- Kannada News Photo gallery Cricket photos IPL 2023: RCB Records and Stats Punjab Cricket Association Stadium
IPL 2023: ಪಂಜಾಬ್ ಕಿಂಗ್ಸ್ ವಿರುದ್ಧ ಗೆಲ್ಲುತ್ತಾ RCB? ಏನು ಹೇಳುತ್ತೆ ಅಂಕಿ ಅಂಶಗಳು..!
IPL 2023 Kannada: ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ: ವಿರಾಟ್ ಕೊಹ್ಲಿ, ಫಾಫ್ ಡು ಪ್ಲೆಸಿಸ್ (ನಾಯಕ), ಮಹಿಪಾಲ್ ಲೊಮ್ರೊರ್, ಗ್ಲೆನ್ ಮ್ಯಾಕ್ಸ್‌ವೆಲ್, ಶಹಬಾಜ್ ಅಹ್ಮದ್, ದಿನೇಶ್ ಕಾರ್ತಿಕ್ (ವಿಕೆಟ್ ಕೀಪರ್), ವನಿಂದು ಹಸರಂಗ, ಹರ್ಷಲ್ ಪಟೇಲ್, ವೇಯ್ನ್ ಪಾರ್ನೆಲ್.
Updated on: Apr 19, 2023 | 9:22 PM

IPL 2023: ಐಪಿಎಲ್ನ 27ನೇ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ಹಾಗೂ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಗಳು ಮುಖಾಮುಖಿಯಾಗಲಿದೆ. ಮೊಹಾಲಿಯ ಪಂಜಾಬ್ ಕ್ರಿಕೆಟ್ ಅಸೋಸಿಯೇಷನ್ ಸ್ಟೇಡಿಯಂನಲ್ಲಿ ನಡೆಯಲಿರುವ ಈ ಪಂದ್ಯದಲ್ಲಿ ಆರ್ಸಿಬಿಗೆ ಗೆಲುವು ಅನಿವಾರ್ಯ. ಏಕೆಂದರೆ ಆಡಿರುವ 5 ಪಂದ್ಯಗಳಲ್ಲಿ ಆರ್ಸಿಬಿ ಮೂರರಲ್ಲಿ ಸೋತಿದೆ. ಇದೀಗ ಮೊದಲಾರ್ಧಕ್ಕೂ ಮುನ್ನ ಸತತ ಗೆಲುವು ಸಾಧಿಸುವ ಹಂಬಲದಲ್ಲಿದೆ ಆರ್ಸಿಬಿ.

ಆದರೆ ಆರ್ಸಿಬಿಗೆ ಪಂಜಾಬ್ನಲ್ಲಿ ಗೆಲುವು ಅಂದುಕೊಂಡಷ್ಟು ಸುಲಭವಲ್ಲ. ಏಕೆಂದರೆ ಮೊಹಾಲಿ ಮೈದಾನವು ಪಂಜಾಬ್ ಕಿಂಗ್ಸ್ ತಂಡದ ತವರು ಗ್ರೌಂಡ್. ಇಲ್ಲಿ ಪಂಜಾಬ್ ಕಿಂಗ್ ಇದುವರೆಗೆ 58 ಪಂದ್ಯಗಳನ್ನಾಡಿದೆ. ಈ ವೇಳೆ 31 ಪಂದ್ಯಗಳಲ್ಲಿ ಜಯ ಸಾಧಿಸಿದೆ. ಇನ್ನು 27 ಪಂದ್ಯಗಳಲ್ಲಿ ಸೋಲನುಭವಿಸಿದೆ.

ಇಲ್ಲಿ ಗೆಲುವು ಸೋಲುಗಳ ಲೆಕ್ಕಚಾರಗಳಲ್ಲಿ ದೊಡ್ಡ ವ್ಯತ್ಯಾಸವಿಲ್ಲ ಎನ್ನಬಹುದು. ಇದಾಗ್ಯೂ ಈ ಮೈದಾನದಲ್ಲಿ ಆರ್ಸಿಬಿ ತಂಡದ ಪ್ರದರ್ಶನ ಕೂಡ ಅಷ್ಟಕಷ್ಟೇ. ಇದು ಪಂಜಾಬ್ ಕಿಂಗ್ಸ್ ತಂಡಕ್ಕೆ ಪ್ಲಸ್ ಪಾಯಿಂಟ್ ಆಗಲಿದೆ.

ಏಕೆಂದರೆ ಆರ್ಸಿಬಿ ತಂಡವು ಪಂಜಾಬ್ ಕ್ರಿಕೆಟ್ ಅಸೋಸಿಯೇಷನ್ ಸ್ಟೇಡಿಯಂನಲ್ಲಿ ಒಟ್ಟು 7 ಪಂದ್ಯಗಳನ್ನಾಡಿದೆ. ಈ ವೇಳೆ ಆರ್ಸಿಬಿ ಗೆದ್ದಿರುವುದು ಕೇವಲ 4 ಬಾರಿ ಮಾತ್ರ. ಇನ್ನು ಕಳೆದ ಸೀಸನ್ನಲ್ಲಿ ಪಂಜಾಬ್ ವಿರುದ್ಧ ಆರ್ಸಿಬಿ ಎರಡು ಬಾರಿ ಕೂಡ ಸೋಲನುಭವಿಸಿತ್ತು.

ಮತ್ತೊಂದೆಡೆ ಪಂಜಾಬ್ ಕಿಂಗ್ಸ್ ತಂಡವು ಈ ಬಾರಿ ಮೊಹಾಲಿಯಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿದ್ದು, ಇಲ್ಲಿ ಆಡಿರುವ 2 ಪಂದ್ಯಗಳಲ್ಲಿ 1 ರಲ್ಲಿ ಜಯ ಸಾಧಿಸಿದೆ. ಮತ್ತೊಂದು ಪಂದ್ಯದಲ್ಲಿ ವಿರೋಚಿತವಾಗಿ ಸೋಲೊಪ್ಪಿಕೊಂಡಿತು. ಹಾಗೆಯೇ ಎದುರಾಳಿಗಳ ತವರಿನಲ್ಲಿ ನಡೆದ 3 ಪಂದ್ಯಗಳಲ್ಲಿ 2 ರಲ್ಲಿ ಜಯ ಸಾಧಿಸಿದೆ. ಇದೇ ಆತ್ಮ ವಿಶ್ವಾಸದೊಂದಿಗೆ ಪಂಜಾಬ್ ಕಿಂಗ್ಸ್ ತಂಡವು ತವರಿನಲ್ಲಿ ಕಣಕ್ಕಿಳಿಯಲಿದೆ.

ಇನ್ನು ಈ ಪಂದ್ಯವು ಮಧ್ಯಾಹ್ನ 3.30 ರಿಂದ ಶುರುವಾಗಲಿದ್ದು, ಇದರಿಂದ ಟಾಸ್ ಕೂಡ ನಿರ್ಣಾಯಕ ಪಾತ್ರವಹಿಸುವುದಿಲ್ಲ. ಅಂದರೆ ಬೌಲರ್ಗಳಿಗೆ ಇಬ್ಬನಿಯ ಸಮಸ್ಯೆಯ ಎದುರಾಗುವುದಿಲ್ಲ. ಹೀಗಾಗಿ ತವರು ಮೈದಾನದಲ್ಲಿ ಅಬ್ಬರಿಸುವ ಪಂಜಾಬ್ ಕಿಂಗ್ಸ್ ವಿರುದ್ಧ ಗೆಲ್ಲಲು ಆರ್ಸಿಬಿ ಬಿರುಬಿಸಿಲಿನಲ್ಲಿ ಬೆವರಿಳಿಸಲೇಬೇಕಾಗುತ್ತದೆ.

ಪಂಜಾಬ್ ಕಿಂಗ್ಸ್ ತಂಡ: ಅಥರ್ವ ಟೈಡೆ, ಶಿಖರ್ ಧವನ್(ನಾಯಕ), ಮ್ಯಾಥ್ಯೂ ಶಾರ್ಟ್, ಹರ್‌ಪ್ರೀತ್ ಸಿಂಗ್ ಭಾಟಿಯಾ, ಸಿಕಂದರ್ ರಾಝ, ಸ್ಯಾಮ್ ಕರನ್, ಜಿತೇಶ್ ಶರ್ಮಾ(ವಿಕೆಟ್ ಕೀಪರ್), ಶಾರುಖ್ ಖಾನ್, ಹರ್‌ಪ್ರೀತ್ ಬ್ರಾರ್, ಕಗಿಸೊ ರಬಾಡ, ರಾಹುಲ್ ಚಾಹರ್, ಅರ್ಶ್‌ದೀಪ್ ಸಿಂಗ್, ಪ್ರಭ್‌ಸಿಮ್ರಾನ್ ಸಿಂಗ್, ನಾಥನ್ ಎಲ್ಲಿಸ್, ಮೋಹಿತ್ ರಥಿ, ರಿಷಿ ಧವನ್, ಭಾನುಕಾ ರಾಜಪಕ್ಸೆ, ಗುರ್ನೂರ್ ಬ್ರಾರ್, ಬಲ್ತೇಜ್ ಸಿಂಗ್, ಲಿಯಾಮ್ ಲಿವಿಂಗ್‌ಸ್ಟೋನ್, ವಿಧ್ವತ್ ಕಾವೇರಪ್ಪ, ಶಿವಂ ಸಿಂಗ್.

ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ: ವಿರಾಟ್ ಕೊಹ್ಲಿ, ಫಾಫ್ ಡು ಪ್ಲೆಸಿಸ್ (ನಾಯಕ), ಮಹಿಪಾಲ್ ಲೊಮ್ರೊರ್, ಗ್ಲೆನ್ ಮ್ಯಾಕ್ಸ್‌ವೆಲ್, ಶಹಬಾಜ್ ಅಹ್ಮದ್, ದಿನೇಶ್ ಕಾರ್ತಿಕ್ (ವಿಕೆಟ್ ಕೀಪರ್), ವನಿಂದು ಹಸರಂಗ, ಹರ್ಷಲ್ ಪಟೇಲ್, ವೇಯ್ನ್ ಪಾರ್ನೆಲ್, ವಿಜಯ್‌ಕುಮಾರ್ ವೈಶಾಕ್, ಮೊಹಮ್ಮದ್ ಸಿರಾಜ್, ಸುಯಶ್ ಪ್ರಭುದೇಸಾಯಿ , ಆಕಾಶ್ ದೀಪ್, ಕರ್ಣ್ ಶರ್ಮಾ, ಅನುಜ್ ರಾವತ್, ಮನೋಜ್ ಭಾಂಡಗೆ, ಮೈಕೆಲ್ ಬ್ರೇಸ್‌ವೆಲ್, ಫಿನ್ ಅಲೆನ್, ಸಿದ್ದಾರ್ಥ್ ಕೌಲ್, ರಾಜನ್ ಕುಮಾರ್, ಅವಿನಾಶ್ ಸಿಂಗ್, ಹಿಮಾಂಶು ಶರ್ಮಾ, ಸೋನು ಯಾದವ್.
