IPL 2023: LSG ವಿರುದ್ಧದ ಪಂದ್ಯಕ್ಕೆ RCB ತಂಡದ ಇಬ್ಬರು ಆಟಗಾರರು ಅಲಭ್ಯ..?

| Updated By: ಝಾಹಿರ್ ಯೂಸುಫ್

Updated on: Apr 09, 2023 | 11:07 PM

IPL 2023 Kannada: RCB ತಂಡ ಹೀಗಿದೆ: ಫಾಫ್ ಡುಪ್ಲೆಸಿಸ್ (ನಾಯಕ), ವಿರಾಟ್ ಕೊಹ್ಲಿ, ರಜತ್ ಪಾಟಿದಾರ್, ಮೈಕೆಲ್ ಬ್ರೇಸ್​ವೆಲ್​, ದಿನೇಶ್ ಕಾರ್ತಿಕ್, ಅನೂಜ್ ರಾವತ್, ಫಿನ್ ಅಲೆನ್, ಜೋಶ್ ಹ್ಯಾಝಲ್​ವುಡ್​, ಮೊಹಮ್ಮದ್ ಸಿರಾಜ್, ಕರ್ಣ್​ ಶರ್ಮಾ, ಸಿದ್ಧಾರ್ಥ್​ ಕೌಲ್.

1 / 8
IPL 2023 RCB vs LSG: ಏಪ್ರಿಲ್ 10 ರಂದು ಬೆಂಗಳೂರಿನ ಚಿನ್ನಸ್ವಾಮಿ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯಲಿರುವ ಐಪಿಎಲ್​ನ 15ನೇ ಪಂದ್ಯದಲ್ಲಿ ಆರ್​ಸಿಬಿ ತಂಡವು ಲಕ್ನೋ ಸೂಪರ್ ಜೈಂಟ್ಸ್ ತಂಡವನ್ನು ಎದುರಿಸಲಿದೆ. ಆಡಿರುವ 2 ಪಂದ್ಯಗಳಲ್ಲಿ 1 ಸೋಲು ಒಂದು ಗೆಲುವಿನೊಂದಿಗೆ ಪಾಯಿಂಟ್​ ಟೇಬಲ್​ನಲ್ಲಿ 7ನೇ ಸ್ಥಾನದಲ್ಲಿರುವ ಆರ್​ಸಿಬಿ ಈ ಪಂದ್ಯದ ಮೂಲಕ ಕಂಬ್ಯಾಕ್ ಮಾಡುವ ವಿಶ್ವಾಸದಲ್ಲಿದೆ.

2 / 8
ಆದರೆ ಈ ಪಂದ್ಯಕ್ಕೂ ಆರ್​ಸಿಬಿ ತಂಡದ ಇಬ್ಬರು ಆಟಗಾರರು ಅಲಭ್ಯರಾಗುವುದು ಬಹುತೇಕ ಖಚಿತವಾಗಿದೆ. ಏಕೆಂದರೆ ಆರ್​ಸಿಬಿ ತಂಡದಲ್ಲಿರುವ ಆಸ್ಟ್ರೇಲಿಯಾ ವೇಗಿ ಜೋಶ್ ಹ್ಯಾಝಲ್​ವುಡ್ ಇನ್ನೂ ಕೂಡ ತಂಡವನ್ನು ಸೇರಿಕೊಂಡಿಲ್ಲ.

3 / 8
ಗಾಯದ ಕಾರಣ ಆಸ್ಟ್ರೇಲಿಯಾದಲ್ಲೇ ಉಳಿದಿರುವ ಹ್ಯಾಝಲ್​ವುಡ್ ಏಪ್ರಿಲ್ 14 ರಂದು ಆರ್​ಸಿಬಿ ಬಳಗವನ್ನು ಕೂಡಿಕೊಳ್ಳಲಿದ್ದಾರೆ. ಹೀಗಾಗಿ ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧದ ಪಂದ್ಯದ ಆಯ್ಕೆಗೆ ಅವರು ಲಭ್ಯರಿಲ್ಲ.

4 / 8
ಇನ್ನು ನ್ಯೂಜಿಲೆಂಡ್ ವಿರುದ್ಧ ಸರಣಿ ಮುಗಿಸಿರುವ ಶ್ರೀಲಂಕಾ ಸ್ಪಿನ್ನರ್ ವನಿಂದು ಹಸರಂಗ ಸೋಮವಾರ ಬೆಂಗಳೂರಿಗೆ ಆಗಮಿಸಲಿದ್ದಾರೆ. ಅಂದರೆ ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧದ ಪಂದ್ಯಕ್ಕೂ ಮುನ್ನ ಅವರು ತಂಡವನ್ನು ಸೇರಿಕೊಳ್ಳಲಿದ್ದಾರೆ.

5 / 8
IPL 2023: LSG ವಿರುದ್ಧದ ಪಂದ್ಯಕ್ಕೆ RCB ತಂಡದ ಇಬ್ಬರು ಆಟಗಾರರು ಅಲಭ್ಯ..?

6 / 8
ಇದಾಗ್ಯೂ ಅವರು ಕಣಕ್ಕಿಳಿಯುತ್ತಾರೆ ಎಂಬುದರ ಬಗ್ಗೆ ಖಚಿತತೆ ಇಲ್ಲ. ಏಕೆಂದರೆ ದೀರ್ಘ ಪ್ರಯಾಣದ ಬಳಿಕ ಹಸರಂಗ ವಿಶ್ರಾಂತಿ ಬಯಸಿದರೆ ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧದ ಪಂದ್ಯದಿಂದ ಹೊರಗುಳಿಯಲಿದ್ದಾರೆ. ಅಲ್ಲದೆ ಮುಂದಿನ ಪಂದ್ಯದಲ್ಲಿ ಕಣಕ್ಕಿಳಿಯುವ ಸಾಧ್ಯತೆಯಿದೆ.

7 / 8
ಅದರಂತೆ ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧದ ಪಂದ್ಯದಿಂದ ಜೋಶ್ ಹ್ಯಾಝಲ್​ವುಡ್ ಹೊರಗುಳಿದಿರುವುದು ಖಚಿತವಾಗಿದೆ. ಇನ್ನು ವನಿಂದು ಹಸರಂಗ ತಂಡವನ್ನು ಕೂಡಿಕೊಂಡ ಬಳಿಕವಷ್ಟೇ ತಮ್ಮ ನಿರ್ಧಾರ ಪ್ರಕಟಿಸಲಿದ್ದಾರೆ. ಹೀಗಾಗಿ ಈ ಇಬ್ಬರು ಆಟಗಾರರು ನಾಳಿನ (ಏ.10) ಪಂದ್ಯಕ್ಕೆ ಅಲಭ್ಯರಾಗುವುದು ಬಹುತೇಕ ಖಚಿತ ಎಂದೇ ಹೇಳಬಹುದು.

8 / 8
RCB ತಂಡ ಹೀಗಿದೆ: ಫಾಫ್ ಡುಪ್ಲೆಸಿಸ್ (ನಾಯಕ), ವಿರಾಟ್ ಕೊಹ್ಲಿ, ಮೈಕೆಲ್ ಬ್ರೇಸ್​ವೆಲ್​, ದಿನೇಶ್ ಕಾರ್ತಿಕ್, ಅನೂಜ್ ರಾವತ್, ಫಿನ್ ಅಲೆನ್, ಜೋಶ್ ಹ್ಯಾಝಲ್​ವುಡ್​, ಮೊಹಮ್ಮದ್ ಸಿರಾಜ್, ಕರ್ಣ್​ ಶರ್ಮಾ, ಸಿದ್ಧಾರ್ಥ್​ ಕೌಲ್, ಹಿಮಾಂಶು ಶರ್ಮಾ, ರಜನ್ ಕುಮಾರ್, ಅವಿನಾಶ್ ಸಿಂಗ್, ಗ್ಲೆನ್ ಮ್ಯಾಕ್ಸ್​ವೆಲ್, ವನಿಂದು ಹಸರಂಗ, ಮಹಿಪಾಲ್ ಲೋಮ್ರರ್, ಶಹಬಾಝ್ ಅಹ್ಮದ್, ಹರ್ಷಲ್ ಪಟೇಲ್, ಆಕಾಶ್ ದೀಪ್, ಡೇವಿಡ್ ವಿಲ್ಲಿ, ಸುಯಶ್ ಪ್ರಭುದೇಸಾಯಿ, ಮನೋಜ್ ಭಾಂಡಗೆ, ಸೋನು ಯಾದವ್, ವೇಯ್ನ್ ಪಾರ್ನೆಲ್, ವೈಶಾಖ್ ವಿಜಯಕುಮಾರ್.