AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2023: ಕೊನೆಯ ಪಂದ್ಯ RCB ಪಾಲಿಗೆ ಪ್ಲಸ್ ಪಾಯಿಂಟ್

IPL 2023 Kannada: ಇನ್ನುಳಿದ 2 ಸ್ಥಾನಗಳಿಗಾಗಿ ಲಕ್ನೋ ಸೂಪರ್ ಜೈಂಟ್ಸ್, ಮುಂಬೈ ಇಂಡಿಯನ್ಸ್ ಹಾಗೂ ಆರ್​ಸಿಬಿ ನಡುವೆ ನೇರ ಪೈಪೋಟಿ ಇದೆ. ಹೀಗಾಗಿಯೇ ಅಂತಿಮವಾಗಿ ಅಗ್ರ ನಾಲ್ಕರಲ್ಲಿ ಕಾಣಿಸಿಕೊಳ್ಳುವ ತಂಡಗಳಾವುವು ಎಂಬುದೇ ಈಗ ಕುತೂಹಲ.

TV9 Web
| Edited By: |

Updated on: May 20, 2023 | 10:06 PM

Share
IPL 2023: ಐಪಿಎಲ್​ ಸೀಸನ್ 16 ರಲ್ಲಿ ಪ್ಲೇಆಫ್ ಹಂತಕ್ಕೇರುವ ತಂಡಗಳಾವುವು ಎಂಬುದೇ ಈಗ ಕುತೂಹಲ. ಏಕೆಂದರೆ ಇದುವರೆಗಿನ ಪಂದ್ಯಗಳ ಬಳಿಕ ಪ್ಲೇಆಫ್ ಪ್ರವೇಶವನ್ನು ಖಚಿತಪಡಿಸಿಕೊಂಡಿರುವುದು ಕೇವಲ 2 ತಂಡಗಳು ಮಾತ್ರ.

1 / 9
ಅದರಂತೆ ಗುಜರಾತ್ ಟೈಟಾನ್ಸ್ ಹಾಗೂ ಚೆನ್ನೈ ಸೂಪರ್ ಕಿಂಗ್ಸ್ ತಂಡಗಳು ಪ್ಲೇಆಫ್ಸ್ ಆಡುವುದು ಖಚಿತವಾಗಿದೆ. ಆದರೆ ಇನ್ನುಳಿದ 2 ಸ್ಥಾನಗಳಿಗಾಗಿ ಲಕ್ನೋ ಸೂಪರ್ ಜೈಂಟ್ಸ್, ಮುಂಬೈ ಇಂಡಿಯನ್ಸ್ ಹಾಗೂ ಆರ್​ಸಿಬಿ ನಡುವೆ ನೇರ ಪೈಪೋಟಿ ಇದೆ. ಹೀಗಾಗಿಯೇ ಅಂತಿಮವಾಗಿ ಅಗ್ರ ನಾಲ್ಕರಲ್ಲಿ ಕಾಣಿಸಿಕೊಳ್ಳುವ ತಂಡಗಳಾವುವು ಎಂಬುದೇ ಈಗ ಕೌತುಕವಾಗಿ ಮಾರ್ಪಟ್ಟಿದೆ.

2 / 9
ಈ ಎಲ್ಲಾ ಪೈಪೋಟಿಗಳ ನಡುವೆ ಆರ್​ಸಿಬಿ ಪಾಲಿಗೆ ಅದೃಷ್ಟವಂತು ಖುಲಾಯಿಸಿದೆ. ಅದೇನೆಂದರೆ ಲೀಗ್​ ಹಂತದ ಕೊನೆಯ ಪಂದ್ಯವಾಡುತ್ತಿರುವುದು. ಅಂದರೆ ಮುಂದಿನ ಪಂದ್ಯದಲ್ಲಿ ಲಕ್ನೋ ಸೂಪರ್ ಜೈಂಟ್ಸ್ ಗೆದ್ದರೆ 17 ಅಂಕಗಳೊಂದಿಗೆ ಪ್ಲೇಆಫ್ ಪ್ರವೇಶಿಸುವುದು ಖಚಿತ.

3 / 9
ಹೀಗಾದ್ರೆ 4ನೇ ಸ್ಥಾನಕ್ಕೆ ಮಾತ್ರ ಪೈಪೋಟಿ ಕಂಡು ಬರಲಿದೆ. ಅದು ಕೂಡ ಕೊನೆಯ 2 ಪಂದ್ಯಗಳಲ್ಲಿ ಎಂಬುದು ವಿಶೇಷ. ಇಲ್ಲಿ ಲೀಗ್ ಹಂತದ 69ನೇ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ಹಾಗೂ ಎಸ್​ಆರ್​ಹೆಚ್ ತಂಡಗಳು ಮುಖಾಮುಖಿಯಾಗಲಿದೆ. ಈ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ಗೆದ್ದರೆ 16 ಅಂಕಗಳೊಂದಿಗೆ ಪಾಯಿಂಟ್ಸ್ ಟೇಬಲ್​ನಲ್ಲಿ 4ನೇ ಸ್ಥಾನಕ್ಕೇರಲಿದೆ.

4 / 9
ಆದರೆ ಇದರ ಬೆನ್ನಲ್ಲೇ ಆರ್​ಸಿಬಿ ಹಾಗೂ ಗುಜರಾತ್ ಟೈಟಾನ್ಸ್ ತಂಡಗಳು ಮುಖಾಮುಖಿಯಾಗಲಿದೆ. ಈ ಪಂದ್ಯದಲ್ಲಿ ಆರ್​ಸಿಬಿ ಜಯ ಸಾಧಿಸಿದರೆ ಮಾತ್ರ ಸಾಲುವುದಿಲ್ಲ. ಬದಲಾಗಿ ಮುಂಬೈ ಇಂಡಿಯನ್ಸ್​ಗಿಂತ ಉತ್ತಮ ನೆಟ್​ ರನ್​ ರೇಟ್​ ಪಡೆಯಬೇಕಾಗುತ್ತದೆ.

5 / 9
ಏಕೆಂದರೆ ಉಭಯ ತಂಡಗಳು 16 ಪಾಯಿಂಟ್ಸ್​ಗಳಿಸುವುದರಿಂದ ನಾಲ್ಕನೇ ಸ್ಥಾನಕ್ಕೆ ನೆಟ್ ರನ್​ ರೇಟ್​ ಅನ್ನು ಪರಿಗಣಿಸಬೇಕಾಗಿ ಬರಬಹುದು. ಈ ವೇಳೆ ಮುಂಬೈ ಇಂಡಿಯನ್ಸ್​ಗಿಂತ ಆರ್​ಸಿಬಿ ಉತ್ತಮ ನೆಟ್​ ರನ್​ ರೇಟ್​ ಹೊಂದಿದ್ದರೆ ಅಂಕಪಟ್ಟಿಯಲ್ಲಿ 4ನೇ ಸ್ಥಾನ ಅಲಂಕರಿಸಬಹುದು.

6 / 9
ಇಲ್ಲಿ ಆರ್​ಸಿಬಿ ಪಾಲಿನ ಅದೃಷ್ಟವೆಂದರೆ ಲೀಗ್ ಹಂತದ ಕೊನೆಯ ಪಂದ್ಯವಾಡುತ್ತಿರುವುದು. ಅಂದರೆ ಮುಂಬೈ ಇಂಡಿಯನ್ಸ್​ಗಿಂತ ಉತ್ತಮ ನೆಟ್ ರನ್​ ರೇಟ್ ಪಡೆಯಲು ಆರ್​ಸಿಬಿ ಕೊನೆಯ ಪಂದ್ಯದಲ್ಲಿ ನಿರ್ದಿಷ್ಟ ಟಾರ್ಗೆಟ್ ಹೊಂದಿಸಿಕೊಳ್ಳಬಹುದು. ಉದಾಹರಣೆಗೆ...ಇಂತಿಷ್ಟು ಓವರ್​ಗಳಲ್ಲಿ ಪಂದ್ಯ ಮುಗಿಸಿದರೆ ಮುಂಬೈಗಿಂತ ಆರ್​ಸಿಬಿ ತಂಡದ ನೆಟ್ ರನ್ ರೇಟ್ ಹೆಚ್ಚಿಸಿಕೊಳ್ಳುವ ಲೆಕ್ಕಾಚಾರ ಸಿಗಲಿದೆ.

7 / 9
ಈ ಲೆಕ್ಕಾಚಾರದೊಂದಿಗೆ ಕಣಕ್ಕಿಳಿದು ಗುಜರಾತ್ ಟೈಟಾನ್ಸ್​ಗೆ ಸೋಲುಣಿಸಿ ಮುಂಬೈ ಇಂಡಿಯನ್ಸ್​ ಅನ್ನು ಹಿಂದಿಕ್ಕಿ ಆರ್​ಸಿಬಿಗೆ ಪ್ಲೇಆಫ್ ಪ್ರವೇಶಿಸುವ ಸುವರ್ಣಾವಕಾಶವಿದೆ. ಅದರಲ್ಲೂ ಈ ಪಂದ್ಯವು ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆಯುತ್ತಿರುವುದು ಆರ್​ಸಿಬಿ ಪಾಲಿಗೆ ಸಿಕ್ಕ ಮತ್ತೊಂದು ಪ್ಲಸ್ ಪಾಯಿಂಟ್.

8 / 9
ಅಂದರೆ ಆರ್​ಸಿಬಿ ಪಾಲಿನ ನಿರ್ಣಾಯಕ ಪಂದ್ಯವು ಲೀಗ್ ಹಂತದ ಕೊನೆಯ ಪಂದ್ಯವಾಗಿದ್ದು, ಅದರ ಜೊತೆಗೆ ಈ ಪಂದ್ಯವು ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲೇ ನಡೆಯುತ್ತಿದೆ. ಈ ಎಲ್ಲಾ ಕಾರಣಗಳಿಂದ ಅಂತಿಮ ಪಂದ್ಯದಲ್ಲಿ ಆರ್​ಸಿಬಿ ಭರ್ಜರಿ ಜಯ ಸಾಧಿಸಿ ಪ್ಲೇಆಫ್ ಪ್ರವೇಶಿಸುವುದನ್ನು ಎದುರು ನೋಡಬಹುದು.

9 / 9
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು

‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’

ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ

ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು

ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ

ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?

ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ

ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ

ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!

ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್