IPL 2023: ಮುಂಬೈ ಇಂಡಿಯನ್ಸ್ ಕೈಯಲ್ಲಿದೆ RCB ತಂಡದ ಪ್ಲೇಆಫ್ ಭವಿಷ್ಯ
TV9 Web | Updated By: ಝಾಹಿರ್ ಯೂಸುಫ್
Updated on:
May 14, 2023 | 8:29 PM
IPL 2023 RCB Kannada: ಪ್ರಸ್ತುತ ಅಂಕಪಟ್ಟಿಯಲ್ಲಿ 14 ಪಾಯಿಂಟ್ಸ್ನೊಂದಿಗೆ 3ನೇ ಸ್ಥಾನದಲ್ಲಿರುವ ಮುಂಬೈ ಇಂಡಿಯನ್ಸ್ ಮುಂದಿನ 2 ಪಂದ್ಯಗಳನ್ನು ಗೆದ್ದರೆ 18 ಅಂಕಗಳೊಂದಿಗೆ ಪ್ಲೇಆಫ್ ಪ್ರವೇಶಿಸುವುದು ಖಚಿತ.
1 / 11
IPL 2023: ಇಂಡಿಯನ್ ಪ್ರೀಮಿಯರ್ ಲೀಗ್ನ 60 ಪಂದ್ಯಗಳು ಮುಗಿದರೂ ಇದುವರೆಗೆ ಯಾವುದೇ ತಂಡ ಪ್ಲೇಆಫ್ ಪ್ರವೇಶವನ್ನು ಖಚಿತಪಡಿಸಿಕೊಂಡಿಲ್ಲ. ಅತ್ತ ಗುಜರಾತ್ ಟೈಟಾನ್ಸ್ ಹಾಗೂ ಚೆನ್ನೈ ಸೂಪರ್ ಕಿಂಗ್ಸ್ ತಂಡಗಳು ಮುಂದಿನ 1 ಪಂದ್ಯ ಗೆದ್ದರೆ ಪ್ಲೇಆಫ್ ಆಡುವುದನ್ನು ಖಚಿತಪಡಿಸಿಕೊಳ್ಳಲಿದೆ.
2 / 11
ಏಕೆಂದರೆ 16 ಅಂಕಗಳನ್ನು ಹೊಂದಿರುವ ಗುಜರಾತ್ ಟೈಟಾನ್ಸ್ ಮುಂದಿನ 2 ಪಂದ್ಯಗಳಲ್ಲಿ ಒಂದರಲ್ಲಿ ಜಯ ಸಾಧಿಸಿದರೆ 18 ಪಾಯಿಂಟ್ಸ್ನೊಂದಿಗೆ ಪ್ಲೇಆಫ್ ಪ್ರವೇಶಿಸಲಿದೆ. ಹಾಗೆಯೇ 15 ಅಂಕಗಳನ್ನು ಹೊಂದಿರುವ ಸಿಎಸ್ಕೆ ತಂಡವು 2 ಪಂದ್ಯಗಳಲ್ಲಿ ಒಂದರಲ್ಲಿ ಜಯಗಳಿಸಿದರೆ 17 ಪಾಯಿಂಟ್ಸ್ ಆಗಲಿದೆ. ಇದರೊಂದಿಗೆ ಸಿಎಸ್ಕೆ ತಂಡವು 2ನೇ ಅಥವಾ 3ನೇ ಸ್ಥಾನದೊಂದಿಗೆ ಪ್ಲೇಆಫ್ ಆಡುವುದನ್ನು ಖಚಿತಪಡಿಸಿಕೊಳ್ಳಬಹುದು.
3 / 11
ಆದರೆ ಇತ್ತ 3ನೇ ಹಾಗೂ 4ನೇ ಸ್ಥಾನಗಳಲ್ಲಿ ಕಾಣಿಸಿಕೊಳ್ಳಲು ಒಟ್ಟು 4 ತಂಡಗಳ ನಡುವೆ ಪೈಪೋಟಿ ಇದೆ. ಅಂದರೆ 12 ಪಾಯಿಂಟ್ಸ್ ಕಲೆಹಾಕಿರುವ ಆರ್ಸಿಬಿ, ಪಂಜಾಬ್ ಕಿಂಗ್ಸ್, ಮುಂಬೈ ಇಂಡಿಯನ್ಸ್ ಹಾಗೂ ಲಕ್ನೋ ಸೂಪರ್ ಜೈಂಟ್ಸ್ ತಂಡಗಳಿಗೆ ಇನ್ನು 2 ಪಂದ್ಯಗಳು ಬಾಕಿಯಿದೆ.
4 / 11
ಪ್ರಸ್ತುತ ಅಂಕಪಟ್ಟಿಯಲ್ಲಿ 14 ಪಾಯಿಂಟ್ಸ್ನೊಂದಿಗೆ 3ನೇ ಸ್ಥಾನದಲ್ಲಿರುವ ಮುಂಬೈ ಇಂಡಿಯನ್ಸ್ ಮುಂದಿನ 2 ಪಂದ್ಯಗಳನ್ನು ಗೆದ್ದರೆ 18 ಅಂಕಗಳೊಂದಿಗೆ ಪ್ಲೇಆಫ್ ಪ್ರವೇಶಿಸುವುದು ಖಚಿತ. ಅತ್ತ ಮುಂಬೈ ಇಂಡಿಯನ್ಸ್ ಮುಂದಿನ 2 ಮ್ಯಾಚ್ಗಳನ್ನು ಗೆದ್ದರೆ ಆರ್ಸಿಬಿಗೆ ಪ್ಲೇಆಫ್ ಪ್ರವೇಶಿಸುವ ಹಾದಿ ಸುಗಮವಾಗಲಿದೆ.
5 / 11
ಅಂದರೆ ಮುಂಬೈ ಇಂಡಿಯನ್ಸ್ ಮುಂದಿನ ಪಂದ್ಯವನ್ನು ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧ ಆಡಲಿದೆ. ಈಗಾಗಲೇ 13 ಪಾಯಿಂಟ್ಸ್ ಹೊಂದಿರುವ ಲಕ್ನೋ ತಂಡವು ಮುಂದಿನ 2 ಪಂದ್ಯಗಳಲ್ಲಿ ಗೆದ್ದರೆ ಒಟ್ಟು 17 ಪಾಯಿಂಟ್ಸ್ನೊಂದಿಗೆ ಪ್ಲೇಆಫ್ ಅನ್ನು ಖಚಿತಪಡಿಸಿಕೊಳ್ಳಬಹುದು.
6 / 11
ಒಂದು ವೇಳೆ ಮುಂಬೈ ಇಂಡಿಯನ್ಸ್ ವಿರುದ್ಧ ಲಕ್ನೋ ಸೂಪರ್ ಜೈಂಟ್ಸ್ ಸೋತರೆ ಅದು ಆರ್ಸಿಬಿ ಪಾಲಿಗೆ ವರವಾಗಲಿದೆ. ಅಂದರೆ ಲಕ್ನೋ ತಂಡವು ಪ್ರಸ್ತುತ ಪಾಯಿಂಟ್ಸ್ ಟೇಬಲ್ನಲ್ಲಿ 4ನೇ ಸ್ಥಾನದಲ್ಲಿದೆ. ಮುಂದಿನ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ವಿರುದ್ಧ ಲಕ್ನೋ ತಂಡ ಸೋತರೆ, ಆರ್ಸಿಬಿ ಎಸ್ಆರ್ಹೆಚ್ ವಿರುದ್ಧ ಗೆದ್ದು 14 ಅಂಕಗಳೊಂದಿಗೆ ಅಂಕಪಟ್ಟಿಯಲ್ಲಿ 4ನೇ ಸ್ಥಾನಕ್ಕೇರಬಹುದು.
7 / 11
ಇತ್ತ ಲಕ್ನೋ ಸೂಪರ್ ಜೈಂಟ್ಸ್ ತಂಡವು ಕೊನೆಯ ಪಂದ್ಯದಲ್ಲಿ ಗೆದ್ದರೂ ಒಟ್ಟು 15 ಪಾಯಿಂಟ್ಸ್ ಮಾತ್ರ ಆಗಲಿದೆ. ಅದೇ ಆರ್ಸಿಬಿ ತನ್ನ ಕೊನೆಯ ಪಂದ್ಯದಲ್ಲಿ ಭರ್ಜರಿ ಜಯ ಸಾಧಿಸಿದರೆ 16 ಪಾಯಿಂಟ್ಸ್ನೊಂದಿಗೆ ಅಂಕಪಟ್ಟಿಯಲ್ಲಿ 4ನೇ ಸ್ಥಾನವನ್ನು ಭದ್ರಗೊಳಿಸಿ ಪ್ಲೇಆಫ್ ಆಡಬಹುದು.
8 / 11
ಅಂದರೆ ಇಲ್ಲಿ ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧ ಮುಂಬೈ ಇಂಡಿಯನ್ಸ್ ಗೆಲ್ಲಲೇಬೇಕು. ಒಂದು ವೇಳೆ ಮುಂಬೈ ಇಂಡಿಯನ್ಸ್ ತಂಡವು ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧ ಸೋತರೆ, ಆ ಬಳಿಕ ಆರ್ಸಿಬಿ ಹಾಗೂ ಮುಂಬೈ ನಡುವೆ ಪ್ಲೇಆಫ್ ಫೈಟ್ ಎದುರಾಗಲಿದೆ.
9 / 11
ಇನ್ನು ಪ್ಲೇಆಫ್ ಪೈಪೋಟಿಯಲ್ಲಿ ಪಂಜಾಬ್ ಕಿಂಗ್ಸ್ ತಂಡ ಕೂಡ ಇದ್ದು, ಶಿಖರ್ ಧವನ್ ಪಡೆ ಕೊನೆಯ 2 ಪಂದ್ಯಗಳಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಹಾಗೂ ಎಸ್ಆರ್ಹೆಚ್ ವಿರುದ್ಧ ಆಡಲಿದೆ. ಈ ಎರಡು ಪಂದ್ಯಗಳನ್ನು ಪಂಜಾಬ್ ಕಿಂಗ್ಸ್ ಗೆದ್ದರೆ ಒಟ್ಟು 16 ಪಾಯಿಂಟ್ಸ್ನೊಂದಿಗೆ ಅಂಕಪಟ್ಟಿಯಲ್ಲಿ 4ನೇ ಸ್ಥಾನಕ್ಕೇರಬಹುದು.
10 / 11
ಆದರೆ ಇಲ್ಲಿ ಆರ್ಸಿಬಿ ತಂಡ ಪ್ಲಸ್ ಪಾಯಿಂಟ್ ಏನೆಂದರೆ, ಲೀಗ್ ಹಂತದ ಕೊನೆಯ ಪಂದ್ಯವನ್ನು ಆರ್ಸಿಬಿ ಗುಜರಾತ್ ಟೈಟಾನ್ಸ್ ವಿರುದ್ಧ ಆಡಲಿದೆ. ಬೆಂಗಳೂರಿನಲ್ಲಿ ನಡೆಯಲಿರುವ ಈ ಪಂದ್ಯದಲ್ಲಿ ಆರ್ಸಿಬಿ ನೆಟ್ ರನ್ ರೇಟ್ ಟಾರ್ಗೆಟ್ ಮಾಡಿ ಗೆಲ್ಲುವ ಮೂಲಕ ಪ್ಲೇಆಫ್ ಪ್ರವೇಶಿಸುವ ಅವಕಾಶ ಹೆಚ್ಚಿರಲಿದೆ.
11 / 11
ಪ್ರಸ್ತುತ ಸನ್ನಿವೇಶದಲ್ಲಿ ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧದ ಮುಂಬೈ ಇಂಡಿಯನ್ಸ್ ತಂಡದ ಗೆಲುವು ಆರ್ಸಿಬಿ ಪಾಲಿಗೆ ಎಲ್ಲಾ ರೀತಿಯಲ್ಲೂ ವರದಾನವಾಗಲಿದೆ. ಹೀಗಾಗಿಯೇ ಒಂದಾರ್ಥದಲ್ಲಿ ಆರ್ಸಿಬಿ ತಂಡದ ಪ್ಲೇಆಫ್ ಭವಿಷ್ಯ ಮುಂಬೈ ಇಂಡಿಯನ್ಸ್ ಕೈಯಲ್ಲಿದೆ ಎಂದರೆ ತಪ್ಪಾಗಲಾರದು.