IPL 2023: ಐಪಿಎಲ್ನ 60ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ರಾಜಸ್ಥಾನ್ ರಾಯಲ್ಸ್ ತಂಡಗಳು ಮುಖಾಮುಖಿಯಾಗಲಿದೆ. ಜೈಪುರದಲ್ಲಿ ನಡೆಯಲಿರುವ ಈ ಪಂದ್ಯದಲ್ಲಿ ಆರ್ಸಿಬಿ ಪಾಲಿಗೆ ಗೆಲುವು ಅನಿವಾರ್ಯ.
ಏಕೆಂದರೆ ಪ್ಲೇಆಫ್ ರೇಸ್ನಲ್ಲಿ ಉಳಿಯಬೇಕಿದ್ದರೆ ಆರ್ಸಿಬಿ ತಂಡವು ರಾಜಸ್ಥಾನ್ ರಾಯಲ್ಸ್ ತಂಡವನ್ನು ಸೋಲಿಸಲೇಬೇಕು. ಏಕೆಂದರೆ ಆರ್ಆರ್ ತಂಡವು 12 ಪಂದ್ಯಗಳಲ್ಲಿ ಒಟ್ಟು 12 ಪಾಯಿಂಟ್ಸ್ ಕಲೆಹಾಕಿದೆ. ಆರ್ಆರ್ ತಂಡಕ್ಕೆ ಇನ್ನುಳಿದಿರುವುದು 2 ಎರಡು ಪಂದ್ಯಗಳು ಮಾತ್ರ.
ಈ ಎರಡು ಪಂದ್ಯಗಳಲ್ಲಿ ಒಂದು ಪಂದ್ಯವನ್ನು ಆರ್ಸಿಬಿ ವಿರುದ್ಧ ಆಡುತ್ತಿದೆ. ಈ ಪಂದ್ಯದಲ್ಲಿ ಆರ್ಸಿಬಿ ಜಯ ಸಾಧಿಸಿದರೆ ರಾಜಸ್ಥಾನ್ ರಾಯಲ್ಸ್ ಪ್ಲೇಆಫ್ ರೇಸ್ನಿಂದ ಬಹುತೇಕ ಹೊರಬಿದ್ದಂತಾಗಲಿದೆ.
ಏಕೆಂದರೆ ಆರ್ಸಿಬಿ ವಿರುದ್ಧ ಆರ್ಆರ್ ಸೋತು, ಕೊನೆಯ ಪಂದ್ಯದಲ್ಲಿ ಗೆದ್ದರೂ ಒಟ್ಟು 14 ಪಾಯಿಂಟ್ಸ್ ಮಾತ್ರ ಆಗಲಿದೆ. ಇತ್ತ ಆರ್ಸಿಬಿ ತಂಡವು ರಾಜಸ್ಥಾನ್ ರಾಯಲ್ಸ್ ವಿರುದ್ಧ ಗೆದ್ದ ಬಳಿಕ, ಉಳಿದೆರಡು ಪಂದ್ಯಗಳಲ್ಲಿ ಜಯ ಸಾಧಿಸಿದರೆ 16 ಅಂಕಗಳೊಂದಿಗೆ ಪ್ಲೇಆಫ್ ಪ್ರವೇಶಿಸುವ ಅವಕಾಶ ಇರಲಿದೆ.
ಹೀಗಾಗಿಯೇ ರಾಜಸ್ಥಾನ್ ರಾಯಲ್ಸ್ ವಿರುದ್ಧದ ಪಂದ್ಯವು ಆರ್ಸಿಬಿ ಪಾಲಿಗೆ ಮಾಡು ಇಲ್ಲವೇ ಮಡಿ ಪಂದ್ಯ. ಒಂದು ವೇಳೆ ಆರ್ಸಿಬಿ ಸೋತರೆ ರಾಜಸ್ಥಾನ್ ರಾಯಲ್ಸ್ಗೆ ಪ್ಲೇಆಫ್ ಪ್ರವೇಶಿಸುವ ಅವಕಾಶ ಇರಲಿದೆ. ಹಾಗಾಗಿ ಪ್ಲೇಆಫ್ ರೇಸ್ನಲ್ಲಿರುವ ಉಭಯ ತಂಡಗಳಿಗೂ ಇದು ನಾಕೌಟ್ ಪಂದ್ಯ ಎಂದರೆ ತಪ್ಪಾಗಲಾರದು.
RCB ತಂಡ ಹೀಗಿದೆ: ಫಾಫ್ ಡುಪ್ಲೆಸಿಸ್ (ನಾಯಕ), ವಿರಾಟ್ ಕೊಹ್ಲಿ, ಮೈಕೆಲ್ ಬ್ರೇಸ್ವೆಲ್, ದಿನೇಶ್ ಕಾರ್ತಿಕ್, ಅನೂಜ್ ರಾವತ್, ಫಿನ್ ಅಲೆನ್, ಜೋಶ್ ಹ್ಯಾಝಲ್ವುಡ್, ಮೊಹಮ್ಮದ್ ಸಿರಾಜ್, ಕರ್ಣ್ ಶರ್ಮಾ, ಸಿದ್ಧಾರ್ಥ್ ಕೌಲ್, ಹಿಮಾಂಶು ಶರ್ಮಾ, ರಜನ್ ಕುಮಾರ್, ಅವಿನಾಶ್ ಸಿಂಗ್, ಗ್ಲೆನ್ ಮ್ಯಾಕ್ಸ್ವೆಲ್, ವನಿಂದು ಹಸರಂಗ, ಮಹಿಪಾಲ್ ಲೋಮ್ರರ್, ಶಹಬಾಝ್ ಅಹ್ಮದ್, ಹರ್ಷಲ್ ಪಟೇಲ್, ಆಕಾಶ್ ದೀಪ್, ಕೇದಾರ್ ಜಾಧವ್, ಸುಯಶ್ ಪ್ರಭುದೇಸಾಯಿ, ಮನೋಜ್ ಭಾಂಡಗೆ, ಸೋನು ಯಾದವ್, ವೇಯ್ನ್ ಪಾರ್ನೆಲ್, ವೈಶಾಕ್ ವಿಜಯಕುಮಾರ್.