AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2023: ಪ್ಲೇಆಫ್ ಹಾದಿ ಮತ್ತಷ್ಟು ಕಠಿಣ: RCB ಮುಂದಿದೆ 4 ದೊಡ್ಡ ಸವಾಲುಗಳು

IPL 2023 Kannada: 5 ಪಂದ್ಯಗಳನ್ನು ಗೆದ್ದಿರುವ ಆರ್​ಸಿಬಿ ತಂಡವು ಮುಂದಿನ 4 ಪಂದ್ಯಗಳನ್ನು ಗೆದ್ದರೆ 18 ಅಂಕಗಳೊಂದಿಗೆ ನೇರವಾಗಿ ಪ್ಲೇಆಫ್ ಪ್ರವೇಶಿಸುವುದು ಖಚಿತ.

TV9 Web
| Edited By: |

Updated on: May 07, 2023 | 3:57 PM

Share
IPL 2023: ಈ ಬಾರಿಯ ಐಪಿಎಲ್​ನಲ್ಲಿ ಭರ್ಜರಿ ಜಯದೊಂದಿಗೆ ಶುರುಭಾರಂಭ ಮಾಡಿದ ಆರ್​ಸಿಬಿ ಇದೀಗ 10 ಪಂದ್ಯಗಳನ್ನು ಮುಗಿಸಿದೆ. ಆದರೆ ಇದರಲ್ಲಿ ಆರ್​ಸಿಬಿ ಗೆದ್ದಿರುವುದು ಕೇವಲ 5 ಪಂದ್ಯಗಳನ್ನು ಮಾತ್ರ. ಅಂದರೆ 5 ಪಂದ್ಯಗಳಲ್ಲಿ ಸೋಲನುಭವಿಸಿರುವ ಫಾಫ್ ಡುಪ್ಲೆಸಿಸ್ ಪಡೆ ಇದೀಗ ಅಂಕ ಪಟ್ಟಿಯಲ್ಲಿ 5ನೇ ಸ್ಥಾನದಲ್ಲಿದೆ.

1 / 8
ಆದರೆ ಆರ್​ಸಿಬಿ ಪಾಲಿಗೆ ಇನ್ನುಳಿದಿರುವುದು ಕೇವಲ 4 ಪಂದ್ಯಗಳು ಮಾತ್ರ. ಈ ನಾಲ್ಕು ಪಂದ್ಯಗಳಲ್ಲಿ ಜಯ ಸಾಧಿಸಿದರೆ ಮಾತ್ರ ಪ್ಲೇಆಫ್ ಪ್ರವೇಶಿಸುವುದನ್ನು ಖಚಿತಪಡಿಸಿಕೊಳ್ಳಬಹುದು. ಅಂದರೆ ಇಲ್ಲಿ 18 ಪಾಯಿಂಟ್ಸ್​ಗಳಿಸಿದರೆ ಪ್ಲೇಆಫ್ ಆಡುವುದು ಕನ್ಫರ್ಮ್ ಆಗಲಿದೆ.

2 / 8
ಇದೀಗ 10 ಪಾಯಿಂಟ್ಸ್ ಕಲೆಹಾಕಿರುವ ಆರ್​ಸಿಬಿಗೆ 8 ಅಂಕಗಳ ಅಗತ್ಯತೆಯಿದೆ. ಆದರೆ ಈ 8 ಅಂಕಗಳನ್ನು ಪಡೆಯಲು ಆರ್​ಸಿಬಿ 4 ತಂಡಗಳ ವಿರುದ್ಧ ಸೆಣಸಲಿದೆ. ಅದರಲ್ಲಿ ಮೂರು ಪಂದ್ಯಗಳು ಎದುರಾಳಿಗಳ ತವರಿನಲ್ಲಿ ಎಂಬುದು ವಿಶೇಷ.

3 / 8
ಅಂದರೆ ಆರ್​ಸಿಬಿ ತಂಡವು ತನ್ನ ಮುಂದಿನ ಪಂದ್ಯವನ್ನು ಮೇ.9 ರಂದು ವಾಂಖೆಡೆ ಸ್ಟೇಡಿಯಂನಲ್ಲಿ ಮುಂಬೈ ಇಂಡಿಯನ್ಸ್ ವಿರುದ್ಧ ಆಡಲಿದೆ. ಇದಾದ ಬಳಿಕ ಮೇ 14 ರಂದು ರಾಜಸ್ಥಾನ್ ರಾಯಲ್ಸ್ ವಿರುದ್ಧ ಆಡಲಿದ್ದು, ಈ ಪಂದ್ಯವು ಇಂದೋರ್​ನಲ್ಲಿ ನಡೆಯಲಿದೆ.

4 / 8
ಹಾಗೆಯೇ ಮೇ 18 ರಂದು ಹೈದರಾಬಾದ್​ನಲ್ಲಿ ಎಸ್​ಆರ್​ಹೆಚ್ ವಿರುದ್ಧ ಆಡಬೇಕಿದೆ. ಇನ್ನು ಮೇ 21 ರಂದು ನಡೆಯಲಿರುವ ಕೊನೆಯ ಪಂದ್ಯದಲ್ಲಿ ಆರ್​ಸಿಬಿ ಎದುರಾಳಿ ಗುಜರಾತ್ ಟೈಟಾನ್ಸ್.

5 / 8
ಈ 4 ಸವಾಲುಗಳನ್ನು ಮೆಟ್ಟಿ ನಿಂತು ಗೆದ್ದರೆ ಆರ್​ಸಿಬಿ ನೇರವಾಗಿ ಪ್ಲೇಆಫ್ ಪ್ರವೇಶಿಸಲಿದೆ. ಒಂದು ವೇಳೆ ಇದರಲ್ಲಿ ಮೂರಲ್ಲಿ ಗೆದ್ದರೆ ಉಳಿದ ತಂಡಗಳ ನೆಟ್​ ರನ್​ ರೇಟ್​ ಅನ್ನು ಅವಲಂಭಿಸಬೇಕಾಗಿ ಬರಬಹುದು.

6 / 8
ಏಕೆಂದರೆ 10 ತಂಡಗಳ ಮುಕ್ತಾಯದ ಬಳಿಕ ಬಹುತೇಕ ತಂಡಗಳು 10 ಅಂಕಗಳನ್ನು ಕಲೆಹಾಕಿದ್ದು, ಹೀಗಾಗಿ ಪ್ಲೇಆಫ್ ಪ್ರವೇಶಿಸಲು 7 ತಂಡಗಳ ನಡುವೆ ನೇರ ಪೈಪೋಟಿ ಇದೆ. ಇತ್ತ ಮೈನಸ್ ನೆಟ್​ ರನ್​ ರೇಟ್ (-0.209) ಹೊಂದಿರುವ ಆರ್​ಸಿಬಿ ಮುಂದಿನ ಪಂದ್ಯಗಳಲ್ಲಿ ಭರ್ಜರಿ ಜಯ ಸಾಧಿಸುವ ಮೂಲಕ ಪ್ಲಸ್ ನೆಟ್ ರನ್​ ರೇಟ್​ ಮಾಡಿಕೊಳ್ಳಬೇಕಾದ ಅನಿವಾರ್ಯತೆ ಕೂಡ ಇದೆ.

7 / 8
ಸದ್ಯ 5 ಪಂದ್ಯಗಳನ್ನು ಗೆದ್ದಿರುವ ಆರ್​ಸಿಬಿ ತಂಡವು ಮುಂದಿನ 4 ಪಂದ್ಯಗಳನ್ನು ಗೆದ್ದರೆ 18 ಅಂಕಗಳೊಂದಿಗೆ ನೇರವಾಗಿ ಪ್ಲೇಆಫ್ ಪ್ರವೇಶಿಸುವುದು ಖಚಿತ. ಒಂದು ವೇಳೆ ಇದರಲ್ಲಿ 1 ಪಂದ್ಯದಲ್ಲಿ ಸೋತರೂ ಅಂಕ ಪಟ್ಟಿಯಲ್ಲಿ ಅಗ್ರ ನಾಲ್ಕರಲ್ಲಿ ಕಾಣಿಸಿಕೊಳ್ಳಲು ನೆಟ್​ ರನ್ ರೇಟ್​ನ ಮೊರೆ ಹೋಗಬೇಕಾಗಿ ಬರಬಹುದು. ಹೀಗಾಗಿ ಆರ್​ಸಿಬಿ ಮುಂದಿನ ಎಲ್ಲಾ ಪಂದ್ಯಗಳನ್ನು ಗೆದ್ದು ಪ್ಲೇಆಫ್​ಗೆ ಡೈರೆಕ್ಟ್ ಎಂಟ್ರಿ ಕೊಡಲಿದೆಯಾ ಕಾದು ನೋಡಬೇಕಿದೆ.

8 / 8
Web contact
Web contact

TV9 Kannada

Read More
Follow Us
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ

ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್

ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ

ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ

ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ

ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ

ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ

ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ

ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ

ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ