AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2023: ರಾಜಸ್ಥಾನ್ ರಾಯಲ್ಸ್​ನ ಹಿಂದಿಕ್ಕಿದ RCB: ಹೀಗಿದೆ ಪ್ಲೇಆಫ್ ಲೆಕ್ಕಾಚಾರ

IPL 2023 Kannada: ಆರ್​ಸಿಬಿ ಮುಂದಿರುವುದು ಕೇವಲ 2 ಪಂದ್ಯಗಳು ಮಾತ್ರ. ಈ ಎರಡು ಪಂದ್ಯಗಳಲ್ಲಿ ಆರ್​ಸಿಬಿ ಭರ್ಜರಿ ಜಯ ಸಾಧಿಸಿದರೆ ಪ್ಲೇಆಫ್ ಪ್ರವೇಶಿಸುವ ಅವಕಾಶ ಸಿಗಬಹುದು.

TV9 Web
| Edited By: |

Updated on:May 14, 2023 | 7:22 PM

Share
IPL 2023: ಐಪಿಎಲ್​ನ 60ನೇ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ವಿರುದ್ಧ ಆರ್​ಸಿಬಿ 112 ರನ್​ಗಳ ಭರ್ಜರಿ ಜಯ ಸಾಧಿಸಿದೆ. ಈ ಗೆಲುವು ಅಮೋಘ ಗೆಲುವಿನೊಂದಿಗೆ ಆರ್​ಸಿಬಿ ತಂಡದ ನೆಟ್​ ರನ್​ ರೇಟ್ ಪ್ಲಸ್​ನತ್ತ ತಿರುಗಿದೆ.

1 / 7
ಈ ಪಂದ್ಯದ ಆರಂಭಕ್ಕೂ ಮುನ್ನ -0.345 ನೆಟ್ ರನ್ ರೇಟ್ ಹೊಂದಿದ್ದ ಆರ್​ಸಿಬಿ ರಾಜಸ್ಥಾನ್ ರಾಯಲ್ಸ್ ವಿರುದ್ಧ ಗೆದ್ದರೂ 5ನೇ ಸ್ಥಾನಕ್ಕೇರುವುದು ಅನುಮಾನ ಎನ್ನಲಾಗಿತ್ತು. ಆದರೀಗ ಬರೋಬ್ಬರಿ 112 ರನ್​ಗಳ ಭರ್ಜರಿ ಜಯದೊಂದಿಗೆ ಎಲ್ಲಾ ಲೆಕ್ಕಾಚಾರಗಳನ್ನು ಆರ್​ಸಿಬಿ ತಲೆಕೆಳಗಾಗಿಸಿದೆ.

2 / 7
ರಾಜಸ್ಥಾನ್ ರಾಯಲ್ಸ್ ತಂಡವನ್ನು ಕೇವಲ 59 ರನ್​ಗಳಿಗೆ ಆಲೌಟ್ ಮಾಡಿರುವ ಆರ್​ಸಿಬಿ ಇದೀಗ +0.166 ನೆಟ್​ ರನ್​ ರೇಟ್ ಪಡೆದುಕೊಂಡಿದೆ. ಈ ಮೂಲಕ ರಾಜಸ್ಥಾನ್ ರಾಯಲ್ಸ್ (+0.140) ತಂಡವನ್ನು ಹಿಂದಿಕ್ಕಿ ಅಂಕ ಪಟ್ಟಿಯಲ್ಲಿ 5ನೇ ಸ್ಥಾನಕ್ಕೇರಿದೆ.

3 / 7
ಇನ್ನು ಆರ್​ಸಿಬಿ ಮುಂದಿರುವುದು ಕೇವಲ 2 ಪಂದ್ಯಗಳು ಮಾತ್ರ. ಈ ಎರಡು ಪಂದ್ಯಗಳಲ್ಲಿ ಆರ್​ಸಿಬಿ ಭರ್ಜರಿ ಜಯ ಸಾಧಿಸಿದರೆ ಪ್ಲೇಆಫ್ ಪ್ರವೇಶಿಸುವ ಅವಕಾಶ ಸಿಗಬಹುದು. ಆದರೆ ಅದಕ್ಕೂ ಮುನ್ನ ಲಕ್ನೋ ಸೂಪರ್ ಜೈಂಟ್ಸ್ ಒಂದು ಪಂದ್ಯ ಸೋಲಬೇಕು.

4 / 7
ಏಕೆಂದರೆ ಅಂಕಪಟ್ಟಿಯಲ್ಲಿ 3ನೇ ಸ್ಥಾನದಲ್ಲಿರುವ ಮುಂಬೈ ಇಂಡಿಯನ್ಸ್ 14 ಅಂಕಗಳನ್ನು ಹೊಂದಿದೆ. ರೋಹಿತ್ ಶರ್ಮಾ ಪಡೆಗೆ ಇನ್ನು 2 ಪಂದ್ಯಗಳು ಬಾಕಿಯಿದ್ದು, ಇದರಲ್ಲಿ ಜಯ ಸಾಧಿಸಿದರೆ ಆರ್​ಸಿಬಿಗೆ ಪ್ಲೇಆಫ್ ಪ್ರವೇಶಿಸುವ ಅವಕಾಶ ದೊರೆಯಲಿದೆ.

5 / 7
ಅಂದರೆ ಮುಂಬೈ ಇಂಡಿಯನ್ಸ್​ ಮುಂದಿನ 2 ಪಂದ್ಯಗಳನ್ನು ಲಕ್ನೋ ಸೂಪರ್ ಜೈಂಟ್ಸ್ ಹಾಗೂ ಎಸ್​ಆರ್​ಹೆಚ್​ ವಿರುದ್ಧ ಆಡಲಿದೆ. ಪ್ರಸ್ತುತ 13 ಪಾಯಿಂಟ್ಸ್ ಹೊಂದಿರುವ ಲಕ್ನೋ ಸೂಪರ್ ಜೈಂಟ್ಸ್ ಮುಂದಿನ ಪಂದ್ಯದಲ್ಲಿ ಸೋತು, ಕೊನೆಯ ಪಂದ್ಯದಲ್ಲಿ ಗೆದ್ದರೆ ಒಟ್ಟು 15 ಪಾಯಿಂಟ್ಸ್ ಆಗಲಿದೆ.

6 / 7
ಇತ್ತ ಆರ್​ಸಿಬಿ ತಂಡವು ಮುಂದಿನ 2 ಪಂದ್ಯಗಳಲ್ಲಿ ಭರ್ಜರಿ ಜಯ ಸಾಧಿಸಿದರೆ 16 ಪಾಯಿಂಟ್ಸ್​ ಪಡೆಯಲಿದೆ. ಈ ಮೂಲಕ ಲಕ್ನೋ ಸೂಪರ್ ಜೈಂಟ್ಸ್ ತಂಡವನ್ನು ಹಿಂದಿಕ್ಕಿ, 4ನೇ ಸ್ಥಾನಕ್ಕೇರುವ ಮೂಲಕ ಪ್ಲೇಆಫ್ ಪ್ರವೇಶಿಸಬಹುದು. ಹೀಗಾಗಿ ಆರ್​ಸಿಬಿ ಪಾಲಿಗೆ ಮುಂದಿನ 2 ಪಂದ್ಯಗಳು ಮಾಡು ಇಲ್ಲವೇ ಮಡಿ ಪಂದ್ಯ.

7 / 7

Published On - 7:22 pm, Sun, 14 May 23

TV9 Web
TV9 Web

TV9 Kannada

Read More
Follow Us
ನಿಮ್ಮ ರಾಶಿಯ ಆರ್ಥಿಕ, ವೃತ್ತಿ ಜಾತಕ ಹೇಗಿದೆ?
ನಿಮ್ಮ ರಾಶಿಯ ಆರ್ಥಿಕ, ವೃತ್ತಿ ಜಾತಕ ಹೇಗಿದೆ?
ಮಂಗಳೂರಿಗೆ ಮರಳಿದ 'ಚಿನ್ನದ ಹುಡುಗಿ' ಪೂವಮ್ಮಗೆ ಅದ್ಧೂರಿ ಸ್ವಾಗತ

ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ

ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ

ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್

‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ

ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಪರೇಷನ್’

ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್

ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು

ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್