AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2023: RCB ಪಾಲಿಗೆ ಮಗ್ಗುಲ ಮುಳ್ಳಾಗಿರುವ ತವರು ಮೈದಾನ..!

IPL 2023 Kannada: ಈ ಮೂರು ಸೀಸನ್​ನಲ್ಲೂ ಆರ್​ಸಿಬಿ ಪ್ಲೇಆಫ್ಸ್​ ಪ್ರವೇಶಿಸುವಲ್ಲಿ ಯಶಸ್ವಿಯಾಗಿತ್ತು. ಇದಕ್ಕೂ ಮುನ್ನ ರಾಯಲ್ ಚಾಲೆಂಜರ್ಸ್ ಬೆಂಗಳೂರು ಪ್ಲೇಆಫ್ಸ್ ಆಡಿದ್ದು 2016 ರಲ್ಲಿ.

TV9 Web
| Edited By: |

Updated on: May 31, 2023 | 8:29 PM

Share
IPL 2023: ಐಪಿಎಲ್​ ಸೀಸನ್ 16 ಮುಕ್ತಾಯಗೊಂಡಿದೆ. ಈ ಬಾರಿಯ ಫೈನಲ್ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ ವಿರುದ್ಧ ರೋಚಕ ಜಯ ಸಾಧಿಸಿ ಚೆನ್ನೈ ಸೂಪರ್ ಕಿಂಗ್ಸ್ ಚಾಂಪಿಯನ್​ ಆಗಿ ಹೊರಹೊಮ್ಮಿದೆ. ಇತ್ತ ಈ ಸಲ ಕಪ್ ನಮ್ದೆ ಎನ್ನುವ ವಿಶ್ವಾಸದಲ್ಲಿದ್ದ ಆರ್​ಸಿಬಿ ಅಭಿಮಾನಿಗಳಿಗೆ ಈ ಸಲ ಕೂಡ ನಿರಾಸೆಯಾಗಿದೆ.

1 / 10
ಅದರಲ್ಲೂ ಲೀಗ್​ ಹಂತದಲ್ಲೇ ಆರ್​ಸಿಬಿ ಹೊರಬಿದ್ದಿದ್ದು ಅಭಿಮಾನಿಗಳ ಪಾಲಿಗೆ ನೋವುಂಟು ಮಾಡಿತ್ತು. ಏಕೆಂದರೆ ಕಳೆದ 3 ಸೀಸನ್​​ಗಳಲ್ಲಿ ಆರ್​ಸಿಬಿ ಸತತ ಪ್ಲೇಆಫ್ಸ್ ಪ್ರವೇಶಿಸಿತ್ತು. ಆದರೆ ಈ ಬಾರಿ 14 ಪಂದ್ಯಗಳಲ್ಲಿ ಕೇವಲ 7 ರಲ್ಲಿ ಮಾತ್ರ ಜಯ ಸಾಧಿಸಿ ಮೊದಲ ಸುತ್ತಿನಲ್ಲೇ ಹೊರಬಿದ್ದಿದೆ.

2 / 10
ಆದರೆ ಇಲ್ಲಿ ಗಮನಿಸಬೇಕಾದ ಮುಖ್ಯ ಅಂಶ ಎಂದರೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ಸತತ ಮೂರು ವರ್ಷ ಪ್ಲೇಆಫ್ಸ್ ಪ್ರವೇಶಿಸಿದ್ದ ವೇಳೆ ಆರ್​ಸಿಬಿ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಪಂದ್ಯಗಳನ್ನಾಡಿರಲಿಲ್ಲ ಎಂಬುದು. ಅಂದರೆ ಕೊರೋನಾ ಭೀತಿ ಹಿನ್ನೆಲೆಯಲ್ಲಿ 2020, 2021 ಹಾಗೂ 2022 ರ ಐಪಿಎಲ್​ ಅನ್ನು ಯುಎಇ ಹಾಗೂ ಮುಂಬೈನಲ್ಲಿ ಆಯೋಜಿಸಲಾಗಿತ್ತು.

3 / 10
ಈ ಮೂರು ಸೀಸನ್​ನಲ್ಲೂ ಆರ್​ಸಿಬಿ ಪ್ಲೇಆಫ್ಸ್​ ಪ್ರವೇಶಿಸುವಲ್ಲಿ ಯಶಸ್ವಿಯಾಗಿತ್ತು. ಇದಕ್ಕೂ ಮುನ್ನ ರಾಯಲ್ ಚಾಲೆಂಜರ್ಸ್ ಬೆಂಗಳೂರು ಪ್ಲೇಆಫ್ಸ್ ಆಡಿದ್ದು 2016 ರಲ್ಲಿ. ಅಂದರೆ 2017,2018 ಹಾಗೂ 2019 ರಲ್ಲೂ ಆರ್​ಸಿಬಿ ಲೀಗ್ ಹಂತದಲ್ಲೇ ಹೊರಬಿದ್ದಿತ್ತು.

4 / 10
ಅದರಲ್ಲೂ ಸೌತ್ ಆಫ್ರಿಕಾ (2009) ಹಾಗೂ ಇತರೆ ಕಡೆ ನಡೆದ ಐಪಿಎಲ್​ (2020, 2021, 2022) ನಡೆದ ಐಪಿಎಲ್​ ಅನ್ನು ಹೊರತುಪಡಿಸಿದರೆ ಉಳಿದ 12 ಸೀಸನ್​ಗಳಲ್ಲಿ ಆರ್​ಸಿಬಿ ಚಿನ್ನಸ್ವಾಮಿ ಸ್ಟೇಡಿಯಂಗಳಲ್ಲಿ ಪಂದ್ಯಗಳನ್ನಾಡಿದೆ. ಈ ವೇಳೆ ಪ್ಲೇಆಫ್ಸ್​ ಪ್ರವೇಶಿಸಿದ್ದು ಕೇವಲ 4 ಬಾರಿ ಮಾತ್ರ ಎಂದರೆ ನಂಬಲೇಬೇಕು. ಅತ್ತ ಇತರೆ ಕಡೆ ಆಡಿದ 4 ಸೀಸನ್​ಗಳಲ್ಲೂ ಆರ್​ಸಿಬಿ ಪ್ಲೇಆಫ್ಸ್ ಆಡಿದೆ.

5 / 10
ಈ ಎಲ್ಲಾ ಕಾರಣಗಳಿಂದ ಆರ್​ಸಿಬಿ ಪಾಲಿಗೆ ತವರು ಮೈದಾನ ಮಗ್ಗುಲ ಮುಳ್ಳಾಗಿ ಕಾಡುತ್ತಿದೆಯಾ ಎಂಬ ಪ್ರಶ್ನೆಯೊಂದು ಹುಟ್ಟಿಕೊಂಡಿದೆ. ಇತ್ತ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಆರ್​ಸಿಬಿ ತಂಡದ ಅಂಕಿ ಅಂಶಗಳು ಕೂಡ ಇದನ್ನೇ ಪುಷ್ಠೀಕರಿಸುತ್ತಿದೆ.

6 / 10
ಏಕೆಂದರೆ ಆರ್​ಸಿಬಿ ತಂಡವು ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಇದುವರೆಗೆ 84 ಪಂದ್ಯಗಳನ್ನಾಡಿದೆ. ಈ ವೇಳೆ ಗೆದ್ದಿರುವುದು ಕೇವಲ 39 ಪಂದ್ಯಗಳಲ್ಲಿ ಮಾತ್ರ. ಇನ್ನು 40 ಪಂದ್ಯಗಳಲ್ಲಿ ಸೋಲನುಭವಿಸಿದೆ. ಹಾಗೆಯೇ 1 ಪಂದ್ಯ ಟೈ ಆದರೆ, 4 ಪಂದ್ಯಗಳು ರದ್ದಾಗಿತ್ತು. ಅಂದರೆ ತವರು ಮೈದಾನದಲ್ಲಿ ಆರ್​ಸಿಬಿ ಗೆದ್ದಿದ್ದಕ್ಕಿಂತ ಸೋತಿದ್ದೇ ಹೆಚ್ಚು.

7 / 10
ಈ ಬಾರಿ RCB 7 ಪಂದ್ಯಗಳಲ್ಲಿ ಸೋತಿದೆ. ಅದರಲ್ಲಿ ನಾಲ್ಕು ಪಂದ್ಯಗಳನ್ನು ಸೋತಿರುವುದು ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಎಂಬುದು ಇಲ್ಲಿ ಉಲ್ಲೇಖಾರ್ಹ. ಅಂದರೆ ಆರ್​ಸಿಬಿ ತಂಡದ ತವರು ಮೈದಾನದಲ್ಲಿ ಟಾಸ್ ಪ್ರಮುಖ ಪಾತ್ರವಹಿಸುತ್ತದೆ. ಇಲ್ಲಿ ಟಾಸ್ ಗೆದ್ದರೆ ಅರ್ಧ ಮ್ಯಾಚ್ ಗೆದ್ದಂತೆ.

8 / 10
ಇದಕ್ಕೆ ತಾಜಾ ಉದಾಹರಣೆ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ಆರ್​ಸಿಬಿ-ಗುಜರಾತ್ ಟೈಟಾನ್ಸ್ ನಡುವಣ ಪಂದ್ಯ. ಆರ್​ಸಿಬಿ ಪಾಲಿಗೆ ಪ್ಲೇಆಫ್ಸ್ ಪ್ರವೇಶಿಸಲು ನಿರ್ಣಾಯಕವಾಗಿದ್ದ ಈ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ ತಂಡವು ಟಾಸ್ ಗೆದ್ದು ಬೌಲಿಂಗ್ ಆಯ್ದುಕೊಂಡಿದ್ದರು. ಇದಾಗ್ಯೂ ವಿರಾಟ್ ಕೊಹ್ಲಿಯ ಶತಕದೊಂದಿಗೆ ಆರ್​ಸಿಬಿ 197 ರನ್​ ಕಲೆಹಾಕಿತ್ತು. ಆದರೆ ಗುಜರಾತ್ ಟೈಟಾನ್ಸ್ ತಂಡವು 19.1 ಓವರ್​ಗಳಲ್ಲಿ ಚೇಸ್ ಮಾಡಿ ಭರ್ಜರಿ ಗೆಲುವು ದಾಖಲಿಸಿತು.

9 / 10
ಒಟ್ಟಿನಲ್ಲಿ ಎಲ್ಲಾ ತಂಡಗಳಿಗೆ ತವರು ಮೈದಾನ ವರದಾನವಾದರೆ ಆರ್​ಸಿಬಿ ಪಾಲಿಗೆ ಮಗ್ಗುಲ ಮುಳ್ಳಾಗಿ ಪರಿಣಮಿಸುತ್ತಿದೆ. ಇದಕ್ಕೆ ಸಾಕ್ಷಿಯೇ ಆರ್​ಸಿಬಿ ತವರು ಮೈದಾನದಲ್ಲಿ ಪಂದ್ಯಗಳನ್ನಾಡಿದಾಗ ಪ್ಲೇಆಫ್ಸ್​ ಪ್ರವೇಶಿಸದಿರುವುದು.

10 / 10
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು

‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’

ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ

ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು

ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ

ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?

ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ

ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ

ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!

ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್