RCB ತಂಡದ ಗ್ರೀನ್​ ಗೇಮ್ ಯಾವಾಗ? ಯಾರ ವಿರುದ್ಧ? ಇಲ್ಲಿದೆ ಮಾಹಿತಿ

| Updated By: ಝಾಹಿರ್ ಯೂಸುಫ್

Updated on: Apr 13, 2023 | 8:30 PM

IPL 2023 Kannada: 2011 ರಿಂದ ಐಪಿಎಲ್​ನಲ್ಲಿ ಗೋ ಗ್ರೀನ್ ಅಭಿಯಾನ ಅರಂಭಿಸಿರುವ RCB ಪ್ರತಿ ಸೀಸನ್​ನ ಒಂದು ಪಂದ್ಯದಲ್ಲಿ ಹಸಿರು ಜೆರ್ಸಿಯಲ್ಲಿ ಕಣಕ್ಕಿಳಿಯುತ್ತಾ ಬಂದಿದೆ.

1 / 6
IPL 2023: ಐಪಿಎಲ್​ನ ಮೊದಲ ಪಂದ್ಯದಲ್ಲಿ ಬಲಿಷ್ಠ ಮುಂಬೈ ಇಂಡಿಯನ್ಸ್​ಗೆ ಸೋಲುಣಿಸಿ ಶುಭಾರಂಭ ಮಾಡಿದ್ದ ರೆಡ್ ಆರ್ಮಿ ರಾಯಲ್ ಚಾಲೆಂಜರ್ಸ್​ ಬೆಂಗಳೂರು ಇದೀಗ ಸತತ ಸೋಲುಗಳಿಂದ ಕಂಗೆಟ್ಟಿದೆ. ಇದೀಗ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧದ ಪಂದ್ಯಕ್ಕೆ ಸಜ್ಜಾಗಿರುವ ಆರ್​ಸಿಬಿ ಗ್ರೀನ್ ಗೇಮ್​ಗಾಗಿ ಡೇಟ್ ಫಿಕ್ಸ್ ಮಾಡಿದೆ.

2 / 6
ಆರ್​ಸಿಬಿ ತನ್ನ ಮುಂದಿನ ಪಂದ್ಯವನ್ನು ಏಪ್ರಿಲ್ 15 ರಂದು ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಆಡಲಿದೆ. ಆದರೆ ಆರ್​ಸಿಬಿ ಗ್ರೀನ್​ ಜೆರ್ಸಿಯಲ್ಲಿ ಕಣಕ್ಕಿಳಿಯಲಿರುವುದು ಏಪ್ರಿಲ್ 23 ರಂದು. ಅದು ಕೂಡ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಎಂಬುದು ವಿಶೇಷ.

3 / 6
ಏಪ್ರಿಲ್ 23 ರಂದು ರಾಜಸ್ಥಾನ್ ರಾಯಲ್ಸ್ ವಿರುದ್ಧದ ಪಂದ್ಯದಲ್ಲಿ ಆರ್​ಸಿಬಿ ಗ್ರೀನ್ ಜೆರ್ಸಿಯಲ್ಲಿ ಕಣಕ್ಕಿಳಿಯಲಿದೆ. ಈ ಮೂಲಕ ತವರು ಮೈದಾನದಲ್ಲಿ ಆರ್​ಸಿಬಿ ಫ್ರಾಂಚೈಸಿ ಗೋ ಗ್ರೀನ್ ಅಭಿಯಾನ ನಡೆಸಲಿದೆ.

4 / 6
2011 ರಿಂದ ಐಪಿಎಲ್​ನಲ್ಲಿ ಗೋ ಗ್ರೀನ್ ಅಭಿಯಾನ ಅರಂಭಿಸಿರುವ ಆರ್​ಸಿಬಿ ಪ್ರತಿ ಸೀಸನ್​ನ ಒಂದು ಪಂದ್ಯದಲ್ಲಿ ಹಸಿರು ಜೆರ್ಸಿಯಲ್ಲಿ ಕಣಕ್ಕಿಳಿಯುತ್ತಾ ಬಂದಿದೆ. ಇದರ ಮೂಲ ಉದ್ದೇಶ ಪರಿಸರದ ಬಗ್ಗೆ ಕಾಳಜಿ ಮೂಡಿಸುವುದು. ಅದರಲ್ಲೂ ಮರಗಳನ್ನು ಉಳಿಸಿ-ಬೆಳೆಸಿ ಎಂಬ ಸಂದೇಶ ಸಾರಲು ಆರ್​ಸಿಬಿ ಗ್ರೀನ್ ಜೆರ್ಸಿಯಲ್ಲಿ ಕಣಕ್ಕಿಳಿಯುತ್ತಿದೆ.

5 / 6
ಇದಾಗ್ಯೂ 2021 ರ ಐಪಿಎಲ್​ ವೇಳೆ ಆರ್​ಸಿಬಿ ಗ್ರೀನ್ ಜೆರ್ಸಿ ಬದಲಿಗೆ ಬ್ಲೂ ಜೆರ್ಸಿಯಲ್ಲಿ ಕಣಕ್ಕಿಳಿದಿತ್ತು ಎಂಬುದು ವಿಶೇಷ. ಅಂದು ಕೊರೋನಾ ವಾರಿಯರ್ಸ್​ಗೆ ಗೌರವ ಸೂಚಿಸುವ ಸಲುವಾಗಿ ಆರ್​ಸಿಬಿ ಪಿಪಿಐ ಕಿಟ್​ ಬಣ್ಣದ ಜೆರ್ಸಿಯಲ್ಲಿ ಕೆಕೆಆರ್ ವಿರುದ್ಧ ಪಂದ್ಯವಾಡಿತ್ತು.

6 / 6
ಇದೀಗ 4 ವರ್ಷಗಳ ಬಳಿಕ ಮತ್ತೆ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಆರ್​ಸಿಬಿ ತಂಡವು ಹಸಿರು ಜೆರ್ಸಿಯಲ್ಲಿ ಕಣಕ್ಕಿಳಿಯುತ್ತಿದ್ದು, ಈ ಬಾರಿ ಫಾಫ್ ಡುಪ್ಲೆಸಿಸ್ ಪಡೆಯ ಎದುರಾಳಿ ರಾಜಸ್ಥಾನ್ ರಾಯಲ್ಸ್ ಎಂಬುದಷ್ಟೇ ವ್ಯತ್ಯಾಸ.