AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2023: ಮುಂಬೈ ಇಂಡಿಯನ್ಸ್​ ಕೈಯಲ್ಲಿದೆ RCB ತಂಡದ ಪ್ಲೇಆಫ್ ಭವಿಷ್ಯ

IPL 2023 RCB Kannada: ಪ್ರಸ್ತುತ ಅಂಕಪಟ್ಟಿಯಲ್ಲಿ 14 ಪಾಯಿಂಟ್ಸ್​ನೊಂದಿಗೆ 3ನೇ ಸ್ಥಾನದಲ್ಲಿರುವ ಮುಂಬೈ ಇಂಡಿಯನ್ಸ್ ಮುಂದಿನ 2 ಪಂದ್ಯಗಳನ್ನು ಗೆದ್ದರೆ 18 ಅಂಕಗಳೊಂದಿಗೆ ಪ್ಲೇಆಫ್ ಪ್ರವೇಶಿಸುವುದು ಖಚಿತ.

TV9 Web
| Updated By: ಝಾಹಿರ್ ಯೂಸುಫ್|

Updated on: May 14, 2023 | 8:29 PM

Share
IPL 2023: ಇಂಡಿಯನ್ ಪ್ರೀಮಿಯರ್ ಲೀಗ್​ನ 60 ಪಂದ್ಯಗಳು ಮುಗಿದರೂ ಇದುವರೆಗೆ ಯಾವುದೇ ತಂಡ ಪ್ಲೇಆಫ್ ಪ್ರವೇಶವನ್ನು ಖಚಿತಪಡಿಸಿಕೊಂಡಿಲ್ಲ. ಅತ್ತ ಗುಜರಾತ್ ಟೈಟಾನ್ಸ್​ ಹಾಗೂ ಚೆನ್ನೈ ಸೂಪರ್ ಕಿಂಗ್ಸ್​ ತಂಡಗಳು ಮುಂದಿನ 1 ಪಂದ್ಯ ಗೆದ್ದರೆ ಪ್ಲೇಆಫ್ ಆಡುವುದನ್ನು ಖಚಿತಪಡಿಸಿಕೊಳ್ಳಲಿದೆ.

1 / 11
ಏಕೆಂದರೆ 16 ಅಂಕಗಳನ್ನು ಹೊಂದಿರುವ ಗುಜರಾತ್ ಟೈಟಾನ್ಸ್ ಮುಂದಿನ 2 ಪಂದ್ಯಗಳಲ್ಲಿ ಒಂದರಲ್ಲಿ ಜಯ ಸಾಧಿಸಿದರೆ 18 ಪಾಯಿಂಟ್ಸ್​ನೊಂದಿಗೆ ಪ್ಲೇಆಫ್ ಪ್ರವೇಶಿಸಲಿದೆ. ಹಾಗೆಯೇ 15 ಅಂಕಗಳನ್ನು ಹೊಂದಿರುವ ಸಿಎಸ್​ಕೆ ತಂಡವು 2 ಪಂದ್ಯಗಳಲ್ಲಿ ಒಂದರಲ್ಲಿ ಜಯಗಳಿಸಿದರೆ 17 ಪಾಯಿಂಟ್ಸ್ ಆಗಲಿದೆ. ಇದರೊಂದಿಗೆ ಸಿಎಸ್​ಕೆ ತಂಡವು 2ನೇ ಅಥವಾ 3ನೇ ಸ್ಥಾನದೊಂದಿಗೆ ಪ್ಲೇಆಫ್ ಆಡುವುದನ್ನು ಖಚಿತಪಡಿಸಿಕೊಳ್ಳಬಹುದು.

2 / 11
ಆದರೆ ಇತ್ತ 3ನೇ ಹಾಗೂ 4ನೇ ಸ್ಥಾನಗಳಲ್ಲಿ ಕಾಣಿಸಿಕೊಳ್ಳಲು ಒಟ್ಟು 4 ತಂಡಗಳ ನಡುವೆ ಪೈಪೋಟಿ ಇದೆ. ಅಂದರೆ 12 ಪಾಯಿಂಟ್ಸ್ ಕಲೆಹಾಕಿರುವ ಆರ್​ಸಿಬಿ, ಪಂಜಾಬ್ ಕಿಂಗ್ಸ್, ಮುಂಬೈ ಇಂಡಿಯನ್ಸ್ ಹಾಗೂ ಲಕ್ನೋ ಸೂಪರ್ ಜೈಂಟ್ಸ್ ತಂಡಗಳಿಗೆ ಇನ್ನು 2 ಪಂದ್ಯಗಳು ಬಾಕಿಯಿದೆ.

3 / 11
ಪ್ರಸ್ತುತ ಅಂಕಪಟ್ಟಿಯಲ್ಲಿ 14 ಪಾಯಿಂಟ್ಸ್​ನೊಂದಿಗೆ 3ನೇ ಸ್ಥಾನದಲ್ಲಿರುವ ಮುಂಬೈ ಇಂಡಿಯನ್ಸ್ ಮುಂದಿನ 2 ಪಂದ್ಯಗಳನ್ನು ಗೆದ್ದರೆ 18 ಅಂಕಗಳೊಂದಿಗೆ ಪ್ಲೇಆಫ್ ಪ್ರವೇಶಿಸುವುದು ಖಚಿತ. ಅತ್ತ ಮುಂಬೈ ಇಂಡಿಯನ್ಸ್ ಮುಂದಿನ 2 ಮ್ಯಾಚ್​ಗಳನ್ನು ಗೆದ್ದರೆ ಆರ್​ಸಿಬಿಗೆ ಪ್ಲೇಆಫ್ ಪ್ರವೇಶಿಸುವ ಹಾದಿ ಸುಗಮವಾಗಲಿದೆ.

4 / 11
ಅಂದರೆ ಮುಂಬೈ ಇಂಡಿಯನ್ಸ್ ಮುಂದಿನ ಪಂದ್ಯವನ್ನು ಲಕ್ನೋ ಸೂಪರ್ ಜೈಂಟ್ಸ್​ ವಿರುದ್ಧ ಆಡಲಿದೆ. ಈಗಾಗಲೇ 13 ಪಾಯಿಂಟ್ಸ್ ಹೊಂದಿರುವ ಲಕ್ನೋ ತಂಡವು ಮುಂದಿನ 2 ಪಂದ್ಯಗಳಲ್ಲಿ ಗೆದ್ದರೆ ಒಟ್ಟು 17 ಪಾಯಿಂಟ್ಸ್​ನೊಂದಿಗೆ ಪ್ಲೇಆಫ್ ಅನ್ನು ಖಚಿತಪಡಿಸಿಕೊಳ್ಳಬಹುದು.

5 / 11
ಒಂದು ವೇಳೆ ಮುಂಬೈ ಇಂಡಿಯನ್ಸ್ ವಿರುದ್ಧ ಲಕ್ನೋ ಸೂಪರ್ ಜೈಂಟ್ಸ್ ಸೋತರೆ ಅದು ಆರ್​ಸಿಬಿ ಪಾಲಿಗೆ ವರವಾಗಲಿದೆ. ಅಂದರೆ ಲಕ್ನೋ ತಂಡವು ಪ್ರಸ್ತುತ ಪಾಯಿಂಟ್ಸ್ ಟೇಬಲ್​ನಲ್ಲಿ 4ನೇ ಸ್ಥಾನದಲ್ಲಿದೆ. ಮುಂದಿನ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ವಿರುದ್ಧ ಲಕ್ನೋ ತಂಡ ಸೋತರೆ, ಆರ್​ಸಿಬಿ ಎಸ್​ಆರ್​ಹೆಚ್ ವಿರುದ್ಧ ಗೆದ್ದು 14 ಅಂಕಗಳೊಂದಿಗೆ ಅಂಕಪಟ್ಟಿಯಲ್ಲಿ 4ನೇ ಸ್ಥಾನಕ್ಕೇರಬಹುದು.

6 / 11
ಇತ್ತ ಲಕ್ನೋ ಸೂಪರ್ ಜೈಂಟ್ಸ್ ತಂಡವು ಕೊನೆಯ ಪಂದ್ಯದಲ್ಲಿ ಗೆದ್ದರೂ ಒಟ್ಟು 15 ಪಾಯಿಂಟ್ಸ್​ ಮಾತ್ರ ಆಗಲಿದೆ. ಅದೇ ಆರ್​ಸಿಬಿ ತನ್ನ ಕೊನೆಯ ಪಂದ್ಯದಲ್ಲಿ ಭರ್ಜರಿ ಜಯ ಸಾಧಿಸಿದರೆ 16 ಪಾಯಿಂಟ್ಸ್​ನೊಂದಿಗೆ ಅಂಕಪಟ್ಟಿಯಲ್ಲಿ 4ನೇ ಸ್ಥಾನವನ್ನು ಭದ್ರಗೊಳಿಸಿ ಪ್ಲೇಆಫ್ ಆಡಬಹುದು.

7 / 11
ಅಂದರೆ ಇಲ್ಲಿ ಲಕ್ನೋ ಸೂಪರ್ ಜೈಂಟ್ಸ್​ ವಿರುದ್ಧ ಮುಂಬೈ ಇಂಡಿಯನ್ಸ್ ಗೆಲ್ಲಲೇಬೇಕು. ಒಂದು ವೇಳೆ ಮುಂಬೈ ಇಂಡಿಯನ್ಸ್ ತಂಡವು ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧ ಸೋತರೆ, ಆ ಬಳಿಕ ಆರ್​ಸಿಬಿ ಹಾಗೂ ಮುಂಬೈ ನಡುವೆ ಪ್ಲೇಆಫ್ ಫೈಟ್ ಎದುರಾಗಲಿದೆ.

8 / 11
ಇನ್ನು ಪ್ಲೇಆಫ್ ಪೈಪೋಟಿಯಲ್ಲಿ ಪಂಜಾಬ್ ಕಿಂಗ್ಸ್ ತಂಡ ಕೂಡ ಇದ್ದು, ಶಿಖರ್ ಧವನ್ ಪಡೆ ಕೊನೆಯ 2 ಪಂದ್ಯಗಳಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಹಾಗೂ ಎಸ್​ಆರ್​ಹೆಚ್ ವಿರುದ್ಧ ಆಡಲಿದೆ. ಈ ಎರಡು ಪಂದ್ಯಗಳನ್ನು ಪಂಜಾಬ್ ಕಿಂಗ್ಸ್ ಗೆದ್ದರೆ ಒಟ್ಟು 16 ಪಾಯಿಂಟ್ಸ್​ನೊಂದಿಗೆ ಅಂಕಪಟ್ಟಿಯಲ್ಲಿ 4ನೇ ಸ್ಥಾನಕ್ಕೇರಬಹುದು.

9 / 11
ಆದರೆ ಇಲ್ಲಿ ಆರ್​ಸಿಬಿ ತಂಡ ಪ್ಲಸ್ ಪಾಯಿಂಟ್ ಏನೆಂದರೆ, ಲೀಗ್ ಹಂತದ ಕೊನೆಯ ಪಂದ್ಯವನ್ನು ಆರ್​ಸಿಬಿ ಗುಜರಾತ್ ಟೈಟಾನ್ಸ್ ವಿರುದ್ಧ ಆಡಲಿದೆ. ಬೆಂಗಳೂರಿನಲ್ಲಿ ನಡೆಯಲಿರುವ ಈ ಪಂದ್ಯದಲ್ಲಿ ಆರ್​ಸಿಬಿ ನೆಟ್ ರನ್ ರೇಟ್ ಟಾರ್ಗೆಟ್ ಮಾಡಿ ಗೆಲ್ಲುವ ಮೂಲಕ ಪ್ಲೇಆಫ್ ಪ್ರವೇಶಿಸುವ ಅವಕಾಶ ಹೆಚ್ಚಿರಲಿದೆ.

10 / 11
ಪ್ರಸ್ತುತ ಸನ್ನಿವೇಶದಲ್ಲಿ ಲಕ್ನೋ ಸೂಪರ್ ಜೈಂಟ್ಸ್​ ವಿರುದ್ಧದ ಮುಂಬೈ ಇಂಡಿಯನ್ಸ್ ತಂಡದ ಗೆಲುವು ಆರ್​ಸಿಬಿ ಪಾಲಿಗೆ ಎಲ್ಲಾ ರೀತಿಯಲ್ಲೂ ವರದಾನವಾಗಲಿದೆ. ಹೀಗಾಗಿಯೇ ಒಂದಾರ್ಥದಲ್ಲಿ ಆರ್​ಸಿಬಿ ತಂಡದ ಪ್ಲೇಆಫ್ ಭವಿಷ್ಯ ಮುಂಬೈ ಇಂಡಿಯನ್ಸ್ ಕೈಯಲ್ಲಿದೆ ಎಂದರೆ ತಪ್ಪಾಗಲಾರದು.

11 / 11
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ

ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!

ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ

ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್

ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ

ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು

ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ

ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!

ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು

ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ