
IPL 2023: ಐಪಿಎಲ್ ಆರಂಭಕ್ಕೆ ಇನ್ನು ದಿನಗಳು ಮಾತ್ರ ಉಳಿದಿದೆ. ಶುಕ್ರವಾರದಿಂದ ಶುರುವಾಗಲಿರುವ ಐಪಿಎಲ್ ಸೀಸನ್ 16 ರ ಮೊದಲ ಪಂದ್ಯದಲ್ಲಿ ಸಿಎಸ್ಕೆ ಹಾಗೂ ಗುಜರಾತ್ ಟೈಟಾನ್ಸ್ ತಂಡಗಳು ಮುಖಾಮುಖಿಯಾಗಲಿದೆ.

ಇನ್ನು ಆರ್ಸಿಬಿ ತಂಡವು ತನ್ನ ಮೊದಲ ಪಂದ್ಯವನ್ನು ಏಪ್ರಿಲ್ 2 ರಂದು ಮುಂಬೈ ಇಂಡಿಯನ್ಸ್ ವಿರುದ್ಧ ಆಡಲಿದೆ. ಆದರೆ ಈ ಪಂದ್ಯಕ್ಕೆ ಆರ್ಸಿಬಿ ತಂಡದ ಮೂವರು ಆಟಗಾರರು ಅಲಭ್ಯರಾಗುವ ಸಾಧ್ಯತೆಯಿದೆ.

ಹೌದು, ಆರ್ಸಿಬಿ ತಂಡದ ಮಧ್ಯಮ ಕ್ರಮಾಂಕದ ಬ್ಯಾಟ್ಸ್ಮನ್ ರಜತ್ ಪಾಟಿದಾರ್ ಪಾದದ ನೋವಿನಿಂದ ಬಳಲುತ್ತಿದ್ದಾರೆ. ಹೀಗಾಗಿ ಅವರು ಮುಂಬೈ ಇಂಡಿಯನ್ಸ್ ವಿರುದ್ಧದ ಪಂದ್ಯದಲ್ಲಿ ಕಣಕ್ಕಿಳಿಯುವುದು ಅನುಮಾನ.

ಇನ್ನು ವನಿಂದು ಹಸರಂಗ ಕೂಡ ಮೊದಲ ಪಂದ್ಯಕ್ಕೆ ಅಲಭ್ಯರಾಗುವುದು ಬಹುತೇಕ ಖಚಿತವಾಗಿದೆ. ಹಸರಂಗ ಸದ್ಯ ನ್ಯೂಜಿಲೆಂಡ್ ವಿರುದ್ಧ ಏಕದಿನ ಸರಣಿ ಆಡುತ್ತಿದ್ದಾರೆ. ಈ ಸರಣಿಯ ಬಳಿಕ ಶ್ರೀಲಂಕಾ ಟಿ20 ಸರಣಿ ಕೂಡ ಆಡಬೇಕಿದೆ. ಹೀಗಾಗಿ ವನಿಂದು ಹಸರಂಗ ಆರ್ಸಿಬಿಯ ಕೆಲ ಪಂದ್ಯಗಳಿಗೆ ಅಲಭ್ಯರಾಗಲಿದ್ದಾರೆ.

ಹಾಗೆಯೇ ಆರ್ಸಿಬಿ ತಂಡದ ವೇಗಿ ಜೋಶ್ ಹ್ಯಾಝಲ್ವುಡ್ ಇನ್ನೂ ಕೂಡ ತಂಡವನ್ನು ಸೇರಿಕೊಂಡಿಲ್ಲ. ಕಾಲಿನ ಗಾಯದ ಸಮಸ್ಯೆಯ ಕಾರಣ ಹ್ಯಾಝಲ್ವುಡ್ ಟೀಮ್ ಇಂಡಿಯಾ ವಿರುದ್ಧದ ಸರಣಿಯಿಂದ ಹೊರಗುಳಿದಿದ್ದರು. ಇದೀಗ ವಾರಗಳೇ ಕಳೆದರೂ ಅವರು ಸಂಪೂರ್ಣ ಚೇತರಿಸಿಕೊಂಡಿಲ್ಲ. ಹೀಗಾಗಿ ಜೋಶ್ ಹ್ಯಾಝಲ್ವುಡ್ ಕೂಡ ಆರ್ಸಿಬಿ ತಂಡದ ಕೆಲ ಪಂದ್ಯಗಳಿಗೆ ಅಲಭ್ಯರಾಗುವ ಸಾಧ್ಯತೆಯಿದೆ.

ಒಟ್ಟಿನಲ್ಲಿ ಆರ್ಸಿಬಿ ತಂಡವು ತನ್ನ ಮೊದಲ ಪಂದ್ಯದಲ್ಲಿ ಮೂವರು ಸ್ಟಾರ್ ಆಟಗಾರರ ಸೇವೆಯನ್ನು ಕಳೆದುಕೊಳ್ಳುವ ಸಾಧ್ಯತೆ ಹೆಚ್ಚಿದೆ. ಇದು ಆರ್ಸಿಬಿ ತಂಡದ ಪಾಲಿಗೆ ಹಿನ್ನಡೆಯಾಗಲಿದೆಯಾ ಕಾದು ನೋಡಬೇಕಿದೆ.

RCB ತಂಡ ಹೀಗಿದೆ: ಫಾಫ್ ಡುಪ್ಲೆಸಿಸ್ (ನಾಯಕ), ವಿರಾಟ್ ಕೊಹ್ಲಿ, ಮೈಕೆಲ್ ಬ್ರೇಸ್ವೆಲ್, ದಿನೇಶ್ ಕಾರ್ತಿಕ್, ಅನೂಜ್ ರಾವತ್, ಫಿನ್ ಅಲೆನ್, ಜೋಶ್ ಹ್ಯಾಝಲ್ವುಡ್, ಮೊಹಮ್ಮದ್ ಸಿರಾಜ್, ಕರ್ಣ್ ಶರ್ಮಾ, ಸಿದ್ಧಾರ್ಥ್ ಕೌಲ್, ಹಿಮಾಂಶು ಶರ್ಮಾ, ರಜನ್ ಕುಮಾರ್, ಅವಿನಾಶ್ ಸಿಂಗ್, ಗ್ಲೆನ್ ಮ್ಯಾಕ್ಸ್ವೆಲ್, ವನಿಂದು ಹಸರಂಗ, ಮಹಿಪಾಲ್ ಲೋಮ್ರರ್, ಶಹಬಾಝ್ ಅಹ್ಮದ್, ಹರ್ಷಲ್ ಪಟೇಲ್, ಆಕಾಶ್ ದೀಪ್, ಡೇವಿಡ್ ವಿಲ್ಲಿ, ಸುಯಶ್ ಪ್ರಭುದೇಸಾಯಿ, ಮನೋಜ್ ಭಾಂಡಗೆ, ಸೋನು ಯಾದವ್, ವೇಯ್ನ್ ಪಾರ್ನೆಲ್, ವೈಶಾಕ್ ವಿಜಯಕುಮಾರ್.