಯಶ್ ಪ್ರಭುದೇಸಾಯಿ, ಮನೋಜ್ ಭಾಂಡಗೆ, ಸೋನು ಯಾದವ್, ವೇಯ್ನ್ ಪಾರ್ನೆಲ್, ವೈಶಾಕ್ ವಿಜಯಕುಮಾರ್.



















