
IPL 2023 RCB Playing XI vs KKR: ಐಪಿಎಲ್ನ 36ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಕೊಲ್ಕತ್ತಾ ನೈಟ್ ರೈಡರ್ಸ್ ತಂಡಗಳು ಮುಖಾಮುಖಿಯಾಗಲಿದೆ. ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆಯಲಿರುವ ಈ ಪಂದ್ಯದಲ್ಲಿ ಆರ್ಸಿಬಿ ತಂಡ ಆಡುವ ಬಳಗದಲ್ಲಿ ಬದಲಾವಣೆ ಕಂಡು ಬರುವುದು ಬಹುತೇಕ ಖಚಿತ.

ಏಕೆಂದರೆ ಮೊಣಕಾಲಿನ ಗಾಯದ ಸಮಸ್ಯೆಯ ಕಾರಣ ಐಪಿಎಲ್ನ ಮೊದಲಾರ್ಧದಿಂದ ಹೊರಗುಳಿದಿದ್ದ ಆರ್ಸಿಬಿ ವೇಗಿ ಜೋಶ್ ಹ್ಯಾಝಲ್ವುಡ್ ಇದೀಗ ಸಂಪೂರ್ಣ ಫಿಟ್ ಆಗಿದ್ದಾರೆ. ಹೀಗಾಗಿ ಲಕ್ನೋ ವಿರುದ್ಧದ ಪಂದ್ಯದಲ್ಲಿ ಕಣಕ್ಕಿಳಿಯುವುದು ಖಚಿತ ಎಂದೇ ಹೇಳಬಹುದು.

ಇಲ್ಲಿ ಹ್ಯಾಝಲ್ವುಡ್ ಪ್ಲೇಯಿಂಗ್ ಇಲೆವೆನ್ನ ಭಾಗವಾದರೆ ತಂಡದಿಂದ ಡೇವಿಡ್ ವಿಲ್ಲಿ ಅಥವಾ ವನಿಂದು ಹಸರಂಗ ಹೊರಗುಳಿಯಬೇಕಾಗಬಹುದು. ಇತ್ತ ಹ್ಯಾಝಲ್ವುಡ್ ಆಗಮನದೊಂದಿಗೆ ಆರ್ಸಿಬಿ ತಂಡದ ಬೌಲಿಂಗ್ ವಿಭಾಗ ಕೂಡ ಬಲಿಷ್ಠವಾಗುವ ನಿರೀಕ್ಷೆಯಿದೆ. ಅದರಂತೆ ಆರ್ಸಿಬಿ ತಂಡದ ಸಂಭಾವ್ಯ ಪ್ಲೇಯಿಂಗ್ ಇಲೆವೆನ್ ಈ ಕೆಳಗಿನಂತಿರಲಿದೆ...

1- ಫಾಫ್ ಡುಪ್ಲೆಸಿಸ್ (ನಾಯಕ)

2- ವಿರಾಟ್ ಕೊಹ್ಲಿ

5- ಸುಯಶ್ ಪ್ರಭುದೇಸಾಯಿ

3- ಗ್ಲೆನ್ ಮ್ಯಾಕ್ಸ್ವೆಲ್

5- ಶಹಬಾಝ್ ಅಹ್ಮದ್

5- ದಿನೇಶ್ ಕಾರ್ತಿಕ್

7- ವನಿಂದು ಹಸರಂಗ

8- ವೈಶಾಕ್ ವಿಜಯಕುಮಾರ್

9- ಹರ್ಷಲ್ ಪಟೇಲ್

10- ಮೊಹಮ್ಮದ್ ಸಿರಾಜ್

11- ಜೋಶ್ ಹ್ಯಾಝಲ್ವುಡ್

RCB ತಂಡ ಹೀಗಿದೆ: ಫಾಫ್ ಡುಪ್ಲೆಸಿಸ್ (ನಾಯಕ), ವಿರಾಟ್ ಕೊಹ್ಲಿ, ಮೈಕೆಲ್ ಬ್ರೇಸ್ವೆಲ್, ದಿನೇಶ್ ಕಾರ್ತಿಕ್, ಅನೂಜ್ ರಾವತ್, ಫಿನ್ ಅಲೆನ್, ಜೋಶ್ ಹ್ಯಾಝಲ್ವುಡ್, ಮೊಹಮ್ಮದ್ ಸಿರಾಜ್, ಕರ್ಣ್ ಶರ್ಮಾ, ಸಿದ್ಧಾರ್ಥ್ ಕೌಲ್, ಹಿಮಾಂಶು ಶರ್ಮಾ, ರಜನ್ ಕುಮಾರ್, ಅವಿನಾಶ್ ಸಿಂಗ್, ಗ್ಲೆನ್ ಮ್ಯಾಕ್ಸ್ವೆಲ್, ವನಿಂದು ಹಸರಂಗ, ಮಹಿಪಾಲ್ ಲೋಮ್ರರ್, ಶಹಬಾಝ್ ಅಹ್ಮದ್, ಹರ್ಷಲ್ ಪಟೇಲ್, ಆಕಾಶ್ ದೀಪ್, ಕೇದಾರ್ ಜಾಧವ್, ಸುಯಶ್ ಪ್ರಭುದೇಸಾಯಿ, ಮನೋಜ್ ಭಾಂಡಗೆ, ಸೋನು ಯಾದವ್, ವೇಯ್ನ್ ಪಾರ್ನೆಲ್, ವೈಶಾಕ್ ವಿಜಯಕುಮಾರ್.