IPL 2023: RCB ಅಭಿಮಾನಿಗಳಿಗೆ ಗುಡ್​ ನ್ಯೂಸ್: ಸ್ಟಾರ್ ಆಟಗಾರ ಕಣಕ್ಕಿಳಿಯುವುದು ಖಚಿತ

Edited By:

Updated on: Apr 01, 2023 | 11:08 PM

IPL 2023 RCB Playing XI: ಪಾದದ ನೋವಿನಿಂದ ಬಳಲುತ್ತಿರುವ ರಜತ್ ಪಾಟಿದಾರ್ ಹಾಗೂ ಮೊಣಕಾಲಿನ ನೋವಿಗೆ ಒಳಗಾಗಿರುವ ಜೋಶ್ ಹ್ಯಾಝಲ್​ವುಡ್ ಮೊದಲ ಪಂದ್ಯದಲ್ಲಿ ಕಾಣಿಸಿಕೊಳ್ಳುವುದಿಲ್ಲ.

1 / 6
IPL 2023 RCB vs MI: ಭಾನುವಾರ ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಮುಂಬೈ ಇಂಡಿಯನ್ಸ್ ತಂಡಗಳು ಮುಖಾಮುಖಿಯಾಗಲಿದೆ. ಆದರೆ ಈ ಪಂದ್ಯಕ್ಕೆ ಆರ್​ಸಿಬಿ ತಂಡದ ಮೂವರು ಸ್ಟಾರ್ ಆಟಗಾರರು ಅಲಭ್ಯರಾಗಲಿದ್ದಾರೆ.

IPL 2023 RCB vs MI: ಭಾನುವಾರ ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಮುಂಬೈ ಇಂಡಿಯನ್ಸ್ ತಂಡಗಳು ಮುಖಾಮುಖಿಯಾಗಲಿದೆ. ಆದರೆ ಈ ಪಂದ್ಯಕ್ಕೆ ಆರ್​ಸಿಬಿ ತಂಡದ ಮೂವರು ಸ್ಟಾರ್ ಆಟಗಾರರು ಅಲಭ್ಯರಾಗಲಿದ್ದಾರೆ.

2 / 6

ಪಾದದ ನೋವಿನಿಂದ ಬಳಲುತ್ತಿರುವ ರಜತ್ ಪಾಟಿದಾರ್ ಹಾಗೂ ಮೊಣಕಾಲಿನ ನೋವಿಗೆ ಒಳಗಾಗಿರುವ ಜೋಶ್ ಹ್ಯಾಝಲ್​ವುಡ್ ಮೊದಲ ಪಂದ್ಯದಲ್ಲಿ ಕಾಣಿಸಿಕೊಳ್ಳುವುದಿಲ್ಲ. ಹಾಗೆಯೇ ನ್ಯೂಜಿಲೆಂಡ್ ವಿರುದ್ಧ ಸರಣಿ ಆಡುತ್ತಿರುವ ಶ್ರೀಲಂಕಾ ವನಿಂದು ಹಸರಂಗ ಕೂಡ ಮುಂಬೈ ಇಂಡಿಯನ್ಸ್ ವಿರುದ್ಧ ಆಡುತ್ತಿಲ್ಲ.

3 / 6

ಆರ್​ಸಿಬಿ ಪರ ಮಧ್ಯಮ ಕ್ರಮಾಂಕದಲ್ಲಿ ಬ್ಯಾಟ್ ಬೀಸಿದ್ದ ಮ್ಯಾಕ್ಸ್​ವೆಲ್ ಈ ಬಾರಿ 14 ಇನಿಂಗ್ಸ್​ಗಳಲ್ಲಿ 400 ರನ್ ಬಾರಿಸಿದ್ದರು. ಅದು ಕೂಡ 183.48 ರ ಸ್ಟ್ರೈಕ್ ರೇಟ್​ನಲ್ಲಿ ಎಂಬುದು ವಿಶೇಷ.

4 / 6

ಇನ್ನು ಜೋಶ್ ಹ್ಯಾಝಲ್​ವುಡ್ ಬದಲಿಗೆ ಆರ್​ಸಿಬಿ ಪ್ಲೇಯಿಂಗ್ ಇಲೆವೆನ್​ನಲ್ಲಿ ಇಂಗ್ಲೆಂಡ್ ವೇಗಿ ರೀಸ್ ಟೋಪ್ಲಿಗೆ ಸ್ಥಾನ ಸಿಗಲಿದೆ. ಇನ್ನು ಹಸರಂಗ ಬದಲಿಗೆ ಮೈಕಲ್ ಬ್ರೇಸ್​ವೆಲ್​ಗೆ ಚಾನ್ಸ್ ಸಿಕ್ಕರೂ ಅಚ್ಚರಿಪಡಬೇಕಿಲ್ಲ.

5 / 6

ಒಟ್ಟಿನಲ್ಲಿ ತವರು ಮೈದಾನದಲ್ಲಿ ನಡೆಯಲಿರುವ ಮೊದಲ ಪಂದ್ಯದಲ್ಲಿ ಮುಂಬೈ ಇಂಡಯನ್ಸ್​ಗೆ ಸೋಲುಣಿಸಿ ರಾಯಲ್ ಚಾಲೆಂಜರ್ಸ್​ ಬೆಂಗಳೂರು ತಂಡ ಶುಭಾರಂಭ ಮಾಡುವ ಇರಾದೆಯಲ್ಲಿದೆ.

6 / 6

RCB ತಂಡ ಹೀಗಿದೆ: ಫಾಫ್ ಡುಪ್ಲೆಸಿಸ್ (ನಾಯಕ), ವಿರಾಟ್ ಕೊಹ್ಲಿ, ರಜತ್ ಪಾಟಿದಾರ್, ಮೈಕೆಲ್ ಬ್ರೇಸ್​ವೆಲ್​, ದಿನೇಶ್ ಕಾರ್ತಿಕ್, ಅನೂಜ್ ರಾವತ್, ಫಿನ್ ಅಲೆನ್, ಜೋಶ್ ಹ್ಯಾಝಲ್​ವುಡ್​, ಮೊಹಮ್ಮದ್ ಸಿರಾಜ್, ಕರ್ಣ್​ ಶರ್ಮಾ, ಸಿದ್ಧಾರ್ಥ್​ ಕೌಲ್, ರೀಸ್ ಟೋಪ್ಲಿ, ಹಿಮಾಂಶು ಶರ್ಮಾ, ರಜನ್ ಕುಮಾರ್, ಅವಿನಾಶ್ ಸಿಂಗ್, ಗ್ಲೆನ್ ಮ್ಯಾಕ್ಸ್​ವೆಲ್, ವನಿಂದು ಹಸರಂಗ, ಮಹಿಪಾಲ್ ಲೋಮ್ರರ್, ಶಹಬಾಝ್ ಅಹ್ಮದ್, ಹರ್ಷಲ್ ಪಟೇಲ್, ಆಕಾಶ್ ದೀಪ್, ಡೇವಿಡ್ ವಿಲ್ಲಿ, ಸುಯಶ್ ಪ್ರಭುದೇಸಾಯಿ, ಮನೋಜ್ ಭಾಂಡಗೆ, ಸೋನು ಯಾದವ್.

TV9 Web

TV9 Kannada

Read More
Loading...
Unable to load recommendations.
Follow Us