- Kannada News Photo gallery Cricket photos IPL 2023 RCB star Glenn Maxwells wife announces couple is expecting their first child
IPL 2023: ಐಪಿಎಲ್ ನಡುವೆ ಸಿಹಿ ಸುದ್ದಿ ನೀಡಿದ ಗ್ಲೆನ್ ಮ್ಯಾಕ್ಸ್‌ವೆಲ್ ದಂಪತಿಗಳು
IPL 2023: ಸದ್ಯ 16ನೇ ಆವೃತ್ತಿಯ ಐಪಿಎಲ್ನಲ್ಲಿ ಆರ್ಸಿಬಿ ಪರ ಅಬ್ಬರಿಸುತ್ತಿರುವ ಆಸೀಸ್ ಆಲ್‌ರೌಂಡರ್ ಗ್ಲೆನ್ ಮ್ಯಾಕ್ಸ್‌ವೆಲ್ ದಂಪತಿಗಳು ತಮ್ಮ ಅಭಿಮಾನಿಗಳಿಗೆ ಸಿಹಿ ಸುದ್ದಿಯೊಂದನ್ನು ನೀಡಿದ್ದಾರೆ.
Updated on: May 11, 2023 | 5:19 PM

ಸದ್ಯ 16ನೇ ಆವೃತ್ತಿಯ ಐಪಿಎಲ್ನಲ್ಲಿ ಆರ್ಸಿಬಿ ಪರ ಅಬ್ಬರಿಸುತ್ತಿರುವ ಆಸೀಸ್ ಆಲ್‌ರೌಂಡರ್ ಗ್ಲೆನ್ ಮ್ಯಾಕ್ಸ್‌ವೆಲ್ ದಂಪತಿಗಳು ತಮ್ಮ ಅಭಿಮಾನಿಗಳಿಗೆ ಸಿಹಿ ಸುದ್ದಿಯೊಂದನ್ನು ನೀಡಿದ್ದಾರೆ.

ಕಳೆದ ವರ್ಷ ಮಾರ್ಚ್ 18 ರಂದು ವೈವಾಹಿಕ ಜೀವನಕ್ಕೆ ಕಾಲಿರಿಸಿದ್ದ ಭಾರತೀಯ ಮೂಲದ ವಿನಿ ರಾಮನ್ ಹಾಗೂ ಆಸ್ಟ್ರೇಲಿಯಾ ಮೂಲದ ಕ್ರಿಕೆಟರ್ ಗ್ಲೆನ್ ಮ್ಯಾಕ್ಸ್‌ವೆಲ್ ತಮ್ಮ ಮೊದಲ ಮಗುವಿನ ನಿರೀಕ್ಷೆಯಲ್ಲಿದ್ದಾರೆ.

ಸ್ವತಃ ಈ ವಿಚಾರವನ್ನು ಮ್ಯಾಕ್ಸ್‌ವೆಲ್ ಅವರ ಪತ್ನಿ ವಿನಿ ರಾಮನ್ ತಮ್ಮ ಸೋಶಿಯಲ್ ಮೀಡಿಯಾ ಖಾತೆಯಲ್ಲಿ ಹಂಚಿಕೊಂಡಿದ್ದು, ಮುಂದಿನ ಸೆಪ್ಟೆಂಬರ್‌ನಲ್ಲಿ ನಮ್ಮ ಮೊದಲ ಮಗುವಿನ ನಿರೀಕ್ಷೆಯಲ್ಲಿದ್ದೇವೆ ಎಂದು ಬರೆದುಕೊಂಡಿದ್ದಾರೆ.

ಆಸ್ಟ್ರೇಲಿಯಾದ ಸ್ಟಾರ್ ಆಲ್‌ರೌಂಡರ್ ಗ್ಲೆನ್ ಮ್ಯಾಕ್ಸ್‌ವೆಲ್ ಹಾಗೂ ಭಾರತೀಯ ಮೂಲದ ವಿನಿ ರಾಮನ್ 5 ವರ್ಷಗಳ ಡೇಟಿಂಗ್ ನಂತರ ಕಳೆದ ವರ್ಷ ವೈವಾಹಿಕ ಜೀವನಕ್ಕೆ ಕಾಲಿರಿಸಿದ್ದರು. ವಿನಿ ತಮಿಳು ಬ್ರಾಹ್ಮಣ ಕುಟುಂಬದ ಮಗಳಾಗಿದ್ದು ಅವರು ಚೆನ್ನೈ ಮೂಲದವರಾಗಿದ್ದು, ಆಸ್ಟ್ರೇಲಿಯಾದಲ್ಲಿ ನೆಲೆ ನಿಂತಿದ್ದಾರೆ. ವಿನ್ನಿ ವೃತ್ತಿಯಲ್ಲಿ ವೈದ್ಯೆಯಾಗಿದ್ದಾರೆ.

ಇನ್ನು ಐಪಿಎಲ್ನಲ್ಲಿ ಅದ್ಭುತ ಪ್ರದರ್ಶನ ನೀಡುತ್ತಿರುವ ಗ್ಲೆನ್ ಮ್ಯಾಕ್ಸ್‌ವೆಲ್ ಆರ್ಸಿಬಿ ಬ್ಯಾಟಿಂಗ್ ವಿಭಾಗದ ಬೆನ್ನೇಲುಬಾಗಿದ್ದಾರೆ. ಆಡಿರುವ 11 ಪಂದ್ಯಗಳಲ್ಲಿ 330 ರನ್ ಕಲೆ ಹಾಕಿ ಆರೆಂಜ್ ಕ್ಯಾಪ್ ರೇಸ್ನಲ್ಲಿದ್ದಾರೆ.



















